
MS Dhoni: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಆಸ್ಪತ್ರೆಗೆ !
Team Udayavani, May 31, 2023, 1:44 PM IST

ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮುಂಬೈನ ಕೋಲ್ಕಿಲಾಬೆನ್ ಆಸ್ಪತ್ರೆಯಲ್ಲಿ ಮೊಣಕಾಲಿನ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2023 ರ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದು ವಿಕೆಟ್‌ಗಳಿಂದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಎನಿಸಿಕೊಂಡಿತ್ತು. ಇದೀಗ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದ ಧೋನಿ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಒಂದು ವೇಳೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ, ದಾಖಲಾಗುವ ಸಾಧ್ಯತೆಗಳಿವೆ ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ.
ಐಪಿಎಲ್ ನ ಮೊದಲ ಪಂದ್ಯದಲ್ಲಿಯೇ ಧೋನಿ ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು.
ಚೆನ್ನೈ ಕೋಚ್ ಸ್ಟೀಫನ್ ಫ್ಲೆಮಿಂಗ್ ಕೂಡ ಧೋನಿಯ ಗಾಯದ ಬಗ್ಗೆ ಹೇಳಿಕೆಯನ್ನು ನೀಡಿದ್ದರು. “ಅವರಿಗೆ ಮೊಣಕಾಲು ಗಾಯವಾಗಿದೆ. ಧೋನಿ ನಡೆಯುವ ಸಂದರ್ಭದಲ್ಲಿ ಗಮನಿಸಬಹುದು. ಆದರೆ ಗಾಯವು ತುಂಬಾ ಗಂಭೀರವಾಗಿಲ್ಲ. ಶೀಘ್ರವೇ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ” ಎಂದು ಅವರು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

World Cup Cricket; ಇತಿಹಾಸ ಬರೆಯಿತು ಅರ್ಜುನ ಸಾರಥ್ಯದ ಶ್ರೀಲಂಕಾ

Women’s Hockey : ಸಂಗೀತಾ ಹ್ಯಾಟ್ರಿಕ್; ಸಿಂಗಾಪುರ ವಿರುದ್ಧ 13-0 ಗೆಲುವು

Asian Games ಬಾಕ್ಸಿಂಗ್: ಥಾಪ, ಸಂಜೀತ್‌ಗೆ ಆಘಾತ

ODI: ಭಾರತದ ಎದುರು ವೈಟ್‌ವಾಶ್ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ
MUST WATCH
ಹೊಸ ಸೇರ್ಪಡೆ

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ