Udayavni Special

ಅಂಡರ್‌-19 ತಂಡದಲ್ಲಿ ಸ್ಥಾನ ಪಡೆಯಬೇಕು: ಪ್ರಭ್‌ಸಿಮ್ರನ್‌


Team Udayavani, Dec 20, 2018, 6:00 AM IST

prabhsimran-singh.jpg

ಹೊಸದಿಲ್ಲಿ: ಪಂಜಾಬಿನ ಪಟಿಯಾಲದಲ್ಲಿ ಸಹೋದರ ಸಂಬಂಧಿ ಅನ್ಮೋಲ್‌ಪ್ರೀತ್‌ ಸಿಂಗ್‌ ಜತೆಗೆ ಪ್ರತಿದಿನ 3 ಗಂಟೆ ನೆಟ್‌ ಅಭ್ಯಾಸದಲ್ಲಿ ತೊಡಗಿಸಿಕೊಳ್ಳುತ್ತಿದ್ದ 18 ವರ್ಷದ ಪ್ರಭ್‌ಸಿಮ್ರನ್‌ ಸಿಂಗ್‌ ಮಂಗಳವಾರದ “ಇಂಡಿಯನ್‌ ಪ್ರಿಮೀಯರ್‌ ಲೀಗ್‌ ಹರಾಜಿನಲ್ಲಿ ಭಾರೀ ಮೊತ್ತಕ್ಕೆ ಮಾರಾಟವಾಗಿ ಸುದ್ದಿಯ ಕೇಂದ್ರವಾಗಿದ್ದಾರೆ. ಅವರು 4.8 ಕೋಟಿ ರೂ.ಗೆ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡದ ಪಾಲಾಗಿದ್ದಾರೆ. ಪಂಜಾಬ್‌ ಸೇರುವ ಮುನ್ನ 3 ತಂಡಗಳು ಅವರ ಮೇಲೆ ಬಿಡ್‌ ಮಾಡುತ್ತಲೇ ಇದ್ದವು.

ಇನ್ನೊಂದು ಆಶ್ಚರ್ಯದ ಸಂಗತಿ ಏನೆಂದರೆ ಪ್ರಭ್‌ಸಿಮ್ರನ್‌ ಸಿಂಗ್‌ಗೆ ಪ್ರಥಮ ದರ್ಜೆ ಕ್ರಿಕೆಟ್‌ ಅಥವಾ ಟಿ20 ಕ್ರಿಕೆಟಿನ ಅನುಭವವಿಲ್ಲ. ಅಲ್ಲದೆ ಹರಾಜು ಪ್ರಕ್ರಿಯೆಯ ಕಿರು ಪಟ್ಟಿಯಲ್ಲಿ ಸ್ಥಾನ ಪಡೆದಿರುವ ವಿಚಾರ ಕೂಡ ಅವರಿಗೆ ತಿಳಿದಿಲ್ಲ. ಪ್ರಭ್‌ಸಿಮ್ರನ್‌ ಸಿಂಗ್‌ ಇತ್ತೀಚೆಗೆ ಶ್ರೀಲಂಕಾದಲ್ಲಿ ನಡೆದ ಎಮರ್ಜಿಂಗ್‌ ಏಶ್ಯ ಕಪ್‌ ಟೂರ್ನಿಯಲ್ಲಿ ಭಾರತದ ತಂಡದಲ್ಲಿದ್ದರು. ಐಪಿಎಲ್‌ ಮಾರಾಟದ ಬಗ್ಗೆ ಸ್ವತಃ ಆಶ್ಚರ್ಯಚಕಿತರಾಗಿರುವ ಪ್ರಭ್‌ಸಿಮ್ರನ್‌ ಸಿಂಗ್‌ ಐಪಿಎಲ್‌ನಲ್ಲಿ ಆಡುವುದಕ್ಕಿಂತಲೂ ಭಾರತದ ಅಂಡರ್‌-19 ತಂಡದಲ್ಲಿ ಸ್ಥಾನ ಪಡೆಯುವುದು ತನ್ನ ಗುರಿ ಎಂದು ಹೇಳಿಕೊಂಡಿದ್ದಾರೆ.

ಅಂಡರ್‌-19 ತಂಡದಲ್ಲಿ ಸ್ಥಾನ
“ನನ್ನ ನಿಜವಾದ ಗುರಿಯೆಂದರೆ ಭಾರತದ ಅಂಡರ್‌-19 ತಂಡದಲ್ಲಿ ಸ್ಥಾನ ಸಂಪಾದಿಸುವುದು. ಐಪಿಎಲ್‌ ಬಗ್ಗೆ ತಲೆಕೆಡಿಸಿಕೊಳ್ಳುವುದಾಗಲಿ, ಈ ಕುರಿತು ಹೇಗೆ ಪ್ರತಿಕ್ರಿಯಿಸುದಾಗಲಿ ತಿಳಿಯುತ್ತಿಲ್ಲ. ತಂಡಗಳು ನನಗಾಗಿ ಹೆಚ್ಚಿನ ಹಣ ಬಿಡ್‌ ಮಾಡಿರುವ ವಿಚಾರವನ್ನು ನಂಬಲು ಸಾಧ್ಯವಾಗುತ್ತಿಲ್ಲ. ಹಲವು ಹಂತಗಳ ಅನಂತರ ನಾನು ಆಶ್ಚರ್ಯಕ್ಕೊಳಾಗಿದ್ದೆ. ಕೋಟಿಯಲ್ಲಿ ಎಷ್ಟು ಸೊನ್ನೆಗಳಿವೆ ಎಂಬುದೂ ನನಗೆ ತಿಳಿದಿಲ್ಲ. ನನ್ನೊಂದಿಗೆ ಸಹೋದರ ಅನ್ಮೋಲ್‌ಪ್ರೀತ್‌ ಸಿಂಗ್‌ ಅವರನ್ನು ಮುಂಬಯಿ ತಂಡ ಖರೀದಿಸಿದೆ ಎಂಬ ವಿಚಾರ ತಿಳಿದು ಖುಷಿಯಾಗಿದೆ’ ಎಂದು ಪ್ರಭ್‌ಸಿಮ್ರನ್‌ ಸಿಂಗ್‌ ಐಪಿಎಲ್‌ ಆಯ್ಕೆ ಕುರಿತಂತೆ ಅಭಿಪ್ರಾಯ ತಿಳಿಸಿದ್ದಾರೆ. ಆನ್ಮೋಲ್‌ 80 ಲಕ್ಷ ರೂ.ಗೆ ಮಾರಾಟವಾಗಿದ್ದಾರೆ.

ಪರೀಕ್ಷೆಯಲ್ಲಿ ಮಿಂಚಿದ ಪ್ರತಿಭೆ
ಸಪ್ಟೆಂಬರ್‌ ತಿಂಗಳಿನಲ್ಲಿ ಕಿಂಗ್ಸ್‌ ಇಲೆವನ್‌ ತಂಡದ ಬ್ಯಾಟಿಂಗ್‌ ಪರೀಕ್ಷೆಗೆ ಪ್ರಭ್‌ಸಿಮ್ರನ್‌ ಅವರನ್ನು ಆಯ್ಕೆ ಮಾಡಲಾಗಿತ್ತು. 10 ಓವರ್‌ಗಳಲ್ಲಿ 100 ರನ್‌ ಗುರಿ ತಲುಪುವ ಹಾಗೂ 8 ಓವರ್‌ಗಳಲ್ಲಿ 75 ರನ್‌ ಗಳಿಸುವ ಎರಡು ಅವಕಾಶಗಳನ್ನು ನೀಡಲಾಗಿತ್ತು. ಈ ಪರೀಕ್ಷೆಯಲ್ಲಿ ಪ್ರಭ್‌ಸಿಮ್ರನ್‌ ಸಿಂಗ್‌ ಮೊದಲ ಸನ್ನಿವೇಶದಲ್ಲಿ 19 ಎಸೆತಗಳಲ್ಲಿ ಅರ್ಧ ಶತಕ ಹಾಗೂ ಎರಡನೇ ಸನ್ನಿವೇಶದಲ್ಲಿ 29 ಎಸೆತದಲ್ಲಿ 50 ರನ್‌ ಹೊಡೆದಿದ್ದರು. ಈ ಪ್ರದರ್ಶನ ಐಪಿಎಲ್‌ಗೆ ಆಯ್ಕೆಯಾಗಲು ಕಾರಣವಾಗಿದೆ.

“ಆ ಸಂದರ್ಭದಲ್ಲಿ ನಾನು ಉತ್ತಮ ಪ್ರದರ್ಶನ ನೀಡಬೇಕು ಎಂಬ ಬಗ್ಗೆ ಮಾತ್ರ ಗಮನ ನೀಡಿದ್ದೆ. ಇದರಲ್ಲಿ ನಾನು ಯಶಸ್ವಿಯಾಗಿದ್ದೇನೆ ಎಂಬ ನಂಬಿಕೆ ಇತ್ತು. ಒಂದು ವೇಳೆ ಆಯ್ಕೆಯಾದರೆ ಒಳ್ಳೆಯದು. ಇಲ್ಲವಾದಲ್ಲಿ ಇನ್ನಷ್ಟ ಕಠಿನ ಪರಿಶ್ರಮಪಡುತ್ತೇನೆ ಎಂಬ ತೀರ್ಮಾನಕ್ಕೆ ಬಂದಿದ್ದೆ’ ಎಂದು ಬ್ಯಾಟಿಂಗ್‌ ಟೆಸ್ಟ್‌ ಕುರಿತು ಹೇಳಿದರು.

ಟಾಪ್ ನ್ಯೂಸ್

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ಚೈತನ್ಯ “ಇನ್ಫಿನಿಟಿ ಲರ್ನ್”ಗೆ ರೋಹಿತ್‌ ಶರ್ಮಾ ರಾಯಭಾರಿ

ಚೈತನ್ಯ “ಇನ್ಫಿನಿಟಿ ಲರ್ನ್”ಗೆ ರೋಹಿತ್‌ ಶರ್ಮಾ ರಾಯಭಾರಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

Untitled-1

ಅತ್ತಿಕುಪ್ಪೆಯಲ್ಲಿ ಪಡಿತರ ಉಪಕೇಂದ್ರ ಉದ್ಘಾಟನೆ,ಡೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

Dak Seva Award for Achievers

8 ಸಾಧಕರಿಗೆ ಡಾಕ್ ಸೇವಾ ಪ್ರಶಸ್ತಿ ಪ್ರಧಾನ ಮಾಡಿದ ರಾಜ್ಯಪಾಲರು

davanagere news

ಹಿರೇಕಲ್ಮಠದೊಂದಿಗೆ ಅವಿನಾಭಾವ ಸಂಬಂಧ

12

ಕ್ಷಯ ಮುಕ್ತ ದೇಶಕ್ಕೆ ಸಹಕಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.