
ODI series ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿ: ಭಾರತ ತಂಡ ಪ್ರಕಟ; ಅಶ್ವಿನ್ ಸೇರ್ಪಡೆ
Team Udayavani, Sep 18, 2023, 10:49 PM IST

ಹೊಸದಿಲ್ಲಿ: ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಮೂರು ಪಂದ್ಯಗಳ ಏಕದಿದ ಸರಣಿಗೆ ತಂಡವನ್ನು ಪ್ರಕಟಿಸಲಾಗಿದೆ. ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ತಂಡಕ್ಕೆ ಮರಳಿದ್ದಾರೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮ ಅವರನ್ನು ಸರಣಿಯ ಮೊದಲೆರಡು ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ.
ಮೊದಲೆರಡು ಪಂದ್ಯಗಳಿಗೆ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. ಮೂರನೇ ಪಂದ್ಯಕ್ಕೆ ರೋಹಿತ್ ಶರ್ಮ ತಂಡಕ್ಕೆ ಮರಳಲಿದ್ದಾರೆ.
ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ ಸೆ. 22ರಂದು ನಡೆಯಲಿದ್ದರೆ ಎರಡನೇ ಪಂದ್ಯ ಇಂದೋರ್‌ನಲ್ಲಿ ಹಾಗೂ ಸೆ. 27ರಂದು ರಾಜ್‌ಕೋಟ್‌ನಲ್ಲಿ ಮೂರನೇ ಪಂದ್ಯ ಜರಗಲಿದೆ.
ಮೊದಲೆರಡು ಪಂದ್ಯಕ್ಕೆ ಭಾರತೀಯ ತಂಡ
ಕೆಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜ, ರುತುರಾಜ್ ಗಾಯಕ್ವಾಡ್, ಶುಭ್‌ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮ, ಇಶಾನ್ ಕಿಶನ್, ಶಾರ್ದೂಲ್ ಠಾಕುರ್, ವಾಷಿಂಗ್ಟನ್ ಸುಂದರ್, ಆರ್. ಅಶ್ವಿನ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games ವೈಯಕ್ತಿಕ ಡ್ರೆಸ್ಸೇಜ್: ಅನುಷ್‌ಗೆ ಕಂಚು

Asian Games ಟೆನಿಸ್: ಬೋಪಣ್ಣ-ಭೋಸಲೆಗೆ ಕಂಚು ಖಚಿತ; ರಾಮ್‌ಕುಮಾರ್-ಮೈನೆನಿ ಫೈನಲಿಗೆ

Asian Games ಸ್ಕ್ವಾಷ್: ಭಾರತ ಸೆಮಿಫೈನಲಿಗೆ; ಎರಡು ಪದಕ ಖಚಿತ

Asian Games ಫುಟ್‌ಬಾಲ್: ಸೌದಿ ವಿರುದ್ಧ ಭಾರತಕ್ಕೆ 0-2 ಸೋಲು

Wushu: ಫೈನಲ್‌ನಲ್ಲಿ ವು ಕ್ಸಿಯೊವೈ ವಿರುದ್ಧ ಸೋಲು; ರೋಶಿಬಿನಾ ದೇವಿಗೆ ಬೆಳ್ಳಿ