ಐಪಿಎಲ್ಗೆ ಮೊದಲ ನೇಪಾಳ ಕ್ರಿಕೆಟಿಗ ಪ್ರವೇಶ
Team Udayavani, Jan 29, 2018, 6:45 AM IST
ಕಠ್ಮಂಡು (ನೇಪಾಳ): ಐಪಿಎಲ್ ಅದೆಷ್ಟೋ ಕ್ರಿಕೆಟಿಗರಿಗೆ ಜೀವನ ನೀಡಿದೆ. ಕೋಟ್ಯಾಧಿಶರನ್ನಾಗಿ ಮಾಡಿದೆ. ಸುಖದ ಬದುಕನ್ನೇ ಕಟ್ಟಿಕೊಟ್ಟಿದೆ. ಇದೀಗ ನೇಪಾಳ ಲೆಗ್ಸ್ಪಿನ್ನರ್ವೊಬ್ಬರು ಮೊದಲ ಬಾರಿಗೆ ಟಿ20 ಕೂಟದಲ್ಲಿ ಪಾಲ್ಗೊಳ್ಳಲು ಸಜ್ಜಾಗಿದ್ದಾರೆ. ಇವರು ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ 20 ಲಕ್ಷ ರೂ.ಗೆ ಬಿಕರಿಯಾಗಿದ್ದಾರೆ. ಪೂರ್ಣ ಹೆಸರು ಸಂದೀಪ್ ಲಮಿಚಾನೆ.
2016ರಲ್ಲಿ ನಡೆದ 19 ವರ್ಷ ವಯೋಮಿತಿಯೊಳಗಿನ ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ದೇಶ ಪ್ರತಿನಿಧಿಸಿದ್ದರು. ಐರೆಲಂಡ್ ವಿರುದ್ಧ ನಡೆದ ಪಂದ್ಯದಲ್ಲಿ 1 ಹ್ಯಾಟ್ರಿಕ್ ಸೇರಿದಂತೆ 5 ವಿಕೆಟ್ ಪಡೆದು ಗಮನ ಸೆಳೆದಿದ್ದರು. ಇವರು ಲಿಸ್ಟ್ ಎ ಕ್ರಿಕೆಟ್ನಲ್ಲಿ 9 ಪಂದ್ಯವನ್ನಾಡಿದ್ದಾರೆ. ಒಟ್ಟಾರೆ 12 ವಿಕೆಟ್ ಪಡೆದಿದ್ದಾರೆ. 48ಕ್ಕೆ 3 ವಿಕೆಟ್ ಇವರ ಶ್ರೇಷ್ಠ ಸಾಧನೆ. ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮೈಕೆಲ್ ಕ್ಲಾರ್ಕ್ ಅಕಾಡೆಮಿಯಿಂದ ಅವರು ತರಬೇತಿ ಪಡೆದುಕೊಂಡಿದ್ದಾರೆ. ಇದೀಗ ಅವರು ಖ್ಯಾತ ಕ್ರಿಕೆಟಿಗರಾದ ಗೌತಮ್ ಗಂಭೀರ್, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಟ್ರಂಟ್ ಬೌಲ್ಟ್ ಜತೆಗೆ ಡ್ರೆಸ್ಸಿಂಗ್ ರೂಮ್ ಹಂಚಿಕೊಳ್ಳಲಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ