ಬಾಕ್ಸಿಂಗ್ ಡೇ ಪಂದ್ಯಕ್ಕೆ ಲುಂಗಿ ಎನ್ಗಿಡಿ ಇಲ್ಲ
Team Udayavani, Dec 17, 2019, 2:10 AM IST
ಜೊಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾ ವೇಗಿ ಲುಂಗಿ ಎನ್ಗಿಡಿ ಗಾಯಾಳಾದ ಕಾರಣ ಪ್ರವಾಸಿ ಇಂಗ್ಲೆಂಡ್ ಎದುರಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಶುಕ್ರವಾರದ ಎಂಎಸ್ಎಲ್ ಟಿ20 ಪ್ಲೇ-ಆಫ್ ಪಂದ್ಯದ ವೇಳೆ ಅವರು ಸ್ನಾಯು ಸೆಳೆತಕ್ಕೆ ಸಿಲುಕಿದ್ದು, ಜನವರಿ ತನಕ ಪುನಶ್ಚೇತನ ಪ್ರಕ್ರಿಯೆಯಲ್ಲಿ ತೊಡಗಬೇಕಿದೆ ಎಂದು “ಕ್ರಿಕೆಟ್ ಸೌತ್ ಆಫ್ರಿಕಾ’ದ ವೈದ್ಯಾಧಿಕಾರಿ ಶುಯೆಬ್ ಮಂಜ್ರಾ ಹೇಳಿದ್ದಾರೆ.
ಪ್ರವಾಸಿ ಇಂಗ್ಲೆಂಡ್ ಎದುರಿನ ಸರಣಿಯ ವೇಳೆ 4 ಟೆಸ್ಟ್, 3 ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಲಾಗುವುದು. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಡಿ. 26ರಿಂದ ಸೆಂಚುರಿಯನ್ನಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ 2 ಅಭ್ಯಾಸ ಪಂದ್ಯಗಳನ್ನು ಆಡಲಿದೆ.
ಆರು ಹೊಸಬರು
ಇದೇ ವೇಳೆ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಹೆಸರಿಸಿರುವ ದಕ್ಷಿಣ ಆಫ್ರಿಕಾ 6 ಮಂದಿ ಹೊಸಬರಿಗೆ ಅವಕಾಶ ನೀಡಿದೆ. ಭಾರತದೆದುರಿನ 3ನೇ ಟೆಸ್ಟ್ ಪಂದ್ಯದ ವೇಳೆ ಗಾಯಾಳಾಗಿ ಹೊರಗುಳಿದಿದ್ದ ಸ್ಪಿನ್ನರ್ ಕೇಶವ್ ಮಹಾರಾಜ್ ತಂಡಕ್ಕೆ ಮರಳಿದ್ದಾರೆ.
ದಕ್ಷಿಣ ಆಫ್ರಿಕಾ ತಂಡ: ಫಾ ಡು ಪ್ಲೆಸಿಸ್ (ನಾಯಕ), ಟೆಂಬ ಬವುಮ, ಕ್ವಿಂಟನ್ ಡಿ ಕಾಕ್, ಡೀನ್ ಎಲ್ಗರ್, ಬ್ಯೂರನ್ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಪೀಟರ್ ಮಾಲನ್, ಐಡನ್ ಮಾರ್ಕ್ರಮ್, ಜುಬೇರ್ ಹಮ್ಜಾ, ಅನ್ರಿಚ್ ನೋರ್ಜೆ, ಡೇನ್ ಪೀಟರ್ಸನ್, ಆ್ಯಂಡಿಲ್ ಫೆಲುಕ್ವಾಯೊ, ವೆರ್ನನ್ ಫಿಲಾಂಡರ್, ಡ್ವೇನ್ ಪ್ರಿಟೋರಿಯಸ್, ಕಾಗಿಸೊ ರಬಾಡ, ರುಡಿ ಸೆಕೆಂಡ್, ರಸ್ಸಿ ವಾನ್ ಡರ್ ಡುಸೆನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !