ಟೀಮ್ ಇಂಡಿಯಾ ಕೋಚ್ : ಮಾಹೇಲ ಜಯವರ್ಧನೆ ಆಸಕ್ತಿ
Team Udayavani, Jul 23, 2019, 5:50 AM IST
ಹೊಸದಿಲ್ಲಿ: ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಶ್ರೀಲಂಕಾದ ಮಾಜಿ ಬ್ಯಾಟ್ಸ್ಮನ್ ಮಾಹೇಲ ಜಯವರ್ಧನೆ ಆಸಕ್ತಿ ವಹಿಸಿದ್ದಾರೆ ಎಂದು ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಕಪಿಲ್ದೇವ್ ನೇತೃತ್ವದ ಸಲಹಾ ಸಮಿತಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.
ಭಾರತ ತಂಡದ ಕೋಚ್ ಹುದ್ದೆಗೆ ಬಹಳಷ್ಟು ಮಂದಿ ಮಾಜಿ ಕ್ರಿಕೆಟಿಗರು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿರುವ ಪ್ರಮುಖ ಹೆಸರು ಮಾಹೇಲ ಜಯವರ್ಧನೆ ಅವರದಾಗಿದೆ. ಜಯವರ್ಧನೆ ಇಂಗ್ಲೆಂಡ್ ತಂಡದ ಕೋಚಿಂಗ್ ಸಲಹೆಗಾರನಾಗಿ ಅಲ್ಪಾವಧಿಗೆ ದುಡಿದಿದ್ದರು. ಆದರೆ ಜಯವರ್ಧನೆ ಭರಪೂರ ಯಶಸ್ಸು ಕಂಡದ್ದು ಐಪಿಎಲ್ನಲ್ಲಿ. ಮುಂಬೈ ಇಂಡಿಯನ್ಸ್ ಕೋಚ್ ಆಗಿ ಅವರು ತಂಡವನ್ನು ಬಹಳ ಎತ್ತರಕ್ಕೆ ಏರಿಸಿದ್ದರು.
ಐಪಿಎಲ್ನಲ್ಲಿ ಯಶಸ್ಸು
ಐಪಿಎಲ್ನ ಅತ್ಯಂತ ಯಶಸ್ವಿ ತಂಡವಾಗಿರುವ ಮುಂಬೈ ಇಂಡಿಯನ್ಸ್ 3 ಆವೃತ್ತಿಗಳಲ್ಲಿ 2 ಸಲ ಚಾಂಪಿಯನ್ ಆಗಿ ಮೂಡಿಬಂದಿತ್ತು. ಆಗ ಜಯವರ್ಧನೆ ಅವರೇ ತಂಡದ ತರಬೇತುದಾರನಾಗಿದ್ದರು.
ಒಂದು ಮೂಲದ ಪ್ರಕಾರ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಮಾಜಿ ತರಬೇತುದಾರ ಗ್ಯಾರಿ ಕರ್ಸ್ಟನ್, ಟಾಮ್ ಮೂಡಿ ಕೂಡ ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಯಾರೇ ಆಯ್ಕೆಯಾದರೂ ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಜತೆಗೂಡಿ ಮುಂದಿನ ವಿಶ್ವಕಪ್ ವೇಳೆ ಬಲಿಷ್ಠ ತಂಡವೊಂದನ್ನು ರೂಪಿಸಬಹುದೆಂಬ ವಿಶ್ವಾಸವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ