ಆರ್ ಸಿಬಿ ಮಹಿಳಾ ತಂಡಕ್ಕೆ ಮೆಂಟರ್ ಆದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ
Team Udayavani, Feb 15, 2023, 12:38 PM IST
ಬೆಂಗಳೂರು: ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ಚೂಚ್ಚಲ ಆವೃತ್ತಿಯ ಮಹಿಳಾ ಪ್ರಿಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೆಂಟರ್ ಆಗಿ ನೇಮಿಸಿದೆ.
ಇದುವರೆಗೆ ಸಾನಿಯಾ ಮಿರ್ಜಾ 6 ಗ್ರ್ಯಾಡ್ ಸ್ಲ್ಯಾಮ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಆಸ್ಟ್ರೇಲಿಯನ್ ಓಪನ್ ನ ಮಿಶ್ರ ಡಬಲ್ಸ್ ವಿಭಾಗದಲ್ಲಿ ರೋಹನ್ ಬೋಪಣ್ಣ ಅವರೊಂದಿಗೆ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಟೆನ್ನಿಸ್ ಲೋಕಕ್ಕೆ ವಿದಾಯ ಹೇಳಿರುವ ಸಾನಿಯಾ ಮಿರ್ಜಾ ಮೆಂಟರ್ ಆಗುವ ಮೂಲಕ ಹೊಸ ಯಾನವನ್ನು ಆರಂಭಿಸಿದ್ದಾರೆ.
ಈ ಬಗ್ಗೆ ಆರ್ ಸಿಬಿ ಫ್ರಾಂಚೈಸಿ ಅಧಿಕೃತ ತನ್ನ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಕೊಟ್ಟಿದ್ದು, ವಿಡಿಯೋವೊಂದನ್ನು ಹಂಚಿಕೊಂಡು ತನ್ನ ತಂಡದ ಮೆಂಟರ್ ನ್ನು ಪರಿಚಯಿಸಿದೆ.
ಫೆ.13 ರಂದು ಮಹಿಳಾ ಪ್ರಿಮಿಯರ್ ಲೀಗ್ ನ ಮೊದಲ ಆವೃತ್ತಿಯ ಹರಾಜು ಪ್ರಕ್ರಿಯೆ ನಡೆದಿದೆ. ಈ ವೇಳೆ ಆರ್ ಸಿಬಿ ಸೇರಿದಂತೆ ಇತರ ತಂಡಗಳು ದೇಶಿಯ ಹಾಗೂ ವಿದೇಶಿ ಆಟಗಾರ್ತಿಯರನ್ನು ಖರೀದಿಸಿದೆ.
ಮಾರ್ಚ್ 4 ರಿಂದ ಮಹಿಳಾ ಪ್ರಿಮಿಯರ್ ಲೀಗ್ ಆರಂಭವಾಗಲಿದೆ. ಮಾರ್ಚ್ 5 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬಯಿನಲ್ಲಿ ಆರ್ ಸಿಬಿ ತನ್ನ ಮೊದಲ ಪಂದ್ಯವನ್ನು ಆಡಲಿದೆ.
ಆರ್ ಸಿಬಿ ಮಹಿಳಾ ತಂಡ:
ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಬನಾ, ಹೀದರ್ ನೈಟ್, ಡೇನ್ ವ್ಯಾನ್ ನೀಕೆರ್ಕ್, ಪ್ರೀತಿ ಬೋಸ್, ಕೋಮಲ್ ಖೇಮ್ನಾರ್, ಮೆಗನ್ ಶುಟ್, ಸಹನಾ ಪವಾರ್.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?