ಮಾಯಾಂಕ್‌-ಪೂಜಾರ ಆರಂಭಿಕರಾಗಿ ಕಣಕ್ಕೆ?


Team Udayavani, Dec 25, 2018, 6:00 AM IST

melbourne-test-mayank-agarwal.jpg

ಮೆಲ್ಬರ್ನ್: ಮೆಲ್ಬರ್ನ್ ಟೆಸ್ಟ್‌ ಪಂದ್ಯದ ಕುತೂಹಲವೀಗ ಭಾರತದ ಆಡುವ ಬಳಗ ಹೇಗಿದ್ದೀತು ಎಂಬುದರತ್ತ ಗಿರಕಿ ಹೊಡೆಯುತ್ತಿದೆ. ತಂಡದ ಮೂಲವೊಂದರ ಪ್ರಕಾರ ಮಾಯಾಂಕ್‌ ಅಗರ್ವಾಲ್‌ ಮತ್ತು ಚೇತೇಶ್ವರ್‌ ಪೂಜಾರ ಭಾರತದ ಇನ್ನಿಂಗ್ಸ್‌ ಆರಂಭಿಸುವ ಸಾಧ್ಯತೆ ಇದೆ. ಮುರಳಿ ವಿಜಯ್‌-ಕೆ.ಎಲ್‌. ರಾಹುಲ್‌ ಜೋಡಿ ಸಂಪೂರ್ಣ ವೈಫ‌ಲ್ಯ ಅನುಭವಿಸಿದ್ದರಿಂದ ಇವರಿಬ್ಬರೂ ಮೆಲ್ಬರ್ನ್ನಲ್ಲಿ ಆಡುವ ಸಂಭವ ಕಡಿಮೆ.

ಅಗರ್ವಾಲ್‌ ಈವರೆಗೆ ಯಾವುದೇ ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಹೀಗಾಗಿ ಅವರಿಗೆ ಇನ್ನೊಂದು ತುದಿಯಲ್ಲಿ ಟೆಸ್ಟ್‌ ಸ್ಪೆಷಲಿಸ್ಟ್‌ ಪೂಜಾರ ಇದ್ದರೆ ಅನುಕೂಲ ಎಂಬುದೊಂದು ಲೆಕ್ಕಾಚಾರ. ಸಾಮಾನ್ಯವಾಗಿ ಭಾರತದ ಮೊದಲ ವಿಕೆಟ್‌ ಆರಂಭಿಕ ಓವರಿನಲ್ಲೇ ಪತನಗೊಳ್ಳುತ್ತಿರುವುದರಿಂದ ಪೂಜಾರ ಅನಧಿಕೃತ ಆರಂಭಿಕನೇ ಆಗಿದ್ದಾರೆ!

ಪೂಜಾರ ಇನ್ನಿಂಗ್ಸ್‌ ಆರಂಭಿಸಿದರೆ ಹನುಮ ವಿಹಾರಿ ಅವರನ್ನು ಒನ್‌ಡೌನ್‌ನಲ್ಲಿ ಆಡಿಸುವುದು ಆಡಳಿತ ಮಂಡಳಿಯ ಯೋಚನೆ. ಬಳಿಕ ಮಾಮೂಲಿನಂತೆ ವಿರಾಟ್‌ ಕೊಹ್ಲಿ, ಅಜಿಂಕ್ಯ ರಹಾನೆ, ರಿಷಬ್‌ ಪಂತ್‌ ಕ್ರೀಸ್‌ ಇಳಿಯಲಿದ್ದಾರೆ.

ಅವಳಿ ಸ್ಪಿನ್‌ ದಾಳಿ?
ಬೌಲಿಂಗ್‌ ವಿಭಾಗದಲ್ಲಿ, ಅದರಲ್ಲೂ ಸ್ಪಿನ್ನರ್ ಆಯ್ಕೆ ವಿಷಯದಲ್ಲಿ ಹೆಚ್ಚು ಜಾಣತನ ತೋರಬೇಕಿದೆ. ಆರ್‌. ಅಶ್ವಿ‌ನ್‌ ಫಿಟ್‌ನೆಸ್‌ ಬಗ್ಗೆ ಇನ್ನೂ ಅನುಮಾನಗಳಿವೆ. ರವೀಂದ್ರ ಜಡೇಜ ದೈಹಿಕ ಕ್ಷಮತೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದರೂ ಅವರೀಗ ಚೇತರಿಸಿಕೊಂಡು ಆಡಲು ಅಣಿಯಾಗಿದ್ದಾರೆ. ಮೆಲ್ಬರ್ನ್ನಲ್ಲಿ ಅವಳಿ ಸ್ಪಿನ್‌ ದಾಳಿ ಲಾಭದಾಯಕ ಎನ್ನಲಾಗುತ್ತಿದೆ. ಅಕಸ್ಮಾತ್‌ ಅಶ್ವಿ‌ನ್‌ ಆಡದೇ ಹೋದರೆ ಕುಲದೀಪ್‌ ಯಾದವ್‌ಗೆ ಚಾನ್ಸ್‌ ಸಿಗಲೂಬಹುದು.

ವೇಗದ ಬೌಲಿಂಗ್‌ ವಿಭಾಗದಲ್ಲಿ ಮೊಹಮ್ಮದ್‌ ಶಮಿ, ಇಶಾಂತ್‌ ಶರ್ಮ ಮತ್ತು ಜಸ್‌ಪ್ರೀತ್‌ ಬುಮ್ರಾ ಆಡುವುದು ಬಹುತೇಕ ಖಚಿತ. ಆಗ ಭುವನೇಶ್ವರ್‌ ಕುಮಾರ್‌ “ವೇಟಿಂಗ್‌ ಲಿಸ್ಟ್‌’ನಲ್ಲೇ ಉಳಿಯಬೇಕಾಗುತ್ತದೆ.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸೈಯದ್‌ ಮುಷ್ತಾಖ್‌ ಅಲಿ ಟಿ20 ಪಂದ್ಯಾವಳಿ : ಕೇರಳಕ್ಕೆ ಸಂಜು ಸ್ಯಾಮ್ಸನ್‌ ನಾಯಕ

ಸೈಯದ್‌ ಮುಷ್ತಾಖ್‌ ಅಲಿ ಟಿ20 ಪಂದ್ಯಾವಳಿ : ಕೇರಳಕ್ಕೆ ಸಂಜು ಸ್ಯಾಮ್ಸನ್‌ ನಾಯಕ

750

ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿ ಆರಂಭಿಕ ಆಘಾತ ನೀಡಿದ ಪಾಕ್

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.