ಗಾಯಗೊಂಡ ಧವನ್ ಬದಲಿಗೆ ಏಕದಿನಕ್ಕೆ ಮಯಾಂಕ್ ಆಯ್ಕೆ

Team Udayavani, Dec 11, 2019, 3:54 PM IST

ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿ ಮುಗಿಯುತ್ತಿದ್ದಂತೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಸರಣಿಗಾಗಿ ಈಗಾಗಲೇ ಪ್ರಕಟಿಸಿದ ತಂಡದಲ್ಲಿ ಸ್ಥಾನ ಪಡೆದಿದ್ದ ಆರಂಭಿಕ ಆಟಗಾರ ಶಿಖರ್ ಧವನ್ ಹೊರಬಿದ್ದಿದ್ದಾರೆ.

ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕಾಲಿಗೆ ಗಾಯ ಮಾಡಿಕೊಂಡಿದ್ದ ಶಿಖರ್ ಧವನ್ ಟಿ ಟ್ವೆಂಟಿ ಸರಣಿಯಿಂದ ಹೊರಬಿದ್ದಿದ್ದರು. ಚುಟುಕು ಸರಣಿಗೆ ಧವನ್ ಬದಲಿಗೆ ಕೇರಳ ಆಟಗಾರ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದರು.

ಸದ್ಯ ಏಕದಿನ ಸರಣಿಗೆ ಧವನ್ ಬದಲಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ 15ರ ಬಳಗವನ್ನು ಕೂಡಿಕೊಳ್ಳಲಿದ್ದಾರೆ. ಸದ್ಯ ತಂಡದಲ್ಲಿ ಮತ್ತೋರ್ವ ಕನ್ನಡಿಗ ಕೆ ಎಲ್ ರಾಹುಲ್ ಇರುವ ಕಾರಣ ಟಿ ಟ್ವೆಂಟಿ ಸರಣಿಯಂತೆ ಏಕದಿನದಲ್ಲೂ ಅವರೇ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ದಟ್ಟವಾಗಿದೆ.

ಮೂರು ಪಂದ್ಯಗಳ ಏಕದಿನ ಸರಣಿ ಡಿಸೆಂಬರ್ 15ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಚೆನ್ನೈನಲ್ಲಿ ನಡೆದರೆ, ಮುಂದಿನೆರಡು ಕ್ರಮವಾಗಿ ವಿಶಾಖಪಟ್ಟಣ ಮತ್ತು ಕಟಕ್ ನಲ್ಲಿ ನಡೆಯಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ