ಟಿ20 ದಾಖಲೆಯತ್ತ ರಶೀದ್ ಖಾನ್
Team Udayavani, Dec 21, 2018, 6:00 AM IST
ಬ್ರಿಸ್ಬೇನ್: ಅಫ್ಘಾನಿಸ್ಥಾನದ ಖ್ಯಾತ ಸ್ಪಿನ್ನರ್ ರಶೀದ್ ಖಾನ್ ಟಿ20 ಕ್ರಿಕೆಟ್ನಲ್ಲಿ ಐತಿಹಾಸ ದಾಖಲೆಯತ್ತ ದಾಪುಗಾಲಿಡುತ್ತಿದ್ದಾರೆ. ಅಂತಾರಾಷ್ಟ್ರೀಯ ಟಿ20 ಬೌಲಿಂಗ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನ ಕಾಯ್ದಕೊಂಡಿರುವ ರಶೀದ್ ಖಾನ್, ಕ್ಯಾಲೆಂಡರ್ ವರ್ಷವೊಂದರ ಟಿ20 ಕ್ರಿಕೆಟ್ನಲ್ಲಿ 100 ವಿಕೆಟ್ ಕಿತ್ತು ದಾಖಲೆ ಬರೆಯುವ ಎಲ್ಲ ಸಾಧ್ಯತೆ ಹೊಂದಿದ್ದಾರೆ.
ರಶೀದ್ ಈ ವರ್ಷ ಈಗಾಗಲೇ 87 ವಿಕೆಟ್ಗಳ ಗಡಿ ದಾಟಿ ವೆಸ್ಟ್ ಇಂಡೀಸಿನ ಡ್ವೇನ್ ಬ್ರಾವೊ ದಾಖಲೆಯನ್ನು ಮುರಿದಿದ್ದಾರೆ. ಬ್ರಾವೊ 2016ರಲ್ಲಿ 87 ವಿಕೆಟ್ ಉರುಳಿಸಿದ್ದರು. ಆಸ್ಟ್ರೇಲಿಯದಲ್ಲಿ ನಡೆಯುತ್ತಿರುವ ಬಿಗ್ ಬಾಶ್ ಲೀಗ್ನಲ್ಲಿ ಆಡುತ್ತಿರುವ ರಶೀದ್ ಮುಂದೆ “ವಿಕೆಟ್ ಶತಕ’ದ ಉಜ್ವಲ ಅವಕಾಶವಿದೆ. ಅಡಿಲೇಡ್ ಸ್ಟ್ರೀಕರ್ ತಂಡದ ಪರವಾಗಿ ಆಡುತ್ತಿರುವ ರಶೀದ್ ಈ ಆವೃತ್ತಿಯನ್ನು ಅತ್ಯುತ್ತಮ ರೀತಿಯಲ್ಲಿ ಆರಂಭಿಸಿದ್ದಾರೆ. ಬ್ರಿಸ್ಬೇನ್ ತಂಡದ ವಿರುದ್ಧದ ಮೊದಲ ಪಂದ್ಯದಲ್ಲಿ ಅವರು 19 ರನ್ ನೀಡಿ 3 ವಿಕೆಟ್ ಕಬಳಿಸಿದ್ದಾರೆ. ಸದ್ಯ ರಶೀದ್ ಈ ವರ್ಷ ಆಡಿರುವ 57 ಟಿ20 ಪಂದ್ಯಗಳಲ್ಲಿ 92 ವಿಕೆಟ್ ಕಿತ್ತಿದ್ದು, ಇನ್ನೂ 3 ಪಂದ್ಯಗಳನ್ನು ಆಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ