Double century ಬಾರಿಸಿ ರಾಷ್ಟ್ರೀಯ ತಂಡದ ಕದ ಬಡಿದ ಚೇತೇಶ್ವರ್‌ ಪೂಜಾರ

Team Udayavani, Jan 7, 2024, 8:20 PM IST

1-saddsa

ರಾಜ್‌ಕೋಟ್‌: ಚೇತೇಶ್ವರ್‌ ಪೂಜಾರ ದ್ವಿಶತಕದ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಜತೆಗೆ ಭಾರತದ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ ಗಳಿಸಿದವರ ಯಾದಿಯಲ್ಲಿ 4ನೇ ಸ್ಥಾನಕ್ಕೆ ಲಗ್ಗೆ ಹಾಕಿದ್ದಾರೆ. ಈ ಸಾಧನೆಯಿಂದಾಗಿ ಅವರು ಮತ್ತೆ ರಾಷ್ಟ್ರೀಯ ತಂಡದ ಬಾಗಿಲು ಬಡಿದಿರುವುದು ಸ್ಪಷ್ಟ. ಮುಂಬರುವ ಇಂಗ್ಲೆಂಡ್‌ ಎದುರಿನ 5 ಪಂದ್ಯಗಳ ಟೆಸ್ಟ್‌ ಸರಣಿಗೆ ಪೂಜಾರ ಟೀಮ್‌ ಇಂಡಿಯಾಕ್ಕೆ ಮರಳಬಹುದೇ ಎಂಬುದೊಂದು ಕುತೂಹಲ.

ಜಾರ್ಖಂಡ್‌ ಎದುರಿನ ರಣಜಿ ಪಂದ್ಯದ 3ನೇ ದಿನ ಬ್ಯಾಟಿಂಗ್‌ ಮುಂದುವರಿಸಿದ ಪೂಜಾರ ಅಜೇಯ 243 ರನ್‌ ಬಾರಿಸಿದರು. 356 ಎಸೆತಗಳನ್ನು ಎದುರಿಸಿ ನಿಂತ ಅವರು ಬರೋಬ್ಬರಿ 30 ಬೌಂಡರಿ ಸಿಡಿಸಿದರು.

61ನೇ ಶತಕ, 17ನೇ ದ್ವಿಶತಕ
ಇದು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಪೂಜಾರ ಬಾರಿಸಿದ 61ನೇ ಶತಕ, 17ನೇ ದ್ವಿಶತಕ. ಇದರೊಂದಿಗೆ ಅವರು ಅತ್ಯಧಿಕ ಶತಕ ಬಾರಿಸಿದ ಭಾರತದ ಸಾಧಕರ ಯಾದಿಯಲ್ಲಿ ತೃತೀಯ ಸ್ಥಾನಿಯಾದರು. ಸಚಿನ್‌ ತೆಂಡುಲ್ಕರ್‌ (81), ರಾಹುಲ್‌ ದ್ರಾವಿಡ್‌ (68) ಮೊದಲೆರಡು ಸ್ಥಾನದಲ್ಲಿದ್ದಾರೆ. ವಿಜಯ್‌ ಹಜಾರೆ 4ನೇ ಸ್ಥಾನಕ್ಕೆ ಇಳಿದರು (60).
ಪೂಜಾರ ಪ್ರಥಮ ದರ್ಜೆ ದ್ವಿಶತಕ ಸಾಧಕರ ಯಾದಿಯಲ್ಲಿ ಹರ್ಬರ್ಟ್‌ ಸಟ್‌ಕ್ಲಿಫ್ ಮತ್ತು ಮಾರ್ಕ್‌ ರಾಮ್‌ಪ್ರಕಾಶ್‌ ಅವರೊಂದಿಗೆ ಜಂಟಿ 4ನೇ ಸ್ಥಾನಿಯಾಗಿದ್ದಾರೆ. ಸರ್‌ ಡೊನಾಲ್ಡ್‌ ಬ್ರಾಡ್‌ಮನ್‌ ಅಗ್ರಸ್ಥಾನ ಅಲಂಕರಿಸಿದ್ದಾರೆ (37). ವ್ಯಾಲಿ ಹ್ಯಾಮಂಡ್‌ (36), ಪ್ಯಾಟ್ಸೆ ಹಂಡ್ರೆನ್‌ (22) ಅನಂತರದ ಸ್ಥಾನದಲ್ಲಿದ್ದಾರೆ.

ಪ್ರಥಮ ದರ್ಜೆ ಸಾಧನೆ
ಈ ಇನ್ನಿಂಗ್ಸ್‌ನಲ್ಲಿ 161 ರನ್‌ ಗಳಿಸಿದ ವೇಳೆ ಭಾರತದ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 19,730 ರನ್‌ ಮಾಡಿದ್ದ ವಿವಿಎಸ್‌ ಲಕ್ಷ್ಮಣ್‌ ಅವರನ್ನು ಪೂಜಾರ ಹಿಂದಿಕ್ಕಿದರು. ಈ ಯಾದಿಯಲ್ಲಿ ಅವರಿಗೀಗ 4ನೇ ಸ್ಥಾನ. ಮೊದಲ ಮೂವರೆಂದರೆ ಸುನೀಲ್‌ ಗಾವಸ್ಕರ್‌ (25,834), ಸಚಿನ್‌ ತೆಂಡುಲ್ಕರ್‌ (25,396) ಮತ್ತು ರಾಹುಲ್‌ ದ್ರಾವಿಡ್‌ (23,794).
2023ರ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಕಳಪೆ ಆಟವಾಡಿದ ಕಾರಣ ಪೂಜಾರ ಅವರನ್ನು ತಂಡದಿಂದ ಕೈಬಿಡಲಾಗಿತ್ತು.

ಟಾಪ್ ನ್ಯೂಸ್

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.