ಭರ್ಜರಿ ಶತಕ ಬಾರಿಸಿದ ಪೃಥ್ವಿ ಶಾ: ಕಿವೀಸ್ ‘ಎ’ ಜಯ ಸಾಧಿಸಿದ ಭಾರತದ ಹುಡುಗರು

Team Udayavani, Jan 19, 2020, 12:11 PM IST

ಲಿಂಕೋಲಿನ್ ( ನ್ಯೂಜಿಲ್ಯಾಂಡ್): ಭಾರತದ ಯುವ ಆಟಗಾರ ಪೃಥ್ವಿ ಶಾ ಕಿವೀಸ್ ನೆಲದಲ್ಲಿ ಮಿಂಚಿದ್ದಾರೆ.  ಉಭಯ ದೇಶಗಳ ‘ಎ’ ತಂಡಗಳ ಸರಣಿಯಲ್ಲಿ ಶುಭ್ಮನ್ ಗಿಲ್ ಬಳಗ ದ್ವಿತೀಯ ಏಕದಿನ ಪಂದ್ಯವನ್ನು ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಪೃಥ್ವಿ ಶಾ ಭರ್ಜರಿ ಬ್ಯಾಟಿಂಗ್ ನೆರವಿನಿಂದ 372 ರನ್ ಗಳಿಸಿತು. ಶಾ ಕೇವಲ 100 ಎಸೆತಗಳಿಂದ 150 ರನ್ ಬಾರಿಸಿದರು. ಉಳಿದಂತೆ ಮಯಾಂಕ್ ಅಗರ್ವಾಲ್ 32 ರನ್, ವಿಜಯ್ ಶಂಕರ್ 58 ರನ್ ಗಳಿಸಿದರು.

ಅಂತಿಮವಾಗಿ ಸತತವಾಗಿ ವಿಕೆಟ್ ಕಳೆದುಕೊಂಡ ಭಾರತ 49.2 ಓವರ್ 372 ರನ್ ಗೆ ಆಲ್ ಔಟ್ ಆಯಿತು.

ಗುರಿ ಬೆನ್ನತ್ತಿದ ಕಿವೀಸ್ ತಂಡ ಕೂಡ ಒಂದು ಹಂತದಲ್ಲಿ ಗೆಲುವಿನ ಕನಸು ಕಂಡಿತ್ತು. ಆರಂಭಿಕ ಆಟಗಾರ ಜ್ಯಾಕ್ ಬಾಯ್ಲ್ ಎಸೆತಕ್ಕೊಂದರಂತೆ 130 ರನ್ ಗಳಿಸಿದರು. ಉಳಿದಂತೆ ಫಿನ್ ಆಲೆನ್ 87 ರನ್ ಗಳಿಸಿದರು. ಅಂತಿಮವರೆಗೆ ಪ್ರಯತ್ನ ಮಾಡಿದರೂ ಕಿವೀಸ್ ಎ’ ತಂಡ ಆರು ವಿಕೆಟ್ ನಷ್ಟಕ್ಕೆ 360 ರನ್ ಗಳಿಸಲಷ್ಟೇ ಶಕ್ತವಾಯಿತು.

ಭಾರತದ ಪರ ಇಶಾನ್ ಪೊರೇಲ್ ಮತ್ತು ಕೃನಾಲ್ ಪಾಂಡ್ಯ ತಲಾ ಎರಡು ವಿಕೆಟ್ ಪಡೆದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ನಾನೇ ನನಗೆ ಗೌರವ/ಮೌಲ್ಯ ಕೊಟ್ಟುಕೊಳ್ಳುವುದಿಲ್ಲ ಎಂದರೆ, ನನ್ನನ್ನು ನಾನೇ ಪ್ರೀತಿಸುವುದಿಲ್ಲ ಎಂದರೆ, ಬೇರೆಯವರ್ಯಾಕೆ ನನ್ನನ್ನು ಗೌರವಿಸುತ್ತಾರೆ? ಪ್ರೀತಿಸುತ್ತಾರೆ?...

  • ಬೀಜಿಂಗ್‌/ಹೊಸದಿಲ್ಲಿ: ಚೀನದಲ್ಲಿ ಉದ್ಭವಿಸಿದ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಈಗ ಜಾಗತಿಕವಾಗಿ ಗೋಚರಿಸಲಾರಂಭಿಸಿದೆ. ಆರು ದಿನಗಳಿಂದ ಜಗತ್ತಿನ ನಾನಾ ಷೇರು...

  • ಇಂದ್ರಾಣಿ ನದಿಯ ಇಂದಿನ ಕುರೂಪಕ್ಕೆ ನಗರಸಭೆಯನ್ನು ಎಷ್ಟು ದೂರಿದರೂ ಸಾಲದು ಎನ್ನುತ್ತವೆ ದಾಖಲೆಗಳು. ಸುದಿನ ಅಧ್ಯಯನ ತಂಡ ಸಂಗ್ರಹಿಸಿದ ಹಲವು ದಾಖಲೆಗಳು ಸಾಬೀತು...

  • ಕಾಸರಗೋಡು: ರಾಜ್ಯ ಸರಕಾರ ಮುಂಗಡಪತ್ರದಲ್ಲಿ ಘೋಷಿಸಿರುವ "ಹಸಿವು ರಹಿತ ರಾಜ್ಯ ಯೋಜನೆ'ಯ ಅಂಗವಾಗಿ ಇನ್ನು ಮುಂದೆ ಕಾಸರಗೋಡಿನಲ್ಲೂ 25 ರೂ.ಗೆ ಮಧ್ಯಾಹ್ನ ಭೋಜನ ಲಭಿಸಲಿದೆ. ಜಿಲ್ಲಾಧಿಕಾರಿ...

  • ಬೆಂಗಳೂರು: ಆಶ್ರಯ ಮನೆ ನಿರ್ಮಾಣ ಅಕ್ರಮದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆರಂಭಿಸಿರುವ ವಿಜಿಲ್‌ ಮೊಬೈಲ್‌ ಆ್ಯಪ್‌ನ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಆ್ಯಪ್‌...