ಪ್ರಶಸ್ತಿ ಉಳಿಸಿಕೊಳ್ಳಲು ಪಿ. ವಿ. ಸಿಂಧುಗೆ ಸತ್ವಪರೀಕ್ಷೆ

Team Udayavani, Dec 11, 2019, 12:35 AM IST

ಗ್ವಾಂಗ್‌ಝೂ: ಭಾರತದ ಸ್ಟಾರ್‌ ಶಟ್ಲರ್‌ ಮತ್ತು ಹಾಲಿ ಚಾಂಪಿ ಯನ್‌ ಆಗಿರುವ ಪಿ.ವಿ. ಸಿಂಧು ಬುಧವಾರದಿಂದ ಆರಂಭವಾಗುವ ವರ್ಷಾಂತ್ಯದ ಬಿಡಬ್ಲ್ಯುಎಫ್ ವಿಶ್ವ ಟೂರ್‌ ಫೈನಲ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರಶಸ್ತಿ ಯನ್ನು ತನ್ನಲ್ಲಿ ಉಳಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ವಿಶ್ವ ಚಾಂಪಿಯನ್‌ ಪ್ರಶಸ್ತಿ ಗೆದ್ದ ಬಳಿಕ ಹಲವು ಕೂಟಗಳಲ್ಲಿ ಸಿಂಧು ಭಾಗವಹಿಸಿದ್ದರೂ ಗಮನಾರ್ಹ ನಿರ್ವ ಹಣೆ ನೀಡಲು ವಿಫ‌ಲರಾಗಿದ್ದರು. ಕಳೆದ ಆಗಸ್ಟ್‌ನಲ್ಲಿ ತನ್ನ ಬಾಳ್ವೆಯ ಮಹೋನ್ನತ ಸಾಧನೆ ಮಾಡಿದ ಬಳಿಕ ಸಿಂಧು ಕೊರಿಯ, ಚೀನ ಓಪನ್‌ನ ಮೊದಲ ಸುತ್ತಿನಲ್ಲಿ ಮುಗ್ಗರಿಸಿದ್ದರೆ ಮೂರು ಪ್ರಮುಖ ಕೂಟಗಳಲ್ಲಿ ದ್ವಿತೀಯ ಸುತ್ತಿನಲ್ಲಿ ಸೋತಿದ್ದರು. ಫ್ರೆಂಚ್‌ ಓಪನ್‌ನಲ್ಲಿ ಕ್ವಾರ್ಟರ್‌ಫೈನಲ್‌ ತಲುಪಿದ ಸಾಧನೆ ಮಾಡಿದ್ದರು. ಹೀಗಾಗಿ ಸಿಂಧು ಅವರಿಗೆ ಈ ಕೂಟ ನಿಜವಾಗಿಯೂ ಸತ್ವಪರೀಕ್ಷೆಯಾಗಿದೆ ಮಾತ್ರವಲ್ಲದೇ ಮುಂದಿನ ವರ್ಷ ನಡೆಯುವ ಟೋಕಿಯೊ ಒಲಿಂಪಿಕ್‌ನಲ್ಲಿ ಪದಕ ಗೆಲ್ಲುವ ಭರವಸೆಯನ್ನು ಮೂಡಿಸುವ ನಿಟ್ಟಿನಲ್ಲಿ ಈ ಕೂಟ ಮಹತ್ವದ್ದಾಗಿದೆ.

ಬ್ಯಾಡ್ಮಿಂಟನ್‌ ರ್‍ಯಾಂಕಿಂಗ್‌ನ ಅಗ್ರ 8 ಮಂದಿ ಮಾತ್ರ ಈ ಕೂಟದಲ್ಲಿ ಭಾಗವಹಿ ಸಲಿದ್ದಾರೆ. ಸಿಂಧು 15ನೇ ರ್‍ಯಾಂಕ್‌ ಹೊಂದಿದ್ದರೂ ವಿಶ್ವ ಚಾಂಪಿಯನ್‌ ಆಗಿರುವ ಕಾರಣ ವನಿತಾ ಸಿಂಗಲ್ಸ್‌ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. “ಎ’ ಬಣದಲ್ಲಿರುವ ಸಿಂಧು ಅವರು ಚೀನದ ಚೆನ್‌ ಯು ಫೀ, ಹಿ ಬಿಂಗ್‌ ಜಿಯೊ ಮತ್ತು ಜಪಾನಿನ ಯಮಗುಚಿ ಜತೆ ಸ್ಪರ್ಧಿಸಲಿದ್ದಾರೆ.

ಜಪಾನಿನ ಅಕಾನೆ ಯಮಗುಚಿ ಅವರನ್ನು ಎದರಿಸುವ ಮೂಲಕ ಸಿಂಧು ತನ್ನ ಅಭಿಯಾನ ಆರಂಭಿಸಲಿದ್ದಾರೆ. ಗಾಯದ ಸಮಸ್ಯೆಗೆ ಸಿಲುಕುವ ಮೊದಲು ಇಂಡೋನೇಶ್ಯ ಮತ್ತು ಜಪಾನ್‌ ಓಪನ್‌ ಕೂಟದ ಪ್ರಶಸ್ತಿ ಗೆದ್ದಿದ್ದ ಯಮಗುಚಿ ಆಬಳಿಕ ನಾಲ್ಕು ಕೂಟಗಳಲ್ಲಿ ಮೊದಲ ಸುತ್ತಿನಲ್ಲಿ ಸೋತಿದ್ದರು. ಆದರೆ ಫ್ರೆಂಚ್‌ ಓಪನ್‌ನಲ್ಲಿ ಸೆಮಿಫೈನಲ್‌ ತಲುಪುವ ಮೂಲಕ ಮತ್ತೆ ಫಾರ್ಮ್ಗೆ ಮರಳಿರುವ ಸೂಚನೆ ನೀಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ರೋಮಾಂಚನವನ್ನು ಜೀವನದಲ್ಲಿ ಒಮ್ಮೆಯಾದರೂ ನೋಡಲೇಬೇಕು. ಅಲ್ಲಿ ಜರುಗುವುದು ನಮ್ಮ ಸೇನಾಶಕ್ತಿಯ ವಿಶ್ವರೂಪ ದರ್ಶನ....

  • ನಾಳೆ ಬೆಳಗಾದರೆ ಗಣತಂತ್ರದ ಹಬ್ಬದ ಸಂಭ್ರಮ, ರಾಜಧಾನಿ ದೆಹಲಿಯನ್ನು ರಂಗೇರಿಸಲಿದೆ. ರಾಜಪಥದಲ್ಲಿ ನಡೆಯುವ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಈ ಬಾರಿ ಕರ್ನಾಟಕದ...

  • ಮಂಗಳೂರು: ಇದುವರೆಗೆ ಕಪ್ಪು ಬಿಳುಪಿನಲ್ಲಿದ್ದು, ಮುಖ ಗುರುತು ಸಿಗುವುದು ಕಷ್ಟ ಎಂಬಂತಿದ್ದ ಮತದಾರರ ಗುರುತಿನ ಚೀಟಿ ಈಗ ಬಾರ್‌ಕೋಡ್‌, ಕಲರ್‌ ಫೋಟೋ ಸಹಿತ ಬಹು ವರ್ಣಗಳಲ್ಲಿ...

  • ಅಂಡಮಾನಿನ ಎಲ್ಲ ಗೂಬೆಗಳೂ ಕ್ಯಾಮೆರಾಗಳಲ್ಲಿ ಬಂಧಿಯಾದವು; ಒಂದನ್ನು ಬಿಟ್ಟು. ಒಳಬಾರದೆ ಹೊರವುಳಿದ ಗೂಬೆಯೆಂದರೆ, ಅಂಡಮಾನ್‌ ಬಾರ್ನ್ ಔಲ್‌. ಅಂದರೆ, ಅಂಡಮಾನ್‌...

  • ಲಂಕೆಯಲ್ಲಿ ಯುದ್ಧವೆಲ್ಲ ಮುಗಿದು, ಮರಳುವಾಗ ವಿಮಾನದ ಮೇಲಿಂದ ರಾಮನು ತನ್ನೊಲವಿನ ಮಡದಿ ಸೀತೆಗೆ ರಾಮೇಶ್ವರಂನ ದ್ವೀಪವನ್ನು ತೋರಿಸಿ- "ನೋಡಿಲ್ಲಿ, ಈ ದ್ವೀಪದಲ್ಲೇ...