
ಟೋಕಿಯೊ ಒಲಿಂಪಿಕ್ಸ್: ಕ್ವಾರ್ಟರ್ ಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ.ಸಿಂಧು
Team Udayavani, Jul 29, 2021, 8:44 AM IST

ಟೋಕಿಯೊ: ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಟೋಕಿಯೊ ಒಲಿಂಪಿಕ್ಸ್ ನ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಪ್ರೀ ಕ್ವಾರ್ಟರ್ ಫೈನಲ್ ನಲ್ಲಿ ಡೆನ್ಮಾರ್ಕ್ ನ ಮಿಯಾ ಬ್ಲಿಕ್ ಫೆಲ್ಟ್ ಅವರನ್ನು ಮಣಿಸಿದರು.
‘ಐ’ ವಿಭಾಗದ ಅಗ್ರಸ್ಥಾನಿಯಾಗಿದ್ದ ಮಿಯಾ ಬ್ಲಿಕ್ ಫೆಲ್ಟ್ ಅವರನ್ನು 21-15, 21-13 ಸೆಟ್ ಗಳ ಅಂತರದಿಂದ ಸೋಲಿಸಿದರು. ಇದರೊಂದಿಗೆ ಥಾಯ್ಲೆಂಡ್ ಓಪನ್ ನಲ್ಲಿನ ಬ್ಲಿಕ್ ಫೆಲ್ಟ್ ವಿರುದ್ಧದ ಸೋಲಿಗೆ ಸಿಂಧು ಒಲಿಂಪಿಕ್ಸ್ ನಲ್ಲಿ ತಿರುಗೇಟು ನೀಡಿದರು.
ಜಪಾನ್‌ನ ಅಕಾನೆ ಯಮಗುಚಿ ಮತ್ತು ಕೊರಿಯಾದ ಕಿಮ್ ಗೇನ್ ನಡುವಿನ ಪಂದ್ಯದ ವಿಜೇತರನ್ನು ಸಿಂಧು ಮುಂದಿನ ಪಂದ್ಯದಲ್ಲಿ ಎದುರಿಸಲಿದ್ದಾರೆ.
ಇದನ್ನೂ ಓದಿ:ಮಂಗಳೂರು: ಸೈನಿಕನ ಸೋಗಿನಲ್ಲಿ ಕುಟುಂಬದಿಂದ 2.23 ಲಕ್ಷ ರೂ. ಪಡೆದು ವಂಚನೆ
ಸದ್ಯ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ವಿಭಾಗದಲ್ಲಿ ಪಿ.ವಿ.ಸಿಂಧು ಭಾರತದ ಏಕೈಕ ಆಶಾಕಿರಣವಾಗಿದ್ದಾರೆ. ಪುರುಷರ ವಿಭಾಗದಲ್ಲಿ ಸ್ಪರ್ಧಿಸಿದ್ದ ಸಾಯಿ ಪ್ರಣೀತ್ ಸೋಲನುಭವಿಸಿದ್ದಾರೆ.
ಡಬಲ್ಸ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಚಿರಾಗ್ ಶೆಟ್ಟಿ- ಸಾತ್ವಿಕ್ ಸಾಯ್ ರಾಜ್ ರಾಂಕಿರೆಡ್ಡಿ ಮಂಗಳವಾರ ಸೋಲನುಭವಿಸಿದ್ದರು. ಗ್ರೂಪ್ ಹಂತದಲ್ಲಿ ಎರಡು ಪಂದ್ಯಗಳನ್ನು ಈ ಜೋಡಿ ಗೆದ್ದಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
