ಪ್ರೊ ಕಬಡ್ಡಿ ಲೀಗ್ ಅಭಿಮಾನಿಗಳಿಗೆ ಕಹಿ ಸುದ್ದಿ ನೀಡಿದ ಸಂಘಟಕರು!
Team Udayavani, Nov 29, 2020, 2:50 PM IST
ಹೊಸದಿಲ್ಲಿ: ಎಂಟನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಪಂದ್ಯಾವಳಿಯನ್ನು ಕೋವಿಡ್-19 ಕಾರಣದಿಂದ ಮುಂದೂಡಲು ತೀರ್ಮಾನಿಸಲಾಗಿದೆ. ಶನಿವಾರ ಕೂಟದ ಸಂಘಟಕರು ಈ ಬಗ್ಗೆ ಅಧಿಕೃತ ಪ್ರಕಟನೆ ಹೊರಡಿಸಿದರು.
“ಕೋವಿಡ್-19 ಕಾರಣದಿಂದ 8ನೇ ಪ್ರೊ ಕಬಡ್ಡಿ ಲೀಗ್ ಪಂದ್ಯಾವಳಿಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಆಟಗಾರರ ಸುರಕ್ಷತೆ ನಮಗೆ ಮುಖ್ಯ. ಒಮ್ಮೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಬಳಿಕ ಮುಂದಿನ ವರ್ಷ ಇದನ್ನು ಆಯೋಜಿಸುವ ಯೋಜನೆ ನಮ್ಮದು’ ಎಂಬುದಾಗಿ ಸಂಘಟಕರು ತಿಳಿಸಿದ್ದಾರೆ.
“ಪ್ರಸ್ತುತ ಪರಿಸ್ಥಿತಿಯಲ್ಲಿ ಆಟಗಾರರ ಅಧಿಕೃತ ಮಾರ್ಗಸೂಚಿಗಳು ಮತ್ತು ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಪ್ರೊ ಕಬಡ್ಡಿ ಲೀಗ್ ನ ಸೀಸನ್ 8 ಅನ್ನು ಮುಂದೂಡುವುದಕ್ಕೆ ನಾವು ವಿಷಾದಿಸುತ್ತೇವೆ” ಎಂದು ಪಿಕೆಎಲ್ ವೆಬ್‌ಸೈಟ್‌ನಲ್ಲಿ ಪ್ರಕಟಣೆ ನೀಡಲಾಗಿದೆ.
ಕಳೆದ ಸೀಸನ್ ನ ಪ್ರೊ ಕಬಡ್ಡಿ ಲೀಗ್ ನಲ್ಲಿ ಬೆಂಗಾಲ್ ವಾರಿಯರ್ಸ್ ಹೊಸ ಚಾಂಪಿಯನ್ ಆಗಿ ಮೂಡಿ ಬಂದಿತ್ತು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444