ದಿಲ್ಲಿ ಕ್ರಿಕೆಟ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಜತ್ ಶರ್ಮಾ

Team Udayavani, Nov 16, 2019, 2:45 PM IST

File picture

ಹೊಸದಿಲ್ಲಿ: ದಿಲ್ಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ನ ಅಧ್ಯಕ್ಷ ಸ್ಥಾನಕ್ಕೆ ರಜತ್ ಶರ್ಮಾ ಶನಿವಾರ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆಯ ನಂತರ ಮಾತನಾಡಿದ ರಜತ್ ಶರ್ಮಾ, ಅಧ್ಯಕ್ಷನಾಗಿದ್ದ ವೇಳೆ ನನ್ನ ಮೇಲೆ ನಂಬಿಕೆ ಇಟ್ಟ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ. ಸಿಕ್ಕ ಅವಕಾಶದಲ್ಲಿ ಸಂಸ್ಥೆಯ ಅಭಿವೃದ್ಧಿಗಾಗಿ ಪ್ರಾಮಾಣಿಕತೆಯಿಂದ ದುಡಿದಿದ್ದೇನೆ ಎಂದರು.

ನಾನು ಪ್ರಾಮಾಣಿಕತೆ, ಪಾರದರ್ಶಕತೆಯಿಂದ ಕೆಲಸ ಮಾಡಬೇಕೆಂದು ಬಂದವ. ಆದರೆ ದಿಲ್ಲಿ ಕ್ರಿಕೆಟ್ ಸಂಸ್ಥೆಯಲ್ಲಿ ಅದು ಸಾಧ್ಯವಿಲ್ಲ. ಪಟ್ಟ ಭದ್ರ ಹಿತಾಸಕ್ತಿಗಳ ನಡುವೆ ಕೆಲಸ ಮಾಡುವುದು ಕಷ್ಟ ಎಂದು ಶರ್ಮಾ ಹೇಳಿದರು.

ಹಿರಿಯ ಪತ್ರಕರ್ತರಾಗಿರುವ ರಜತ್ ಶರ್ಮಾ 20 ತಿಂಗಳ ಹಿಂದಷ್ಟೇ ದಿಲ್ಲಿ ಕ್ರಿಕೆಟ್ ಅಸೋಸಿಯೇಶನ್ ನ ಅಧ್ಯಕ್ಷ ಗಾದಿಗೇರಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ