
ಎರಡು ವರ್ಷದ ಬಳಿಕ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ ಎಂ.ಎಸ್.ಧೋನಿ
Team Udayavani, Feb 9, 2023, 11:02 AM IST

ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಅಷ್ಟಾಗಿ ಕಾಣಿಸಿಕೊಳ್ಳುವುದಿಲ್ಲ. ಎರಡು ವರ್ಷಗಳ ನಂತರ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇನ್ಸ್ಟಾಗ್ರಾಮ್ ಗೆ ಮರಳಿದ್ದಾರೆ. ಹೊಸ ವೀಡಿಯೊವೊಂದನ್ನು ಧೋನಿ ಹಂಚಿಕೊಂಡಿದ್ದು, ಅದರಲ್ಲಿರುವ ರಾಂಚಿಯಲ್ಲಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಹೊಲವನ್ನು ಉಳುಮೆ ಮಾಡಲು ಟ್ರ್ಯಾಕ್ಟರ್ ಓಡಿಸುತ್ತಿರುವುದನ್ನು ಕಾಣಬಹುದು.
ಸಾಮಾಜಿಕ ವೇದಿಕೆಯಲ್ಲಿ ಸಕ್ರಿಯರಾಗಲು ಕಾಯುತ್ತಿದ್ದ ಧೋನಿ ಅಭಿಮಾನಿಗಳಿಗೆ ಈ ಪೋಸ್ಟ್ ಸಂತೋಷ ನೀಡಿದೆ.
‘ಹೊಸದನ್ನು ಕಲಿಯಲು ಸಂತೋಷವಾಗಿದೆ, ಆದರೆ ಕೆಲಸವನ್ನು ಮುಗಿಸಲು ತುಂಬಾ ಸಮಯ ತೆಗೆದುಕೊಂಡಿತು.’ ಎಂದು ಧೋನಿ ಬರೆದುಕೊಂಡಿದ್ದಾರೆ. ಎಂಎಸ್ ಧೋನಿ ಅವರು ಜಮೀನಿನಲ್ಲಿ ಟ್ರ್ಯಾಕ್ಟರ್ ಓಡಿಸುತ್ತಿದ್ದು, ಸ್ವಲ್ಪ ಸಮಯದ ನಂತರ ಟ್ರ್ಯಾಕ್ಟರ್ ನಲ್ಲಿ ಅವರೊಂದಿಗೆ ಇನ್ನೊಬ್ಬ ವ್ಯಕ್ತಿ ಕುಳಿತಿರುವುದನ್ನು ಕಾಣಬಹುದು.
ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಈಗಾಗಲೇ ದೂರವಾಗಿರುವ ಮಹೇಂದ್ರ ಸಿಂಗ್ ಧೋನಿ ಅವರು ಐಪಿಎಲ್ ನಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ. ಚೆನ್ನೈ ತಂಡದ ನಾಯಕರಾಗಿರುವ ಧೋನಿ ಮುಂದಿನ ಐಪಿಎಲ್ ತಯಾರಿಯಲ್ಲಿದ್ದಾರೆ.
View this post on Instagram
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಷಿಯಲ್ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್ ಕೊಹ್ಲಿ!

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?