Udayavni Special

ರಾಜ್ಯ ಅಮೆಚೂರ್‌ ಕಬಡ್ಡಿ ಸಂಸ್ಥೆಚುನಾವಣೆ: ಅಖಾಡಕ್ಕಿಳಿದ ಬಂಡಾಯ ವೀರರು!

Team Udayavani, Mar 23, 2020, 8:25 AM IST

ರಾಜ್ಯ ಅಮೆಚೂರ್‌ ಕಬಡ್ಡಿ ಸಂಸ್ಥೆಚುನಾವಣೆ

ಬೆಂಗಳೂರು: ಕರ್ನಾಟಕ ರಾಜ್ಯ ಅಮೆಚೂರ್‌ ಕಬಡ್ಡಿ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಅಂತಾರಾಷ್ಟ್ರೀಯ ಕಬಡ್ಡಿಪಟು ಪ್ರಸಾದ್‌ ಬಾಬು ಸ್ಪರ್ಧೆ ಮಾಡಲಿದ್ದಾರೆ.

ಇಂಡೋ ಇಂಟರ್‌ನ್ಯಾಷನಲ್‌ ಕಬಡ್ಡಿ ಲೀಗ್‌ (ಐಐಪಿಕೆಎಲ್‌) ನಂತಹ ದೊಡ್ಡ ಬಂಡಾಯ ಕೂಟ ಹುಟ್ಟು ಹಾಕಿ, ಪ್ರೊ ಕಬಡ್ಡಿಗೆ ಸೆಡ್ಡು ಹೊಡೆದಿದ್ದ ಪ್ರಸಾದ್‌ ಬಾಬು ಭಾರತದ ಕಬಡ್ಡಿಯಲ್ಲಿ ಬಂಡಾಯದ ಬಿರುಗಾಳಿ ಎಬ್ಬಿಸಿದ್ದರು. ಇದೀಗ ರಾಜ್ಯ ಕಬಡ್ಡಿ ಸಂಸ್ಥೆಯ ಚುಕ್ಕಾಣಿ ಹಿಡಿಯಲು ಸಿದ್ಧತೆ ನಡೆಸಿದ್ದಾರೆ.

ಈ ಬಗ್ಗೆ ಉದಯವಾಣಿಗೆ ನೀಡಿದ ಸಂದರ್ಶ ನದಲ್ಲಿ ಪ್ರಸಾದ್‌ ಬಾಬು ಮಾತನಾಡಿದರು. ತಮ್ಮ ಕನಸು, ಕಬಡ್ಡಿ ಏಳಿಗೆಗಾಗಿ ತಲುಪ  ಬೇಕಿರುವ ಗುರಿ, ಜಿಲ್ಲಾಮಟ್ಟದಿಂದಲೂ ಕಬಡ್ಡಿಗೆ ಸಿಗಬೇಕಿರುವ ಬೆಂಬಲ ಸೇರಿದಂತೆ ಹಲವು ವಿಚಾರದ ಬಗ್ಗೆ ಮಾತನಾಡಿದ್ದಾರೆ. ಸಂದರ್ಶನದ ಪೂರ್ಣ ವಿವರ ಇಲ್ಲಿದೆ ನೋಡಿ.

ಅನಿವಾರ್ಯ ಪರಿಸ್ಥಿತಿ: “ರಾಜ್ಯ ಕಬಡ್ಡಿ ಸಂಸ್ಥೆ ಚುನಾವಣೆಗೆ ಸ್ಪರ್ಧೆ ಮಾಡಬಾರದು ಎಂದು ನಿರ್ಧರಿಸಿದ್ದೆ, ಆದರೆ ಕ್ರೀಡಾ ಪಟುಗಳ ಹಿತ  ದೃಷ್ಟಿಯಿಂದ ನನ್ನ ಸ್ಪರ್ಧೆ ಅನಿವಾರ್ಯವಾಗಿದೆ. ರಾಜ್ಯ ಕಬಡ್ಡಿ ಪಟುಗಳಿಗೆ ನ್ಯಾಯ ದೊರಕುತ್ತಿಲ್ಲ, ಈಗಿನ ಪದಾಧಿಕಾರಿಗಳ ದುರಾಡಳಿತದಿಂದಾಗಿ ಪ್ರತಿಭಾವಂತ ಆಟಗಾರರು ನಿರ್ಲಕ್ಷ್ಯಕ್ಕೆ ಒಳಗಾಗಿ ದ್ದಾರೆ. ಇದರಿಂದಾಗಿ ಒಟ್ಟಾರೆ ರಾಜ್ಯದ ಕಬಡ್ಡಿ ಬೆಳವಣಿಗೆ ಕುಂಠಿತವಾಗಿದೆ. ಇದೆಲ್ಲವನ್ನು ಸರಿಪಡಿಸಬೇಕೆಂದು ನಿರ್ಧರಿಸಿರುವೆ’ ಎಂದು ಬಾಬು ತಿಳಿಸಿದರು.

ಪ್ರತಿ ಜಿಲ್ಲೆಗೂ ಅನುದಾನ ಅಗತ್ಯ: “ಬೇರುಮಟ್ಟದಿಂದಲೇ ಕಬಡ್ಡಿ ಬೆಳವಣಿಗೆ ಆಗಬೇಕಿದೆ. ಹಳ್ಳಿಗಳಲ್ಲಿ ಪ್ರತಿಭಾವಂತ ಕಬಡ್ಡಿ ಪಟುಗಳು ಸಿಗುತ್ತಾರೆ, ಅಂತಹವರನ್ನು ಪ್ರೋತ್ಸಾಹಿಸುವ ಅಗತ್ಯತೆ ಇದೆ. ಇದಕ್ಕಾಗಿ ಶಾಲಾಮಟ್ಟದಿಂದಲೇ ತಯಾರಿ ನಡೆಯಬೇಕು, ಪ್ರತೀ ಜಿಲ್ಲೆಗೂ ಅನು ದಾನ ಬಿಡುಗಡೆ ಆಗಬೇಕು, ಅಂತಾರಾಷ್ಟ್ರೀಯ ಪ್ರತಿಭೆ ಗಳನ್ನು ರೂಪಿಸಿ ಅವರಿಗೆ ಒಳ್ಳೆಯ ತರಬೇತಿ ನೀಡುವ ವ್ಯವಸ್ಥೆಯೂ ಆಗಬೇಕು, ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಕಬಡ್ಡಿ ಬೆಳವಣಿಗೆ ಕಂಡಿಲ್ಲ. ಹೆಚ್ಚು ಕೂಟಗಳು ಆಯೋಜಿಸಿದಷ್ಟು ಪ್ರತಿಭಾನ್ವೇಷಣೆಗೆ ವೇದಿಕೆಯಾಗುತ್ತದೆ, ಆದರೆ ರಾಜ್ಯದಲ್ಲಿ ಯಾವುದೇ ಕೂಟಗಳನ್ನು ನಡೆಸುತ್ತಿಲ್ಲ ಎಂಬ ನೋವು ನನ್ನನ್ನು ಕಾಡುತ್ತಿದೆ’ ಎಂದರು ಪ್ರಸಾದ್‌ ಬಾಬು.

ಉದ್ಯೋಗಕ್ಕೆ ಮೊದಲ ಆದ್ಯತೆ: “ಕಬಡ್ಡಿ ಆಟಗಾರರಲ್ಲಿ ಹೆಚ್ಚಿನವರಿಗೆ ಉದ್ಯೋಗವಿಲ್ಲ, ಬಡತನದ ಹಿನ್ನೆಲೆಯಿಂದ ಬಂದ ಆಟಗಾರರನ್ನು ತೀರ ನಿರ್ಲಕ್ಷ್ಯವಾಗಿ ಕಾಣಲಾಗುತ್ತಿದೆ. ಮೊದ ಲಿಗೆ ಎಲ್ಲ ರೀತಿಯ ತಾರತಮ್ಯಗಳು ದೂರ ವಾಗಬೇಕು, ಕಬಡ್ಡಿ ಬೆಳೆಯಬೇಕು, ಆಟಗಾರರ ನೇಮಕಾತಿ ವಿಷಯದಲ್ಲಿ ಪಾರದರ್ಶ ಕತೆ ಅತ್ಯಗತ್ಯ, ಹಣ ಕೊಟ್ಟವರಿಗೆ ಮಾತ್ರ ತಂಡದಲ್ಲಿ ಸ್ಥಾನ ಸಿಗುವ ಪರಂಪರೆ ದೂರವಾಗಬೇಕು’

ಪ್ರೊ ಕಬಡ್ಡಿ ವಿರೋಧಿಯಲ್ಲ
ಪ್ರೊ ಕಬಡ್ಡಿ ವಿರೋಧಿ ನಾನಲ್ಲ ಎಂದು ಪ್ರಸಾದ್‌ ಬಾಬು ಸ್ಪಷ್ಟಪಡಿಸಿದ್ದಾರೆ. “ಪ್ರೊ ಕಬಡ್ಡಿಯಿಂದ ಹಲವಾರು ಆಟಗಾರರಿಗೆ ಒಳ್ಳೆಯ ಅವಕಾಶ, ಭವಿಷ್ಯ ಸಿಕ್ಕಿದೆ. ಇದರಿಂದ ದೇಶದ, ರಾಜ್ಯದ ಕಬಡ್ಡಿ ಪಟುಗಳಿಗೆ ಒಳ್ಳೆಯದೇ ಆಗಿದೆ ಎಂದ ಮೇಲೆ ಅದನ್ನು ವಿರೋಧಿಸುವುದರಲ್ಲಿ ಅರ್ಥವಿಲ್ಲ. ಇಂತಹ ಇನ್ನಷ್ಟು ಲೀಗ್‌ಗಳನ್ನು ಆರಂಭಿಸಲು ಪ್ರೋತ್ಸಾಹಿಸುವ ಅಗತ್ಯವಿದೆ. ಇದಕ್ಕೆ ನನ್ನ ಬೆಂಬಲ ಸದಾ ಇರುತ್ತದೆ’ ಎಂದು ತಿಳಿಸಿದರು. ಹಿಂದೆ ಪ್ರಸಾದ್‌ ಬಾಬು ಪ್ರೊ ಕಬಡ್ಡಿಗೆ ಪರ್ಯಾಯವಾಗಿ ಇಂಡೊ ಇಂಟರ್‌ನ್ಯಾಷನಲ್‌ ಪ್ರೀಮಿಯರ್‌ ಲೀಗ್‌ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಯಾರಿವರು?: ಪೂರ್ಣ ಹೆಸರು ಪ್ರಸಾದ್‌ ಬಾಬು, ಕಬಡ್ಡಿ ಕ್ಷೇತ್ರದಲ್ಲಿ ಕಬಡ್ಡಿ ಬಾಬು ಎಂದೇ ಜನಪ್ರಿಯ. 1976ರಲ್ಲಿ ರಾಜ್ಯ ತಂಡಕ್ಕೆ ಪದಾರ್ಪಣೆ ಮಾಡಿದ್ದರು. 1979ರಲ್ಲಿ ದಕ್ಷಿಣ ವಲಯ ಕೂಟದಲ್ಲಿ ಭಾಗವಹಿಸಿದ್ದರು, ಮೊದಲ ಬಾರಿಗೆ ನಾಯಕರಾಗಿ ಈ ಕೂಟದಲ್ಲಿ ರಾಜ್ಯ ತಂಡವನ್ನು ಮುನ್ನಡೆಸಿದ್ದರು. 1980ರಲ್ಲಿ ಬಿಇಎಲ್‌ ತಂಡಕ್ಕೆ ಆಯ್ಕೆಯಾದರು. ಜಪಾನ್‌ನಲ್ಲಿ ಏಷ್ಯನ್‌ ಕೂಟ ಸೇರಿದಂತೆ ಹಲವಾರು ಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ರಾಜ್ಯ ತಂಡವನ್ನು ಮೂರು ಸಲ ನಾಯಕರಾಗಿ ಮುನ್ನಡೆಸಿರುವ ಹೆಗ್ಗಳಿಕೆ ಹೊಂದಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ರಾಜ್ಯದ 15 ಹಾಟ್ ಸ್ಪಾಟ್ ಏ.30ರವರೆಗೆ ಸಂಪೂರ್ಣ ಲಾಕ್ ಡೌನ್: ಉತ್ತರಪ್ರದೇಶ ಸರ್ಕಾರ

ರಾಜ್ಯದ 15 ಹಾಟ್ ಸ್ಪಾಟ್ ಏ.30ರವರೆಗೆ ಸಂಪೂರ್ಣ ಲಾಕ್ ಡೌನ್: ಉತ್ತರಪ್ರದೇಶ ಸರ್ಕಾರ

ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸುತ್ತಿರಲಿಲ್ಲ ಧೋನಿ !

ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸುತ್ತಿರಲಿಲ್ಲ ಧೋನಿ !

ಕೋವಿಡ್ ಗೆ ಔಷಧಿ; ಸಂಜೀವಿನಿ ಪರ್ವತದ ಬಗ್ಗೆ ಉಲ್ಲೇಖಿಸಿ ಮೋದಿಗೆ ಬ್ರೆಜಿಲ್ ಪ್ರಧಾನಿ ಪತ್ರ

ಕೋವಿಡ್ ಗೆ ಔಷಧಿ; ಸಂಜೀವಿನಿ ಪರ್ವತದ ಬಗ್ಗೆ ಉಲ್ಲೇಖಿಸಿ ಮೋದಿಗೆ ಬ್ರೆಜಿಲ್ ಪ್ರಧಾನಿ ಪತ್ರ

ಕೋವಿಡ್-19 ಸೋಂಕು ಸಂಪೂರ್ಣ ನಿರ್ನಾಮಕ್ಕೆ ಡಿಸೆಂಬರ್‌ ವರೆಗೂ ಮುನ್ನೆಚ್ಚರಿಕೆ ವಹಿಸಿ: ಡಿಸಿಎಂ

ಕೋವಿಡ್-19 ಸೋಂಕು ಸಂಪೂರ್ಣ ನಿರ್ನಾಮಕ್ಕೆ ಡಿಸೆಂಬರ್‌ ವರೆಗೂ ಮುನ್ನೆಚ್ಚರಿಕೆ ವಹಿಸಿ: ಡಿಸಿಎಂ

ಹನುಮಾನ್ ಜಯಂತಿಯಂದೇ ಬಿಡುಗಡೆಯಾಯ್ತು ರಾಮ ಮಂದಿರ ಟ್ರಸ್ಟ್ ನ ಲೋಗೋ; ಏನೇನಿದೆ ಇದರಲ್ಲಿ?

ಹನುಮಾನ್ ಜಯಂತಿಯಂದೇ ಬಿಡುಗಡೆಯಾಯ್ತು ರಾಮ ಮಂದಿರ ಟ್ರಸ್ಟ್ ನ ಲೋಗೋ; ಏನೇನಿದೆ ಇದರಲ್ಲಿ?

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸುತ್ತಿರಲಿಲ್ಲ ಧೋನಿ !

ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸುತ್ತಿರಲಿಲ್ಲ ಧೋನಿ !

ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಅಭಿಯಾನಕ್ಕೆ ಭಾರತದ ಎರಡು ಫುಟ್ ಬಾಲ್ ಕ್ಲಬ್‌

ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಅಭಿಯಾನಕ್ಕೆ ಭಾರತದ ಎರಡು ಫುಟ್ ಬಾಲ್ ಕ್ಲಬ್‌

ಫುಟ್ ಬಾಲ್ ವಿಶ್ವಕಪ್‌ಗಾಗಿ ರಷ್ಯಾ, ಕತಾರ್‌ನಿಂದ ಲಂಚ: ಅಮೆರಿಕ ಕಾನೂನು ಸಚಿವಾಲಯದ ಆರೋಪ

ಫುಟ್ ಬಾಲ್ ವಿಶ್ವಕಪ್‌ಗಾಗಿ ರಷ್ಯಾ, ಕತಾರ್‌ನಿಂದ ಲಂಚ: ಅಮೆರಿಕ ಕಾನೂನು ಸಚಿವಾಲಯದ ಆರೋಪ

ಫಿನಿಶರ್‌ ಆಗಿ ತಂಡಕ್ಕೆ ಮರಳುವೆ: ರಾಬಿನ್‌ ಉತ್ತಪ್ಪ

ಫಿನಿಶರ್‌ ಆಗಿ ತಂಡಕ್ಕೆ ಮರಳುವೆ: ರಾಬಿನ್‌ ಉತ್ತಪ್ಪ

ಮನೆಯೊಳಗೆ ಕ್ರಿಕೆಟ್‌ ಆಡಿದ ರೈನಾ

ಮನೆಯೊಳಗೆ ಕ್ರಿಕೆಟ್‌ ಆಡಿದ ರೈನಾ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

08-April-21

ಖಾಸಗಿ ಆಸ್ಪತ್ರೆಯಲ್ಲೂ ಉಚಿತ ಚಿಕಿತ್ಸೆ

ರಾಜ್ಯದ 15 ಹಾಟ್ ಸ್ಪಾಟ್ ಏ.30ರವರೆಗೆ ಸಂಪೂರ್ಣ ಲಾಕ್ ಡೌನ್: ಉತ್ತರಪ್ರದೇಶ ಸರ್ಕಾರ

ರಾಜ್ಯದ 15 ಹಾಟ್ ಸ್ಪಾಟ್ ಏ.30ರವರೆಗೆ ಸಂಪೂರ್ಣ ಲಾಕ್ ಡೌನ್: ಉತ್ತರಪ್ರದೇಶ ಸರ್ಕಾರ

08-April-32

ರೈತರ ಉತ್ಪನ್ನ ನೇರ ಗ್ರಾಹಕರಿಗೆ

08-April-31

ಎಪಿಎಂಸಿಗೆ ತಂದ ಹಣ್ಣು -ತರಕಾರಿ ಖರೀದಿಸುವರಿಲ್ಲ

ಲಾಕ್ ಡೌನ್ ಕತೆಗಳು : ಉಪಾಯಂ ಕಾರ್ಯ ಸಾಧನಂ!

ಲಾಕ್ ಡೌನ್ ಕತೆಗಳು : ಉಪಾಯಂ ಕಾರ್ಯ ಸಾಧನಂ!