2022 ಟಿ20 ವಿಶ್ವಕಪ್ ಫೈನಲ್ – ಸೆಮಿ ಫೈನಲ್ ನಡೆಯುವ ಮೈದಾನಗಳ ಪಟ್ಟಿ ಬಿಡುಗಡೆ ಮಾಡಿದ ಐಸಿಸಿ
Team Udayavani, Nov 16, 2021, 10:02 AM IST
ದುಬೈ: 2021ರ ಸಾಲಿನ ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಮುಂದಿನ ಟಿ20 ವಿಶ್ವಕಪ್ ಗೆ ತಯಾರಿ ನಡೆಸಿದೆ. ಮುಂದಿನ ಚುಟುಕು ವಿಶ್ವಕಪ್ 2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ.
ಪಂದ್ಯಾವಳಿಯು ಮುಂದಿನ ವರ್ಷ ಅಕ್ಟೋಬರ್ 16 ರಿಂದ ನವೆಂಬರ್ 13 ರವರೆಗೆ ಆಸ್ಟ್ರೇಲಿಯಾದ ಏಳು ನಗರಗಳಲ್ಲಿ ನಡೆಯಲಿದೆ. ಸೆಮಿಫೈನಲ್ ಪಂದ್ಯಗಳು ಸಿಡ್ನಿ ಕ್ರಿಕೆಟ್ ಗ್ರೌಂಡ್ ಮತ್ತು ಅಡಿಲೇಡ್ ಓವಲ್ ನಲ್ಲಿ ನವೆಂಬರ್ 9 ಮತ್ತು 10 ರಂದು ನಡೆಯಲಿದೆ.
ನವೆಂಬರ್ 13ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ.
ಇದನ್ನೂ ಓದಿ:ಜೈಪುರ ಟಿ20ಗೆ ಎದುರಾಗಲಿದೆ ದಟ್ಟ ಮಂಜು
ಬ್ರಿಸ್ಬೇನ್, ಗೀಲಾಂಗ್, ಹೋಬರ್ಟ್ ಮತ್ತು ಪರ್ತ್ ನಗರಗಳಲ್ಲಿ ಇತರ ಪಂದ್ಯಗಳು ನಡೆಯಲಿದೆ. 2020 ರ ಮಹಿಳಾ ಟ್ವೆಂಟಿ 20 ವಿಶ್ವಕಪ್‌ನ ಫೈನಲ್ ಮೆಲ್ಬೋರ್ನ್ ನಲ್ಲಿ ನಡೆದಿದ್ದು 86,174 ರ ದಾಖಲೆಯ ಪ್ರೇಕ್ಷಕರು ಈ ಪಂದ್ಯವನ್ನು ವೀಕ್ಷಿಸಿದ್ದರು.
ಮುಂದಿನ ಟಿ20 ವಿಶ್ವಕಪ್ ಗೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ಈಗಾಗಲೇ ಟೂರ್ನಿಯ ಸೂಪರ್ 12 ಹಂತಕ್ಕೆ ಅರ್ಹತೆ ಪಡೆದಿವೆ. ನಮೀಬಿಯಾ, ಸ್ಕಾಟ್ಲೆಂಡ್, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ಆರಂಭಿಕ ಸುತ್ತಿನಲ್ಲಿ ಆಡಲಿದ್ದು, ಮುಂದಿನ ವರ್ಷ ಓಮನ್ ಮತ್ತು ಜಿಂಬಾಬ್ವೆಯಲ್ಲಿ ನಡೆಯಲಿರುವ ಅರ್ಹತಾ ಪಂದ್ಯಾವಳಿಗಳಲ್ಲಿ ಇತರ ನಾಲ್ಕು ತಂಡಗಳನ್ನು ನಿರ್ಧರಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏಷ್ಯನ್ ಕಪ್ ಹಾಕಿ; ಇಂಡೋನೇಶ್ಯ ವಿರುದ್ಧ ಭಾರತಕ್ಕೆ 16-0 ಗೆಲುವು!: ಪಾಕ್ ಗೆ ಜಪಾನ್ ಶಾಕ್
ಐಪಿಎಲ್ ನಲ್ಲಿ ಹೊಸ ದಾಖಲೆ ಬರೆದ ಲಕ್ನೋ ನಾಯಕ ಕೆ.ಎಲ್.ರಾಹುಲ್
ಮತ್ತಷ್ಟು ಬಲಿಷ್ಠರಾಗಿ ಮರಳುತ್ತೇವೆ..: ಲಕ್ನೋ ತಂಡ ಮೆಂಟರ್ ಗೌತಮ್ ಗಂಭೀರ್
ಒಂದು ಶತಕ ಹಲವು ದಾಖಲೆ: ಸಾಧನೆಗಳ ಮೈಲಿಗಲ್ಲು ನೆಟ್ಟ ರಜತ್ ಪಾಟೀದಾರ್
ಏಷ್ಯನ್ ಕಪ್ ಹಾಕಿ: ಇಂಡೋನೇಶ್ಯ ಎದುರಾಳಿ: ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ