ತವರಿನ ವಿಶ್ವಕಪ್ ಬಳಿಕ ವೇಡ್ ವಿದಾಯ
Team Udayavani, Nov 19, 2021, 6:35 AM IST
ಅಡಿಲೇಡ್: ಆಸ್ಟ್ರೇಲಿಯದ ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ತಮ್ಮ ವಿದಾಯದ ನಿರ್ಧಾರವನ್ನು ಬದಲಿಸಿದ್ದಾರೆ. ಮೊನ್ನೆಯ ಟಿ20 ವಿಶ್ವಕಪ್ ಬಳಿಕ ಚುಟುಕು ಕ್ರಿಕೆಟ್ನಿಂದ ದೂರ ಸರಿಯುವುದಾಗಿ ಹೇಳಿದ್ದ ವೇಡ್, ಇದನ್ನು ಒಂದು ವರ್ಷದ ಮಟ್ಟಿಗೆ ಮುಂದೂಡಿದ್ದಾರೆ.
ಮುಂದಿನ ವರ್ಷ ತವರಲ್ಲೇ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಇದು ಮುಗಿದೊಡನೆ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದಲೇ ದೂರ ಸರಿಯುವುದಾಗಿ ವೇಡ್ ಪ್ರಕಟಿಸಿದರು. ಟ್ರೋಫಿಯನ್ನು ಉಳಿಸಿಕೊಳ್ಳುವುದು ತಂಡದ ಗುರಿ ಎಂದೂ ಅವರು ಹೇಳಿದರು.
ಮ್ಯಾಥ್ಯೂ ವೇಡ್ 2021ರ ಟಿ20 ವಿಶ್ವಕಪ್ ಪಂದ್ಯಾವಳಿಗೆ ಆಯ್ಕೆಯಾದದ್ದೇ ಒಂದು ಅಚ್ಚರಿ. ಈ ಸ್ಥಾನ ಅಲೆಕ್ಸ್ ಕ್ಯಾರಿ ಅವರದ್ದಾಗಬೇಕಿತ್ತು.
ವೇಡ್ ಪಾಕಿಸ್ಥಾನದೆದುರಿನ ಸೆಮಿಫೈನಲ್ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ತಂಡದ ಗೆಲುವಿನ ಹೀರೋ ಆಗಿ ಮೂಡಿಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು