ಸೆಮಿ ಫೈನಲ್ ಗೂ ಮೊದಲೇ ಆಘಾತ: ನೆಟ್ಸ್ ನಲ್ಲಿ ಗಾಯಗೊಂಡ ಕ್ಯಾಪ್ಟನ್ ರೋಹಿತ್
Team Udayavani, Nov 8, 2022, 11:03 AM IST
ಅಡಿಲೇಡ್: ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಭಾರತೀಯ ನಾಯಕ ರೋಹಿತ್ ಶರ್ಮಾ ಅವರ ಬಲಗೈಗೆ ಚೆಂಡು ಬಡಿದು ಗಾಯಗೊಂಡಿದ್ದಾರೆ.
ಅವರು ಭಾರತದ ಥ್ರೋ ಡೌನ್ ಸ್ಪೆಷಲಿಸ್ಟ್ ವಿರುದ್ಧ ಬ್ಯಾಟಿಂಗ್ ಮಾಡುತ್ತಿದ್ದರು. ಈ ವೇಳೆ ಸುಮಾರು 150 ಕಿ.ಮೀ ಗೂ ಹೆಚ್ಚಿನ ವೇಗದಲ್ಲಿ ಬಂದ ಚೆಂಡು ರೋಹಿತ್ ಮುಂಗೈಗೆ ಬಡಿಯಿತು. ತಕ್ಷಣ ರೋಹಿತ್ ವೈದ್ಯಕೀಯ ಆರೈಕೆ ಪಡೆದರು. ಸ್ವಲ್ಪ ಚಿಕಿತ್ಸೆಯ ನಂತರ, ಅವರು ಮತ್ತೆ ನೆಟ್ಸ್ ನಲ್ಲಿ ಒಂದು ಚೆಂಡನ್ನು ಎದುರಿಸಲು ಪ್ರಯತ್ನಿಸಿದರು, ಆದರೆ ಬಳಿಕ ನೆಟ್ ನಿಂದ ಹೊರನಡೆದರು.
ನೆಟ್ಸ್ ಪಕ್ಕದಲ್ಲಿ ರೋಹಿತ್ ಐಸ್ ಬಾಕ್ಸ್ ಮೇಲೆ ಕುಳಿತು ಹೆಚ್ಚಿನ ಚಿಕಿತ್ಸೆ ಪಡೆದರು. ಮೆಂಟಲ್ ಕಂಡೀಷನಿಂಗ್ ಕೋಚ್ ಪ್ಯಾಡಿ ಆಪ್ಟನ್ ಜತೆ ರೋಹಿತ್ ಸುದೀರ್ಘವಾಗಿ ಚರ್ಚೆ ನಡೆಸಿದರು.
ನವೆಂಬರ್ 10 ರಂದು ಅಡಿಲೇಡ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನ ಸೆಮಿಫೈನಲ್ ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು