ಏಶ್ಯ ಮಿಶ್ರ ಡಬಲ್ಸ್ ಬ್ಯಾಡ್ಮಿಂಟನ್ ಸಿಂಧು, ಸೈನಾ ನೇತೃತ್ವ
Team Udayavani, Feb 7, 2017, 3:45 AM IST
ಹೊಸದಿಲ್ಲಿ: ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಮತ್ತು ಖ್ಯಾತ ಆಟಗಾರ್ತಿ ಸೈನಾ ನೆಹ್ವಾಲ್ ವಿಯೆಟ್ನಾಂನಲ್ಲಿ ಫೆ. 14ರಿಂದ 19ರ ವರೆಗೆ ನಡೆಯಲಿರುವ ಏಶ್ಯ ಮಿಶ್ರ ತಂಡ ಬ್ಯಾಡ್ಮಿಂಟನ್ ಕೂಟದಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಸಿಂಧು ಒಲಿಂಪಿಕ್ಸ್ ಬಳಿಕ ಸಯ್ಯದ್ ಮೋದಿ ಬ್ಯಾಡ್ಮಿಂಟನ್ ಕೂಟದ ಚಾಂಪಿಯನ್ ಆಗಿದ್ದರು. ಅಂತೆಯೆ ಸೈನಾ ಮಲೇಶ್ಯ ಮಾಸ್ಟರ್ ಬ್ಯಾಡ್ಮಿಂಟನ್ನಲ್ಲಿ ಪ್ರಶಸ್ತಿ ಗೆದ್ದಿದ್ದಾರೆ. ಗಾಯದಿಂದ ಚೇತರಿಸಿಕೊಂಡ ಸೈನಾ ಈ ಸಾಧನೆ ಮಾಡಿದ್ದರು. ಇವರ ಜತೆಗೆ ತನ್ವಿ ಲಾಡ್, ರಿತುಪರ್ಣಾ ದಾಸ್ ಕೂಡ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಪುರುಷರ ವಿಭಾಗದಲ್ಲಿ ಸಯ್ಯದ್ ಮೋದಿ ಗ್ರ್ಯಾನ್ಪ್ರಿ ವಿಜೇತ ಸಮೀರ್ ವರ್ಮ, ಸ್ವಿಟ್ಸರ್ಲ್ಯಾಂಡ್ ಓಪನ್ ಪ್ರಶಸ್ತಿ ವಿಜೇತ ಎಚ್.ಎಸ್. ಪ್ರಣಯ್ ಕೂಟದಲ್ಲಿ ಪಾಲ್ಗೊ ಳ್ಳುತ್ತಿದ್ದಾರೆ. ಆದರೆ ಕೆ. ಶ್ರೀಕಾಂತ್ ಈ ಪಂದ್ಯಾವಳಿಯಿಂದ ಹಿಂದಕ್ಕೆ ಸರಿಯಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ