ಮನೀಶ್ ಚಿನ್ನದ ಮೆರುಗು: ಚಿನ್ನ- ಬೆಳ್ಳಿಗೆ ಗುರಿಯಿಟ್ಟ ಭಾರತದ ಶೂಟರ್ ಗಳು
Team Udayavani, Sep 4, 2021, 10:20 AM IST
ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಂಪಿಕ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ. ಶೂಟರ್ ಮನೀಶ್ ನರ್ವಾಲ್ ಚಿನ್ನಕ್ಕೆ ಗುರಿಯಿಟ್ಟರೆ, ಸಿಂಗರಾಜ್ ಅಧಾನ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.
ಶೂಟಿಂಗ್ ಪಿ4 50 ಮೀಟರ್ ಪಿಸ್ತೂಲ್ ಎಸ್ ಹೆಚ್ 1 ವಿಭಾಗದಲ್ಲಿ ಮನೀಶ್ ನರ್ವಾಲ್ ಮತ್ತು ಸಿಂಗರಾಜ್ ಸಾಧನೆ ಮಾಡಿದ್ದಾರೆ.
ಮನೀಶ್ ನರ್ವಾಲ್ ಅವರ ಚಿನ್ನದ ಸಾಧನೆಯೊಂದಿಗೆ ಭಾರತ ಈ ಬಾರಿಯ ಪ್ಯಾರಾಲಂಪಿಕ್ಸ್ ನಲ್ಲಿ ಮೂರು ಚಿನ್ನ ಗೆದ್ದ ಸಾಧನೆ ಮಾಡಿದೆ.
ಇದನ್ನೂ ಓದಿ:ಕಾಮನ್ವೆಲ್ತ್ ಗೇಮ್ಸ್ಗೆ ಭಾರತ ಹಾಕಿ ತಂಡಗಳ ಗೈರು?
ಮನೀಶ್ ನರ್ವಾಲ್ 218.2 ಅಂಕಗಳನ್ನು ಗಳಿಸಿ ಮೊದಲ ಸ್ಥಾನ ಪಡೆದಿದ್ದು, ಇದು ಭಾರತದ ಪರ ಗರಿಷ್ಠ ದಾಖಲೆ ಕೂಡ ಆಗಿದೆ. ಅದೇ ಪಂದ್ಯದಲ್ಲಿ ಭಾರತದ ಮತ್ತೋರ್ವ ಶೂಟರ್ ಸಿಂಗರಾಜ್ ಅವರು 216.7 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಇದರೊಂದಿಗೆ ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಭಾರತದ ಪದಕಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಭಾರತೀಯರು ಚಿನ್ನ 3, ಬೆಳ್ಳಿ 7 ಮತ್ತು 5 ಕಂಚಿನ ಪದಕಗಳು ಸೇರಿವೆ.
ಪ್ರಧಾನಿ ಅಭಿನಂದನೆ: ಶೂಟರ್ ಗಳ ಸಾಧನೆಗೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದು. ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಪದಕ ವೈಭವ ಮುಂದುವರಿದಿದ್ದು, ಯುವ ಮತ್ತು ಅದ್ಭುತ ಪ್ರತಿಭಾನ್ವಿತ ಮನೀಶ್ ನರ್ವಾಲ್ ಅವರು ಉತ್ತಮ ಸಾಧನೆ ಗೈದಿದ್ದಾರೆ. ಅವರು ಚಿನ್ನದ ಪದಕ ಗೆದ್ದಿರುವುದು ಭಾರತೀಯ ಕ್ರೀಡೆಗೆ ಒಂದು ವಿಶೇಷ ಕ್ಷಣವಾಗಿದೆ. ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಬೆಳ್ಳಿ ಪದಕ ಗೆದ್ದ ಸಿಂಗರಾಜ್ ಅವರಿಗೂ ಪ್ರಧಾನಿ ಶುಭ ಕೋರಿದ್ದು, ಮಹೋನ್ನತ ಸಿಂಗರಾಜ್ ಅಧಾನ ಮತ್ತೆ ಅಂತಹುದೇ ಸಾಧನೆ ಮಾಡಿದ್ದು, ಅವರು ಈ ಬಾರಿ ಮಿಶ್ರ 50 ಮೀಟರ್ ಪಿಸ್ತೂಲ್ ಎಸ್ ಎಚ್1 ಸ್ಪರ್ಧೆಯಲ್ಲಿ ಮತ್ತೊಂದು ಪದಕವನ್ನು ಗೆದ್ದಿದ್ದಾರೆ. ಅವರ ಸಾಧನೆಯಿಂದಾಗಿ ಭಾರತವು ಸಂತೋಷಪಡುತ್ತದೆ. ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ