Ipl 2024: ಮಾಡು ಇಲ್ಲವೇ ಮಡಿ.. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ರಾಜಸ್ಥಾನ್ ರಾಯಲ್ಸ್
Team Udayavani, May 22, 2024, 7:33 PM IST
ಅಹ್ಮದಾಬಾದ್ : ಐಪಿಎಲ್ 2024 ರ ಮತ್ತೊಂದು ಕುತೂಹಲಕಾರಿ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ರಶಸ್ತಿ ರೇಸ್ನಲ್ಲಿ ಉಳಿಯಲು ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಸಿದ್ಧವಾಗಿದೆ.
ಗುಜರಾತ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಎಲಿಮಿನೇಟರ್-1 ಪಂದ್ಯದಲ್ಲಿ ಆರ್ಸಿಬಿ ಮತ್ತು ರಾಜಸ್ಥಾನ ತಂಡಗಳು ಮುಖಾಮುಖಿಯಾಗಲು ಸಿದ್ಧವಾಗಿವೆ. ಈ ಪಂದ್ಯದಲ್ಲಿ ರಾಜಸ್ಥಾನ ಟಾಸ್ ಗೆದ್ದು ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿದರು.
ನಿರ್ಣಾಯಕ ಪಂದ್ಯದಲ್ಲಿ ಎರಡು ತಂಡಗಳಿಗೆ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಏತನ್ಮಧ್ಯೆ, ಸರಣಿ ಗೆಲುವಿನೊಂದಿಗೆ ಋತುವನ್ನು ಆರಂಭಿಸಿದ ರಾಜಸ್ಥಾನ ರಾಯಲ್ಸ್ ತಂಡ ದ್ವಿತೀಯಾರ್ಧದಲ್ಲಿ ಸರಣಿ ಸೋಲುಗಳನ್ನು ಅನುಭವಿಸಿತು. ಹಾಗೂ ಋತುವಿನ ಮೊದಲ ಹಂತದಲ್ಲಿ ಸತತ ಸೋಲಿನೊಂದಿಗೆ ಲೀಗ್ ತೊರೆಯುತ್ತದೆ ಎಂದು ಭಾವಿಸಿದ್ದ ಆರ್ ಸಿಬಿ ಅನಿರೀಕ್ಷಿತವಾಗಿ ಗೆಲುವಿನೊಂದಿಗೆ ಪ್ಲೇಆಫ್ ಪ್ರವೇಶಿಸಿದೆ.
ಪ್ರಶಸ್ತಿ ರೇಸ್ನಲ್ಲಿ ಮುನ್ನಡೆಯಲು ಗೆಲ್ಲಲೇಬೇಕಾದ ಈ ಪಂದ್ಯದಲ್ಲಿ ಯಾವ ತಂಡ ಗೆಲುವು ಸಾಧಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶ್ರುತಿ ಬಿ.ಆರ್., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ
ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು
ಅನುಚಿತ ವರ್ತನೆ ; ಜೆಸ್ಕಾಂ ಗುತ್ತಿಗೆದಾರನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ
ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್ಡಿಕೆ
ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.