ಲಿಟಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಗೆ ಕೋವಿಡ್ ಪಾಸಿಟಿವ್
Team Udayavani, Mar 27, 2021, 10:35 AM IST
ಮುಂಬೈ: ಕ್ರಿಕೆಟ್ ಲೆಜೆಂಡ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಗೆ ಕೋವಿಡ್ -19 ಸೋಂಕು ತಾಗಿರುವುದು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಸಚಿನ್ ತೆಂಡೂಲ್ಕರ್ ಅವರೇ ಟ್ವಿಟ್ಟರ್ ಮೂಲಕ ಖಚಿತ ಪಡಿಸಿದ್ದಾರೆ.
ನಾನು ಸತತವಾಗಿ ಕೋವಿಡ್ ಪರೀಕ್ಷೆಗಳನ್ನು ಮಾಡಿಸುತ್ತಿದ್ದೇನೆ. ಸೂಚಿಸಲಾದ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುತ್ತಿದ್ದೇನೆ. ಆದರೂ ಇಂದು ನನಗೆ ಕೋವಿಡ್ -19 ಪಾಸಿಟಿವ್ ಆಗಿರುವುದು ದೃಢಪಟ್ಟಿದೆ ಎಂದು ಸಚಿನ್ ಟ್ವೀಟ್ ಮಾಡಿದ್ದಾರೆ.
ಮನೆಯ ಇತರ ಸದಸ್ಯರ ವರದಿ ನೆಗೆಟಿವ್ ಆಗಿದೆ. ನಾನು ಮನೆಯಲ್ಲಿಯೇ ಕ್ವಾರಂಟೈನ್ ನಲ್ಲಿದ್ದು, ವೈದ್ಯರು ಸೂಚಿಸಿದ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದದೇನೆ ಎಂದು ಎಂದು ಸಚಿನ್ ಹೇಳಿದ್ದಾರೆ.
— Sachin Tendulkar (@sachin_rt) March 27, 2021