ರಾಹುಲ್ ನೇತೃತ್ವದಲ್ಲಿ ಸಂಸದರ ಪ್ರತಿಭಟನೆ
Team Udayavani, Mar 24, 2018, 6:00 AM IST
ನವದೆಹಲಿ: ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ (ದೌರ್ಜನ್ಯ ತಡೆ) ಕಾಯ್ದೆ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನ ಮರುಪರಿಶೀಲನೆಗೆ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ನೇತೃತ್ವದಲ್ಲಿ ಪಕ್ಷದ ಸಂಸದರು ಶುಕ್ರವಾರ ಸಂಸತ್ ಭವನದ ಆವರಣದೆದುರು ಪ್ರತಿಭಟನೆ ನಡೆಸಿದ್ದಾರೆ.
ಕೇಂದ್ರ ಸರ್ಕಾರವು ಈ ವಿಚಾರದಲ್ಲಿ ಕೋರ್ಟ್ ಮುಂದೆ ಸೂಕ್ತವಾಗಿ ವಾದ ಮಂಡಿಸುತ್ತಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ಸಂಸದರು, ಸರ್ಕಾರ, ತೀರ್ಪಿನ ಮರುಪರಿಶೀಲನಾ ಅರ್ಜಿ ಸಲ್ಲಿಸಿ, ಕಾಯ್ದೆಯಲ್ಲಿ ತಿದ್ದುಪಡಿ ತರುವಂತೆ ಆಗ್ರಹಿಸಿದ್ದಾರೆ. ಎಸ್/ಎಸ್ಟಿ ಕಾಯ್ದೆಯನ್ವಯ ಅಧಿಕಾರಿಗಳ ವಿರುದ್ಧ ಕೇಸು ದಾಖಲಾದ ಕೂಡಲೇ ಅವರನ್ನು ಬಂಧಿಸುವುದು ಸೇರಿದಂತೆ ಕೆಲವು ನಿಬಂಧನೆಗಳನ್ನು ಸಡಿಲಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಇದೇ ವೇಳೆ, ಸುಪ್ರೀಂ ತೀರ್ಪು ಮರುಪರಿಶೀಲನೆಗೆ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸದೇ ಇದ್ದರೆ, ಅದು ಖಂಡಿತಾ ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಬಿಜೆಪಿಯ ದಲಿತ ಸಂಸದ ಉದಿತ್ ರಾಜ್ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು