
ನ್ಯೂಜಿಲ್ಯಾಂಡ್ ವಿರುದ್ಧ ಏಕದಿನ ಸರಣಿಗೆ ತಂಡದ ಆಯ್ಕೆ: ಸಂಜು ಸ್ಯಾಮ್ಸನ್ ಗೆ ನಾಯಕತ್ವ
Team Udayavani, Sep 16, 2022, 3:25 PM IST

ಮುಂಬೈ: ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿಯು ಚೆನ್ನೈನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ‘ಎ’ ವಿರುದ್ಧದ ಮೂರು ಪಂದ್ಯಗಳ ಮಾಸ್ಟರ್ ಕಾರ್ಡ್ ಏಕದಿನ ಸರಣಿಗೆ ಭಾರತ ‘ಎ’ ತಂಡವನ್ನು ಆಯ್ಕೆ ಮಾಡಿದೆ.
ವಿಕೆಟ್ ಕೀಪರ್ ಬ್ಯಾಟ್ಸಮನ್ ಸಂಜು ಸ್ಯಾಮ್ಸನ್ ಅವರಿಗೆ ತಂಡದ ನಾಯಕತ್ವದ ಜವಾಬ್ದಾರಿ ವಹಿಸಲಾಗಿದೆ. ಅಂಡರ್ 19 ತಂಡದಲ್ಲಿ ಮಿಂಚಿದ್ದ ರಾಜ್ ಅಂಗದ್ ಬಾವಾ ಅವರನ್ನೂ ಆಯ್ಕೆ ಮಾಡಲಾಗಿದೆ.
ಮತ್ತೆ ರಾಷ್ಟ್ರೀಯ ತಂಡ ಸೇರುವ ಪ್ರಯತ್ನದಲ್ಲಿರುವ ಹಲವು ಇಲ್ಲಿ ಸ್ಥಾನ ಪಡೆದಿದ್ದಾರೆ. ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ನವದೀಪ್ ಸೈನಿ ಇಲ್ಲಿ ಸ್ಥಾನ ಪಡೆದಿದ್ದಾರೆ. ವಿಕೆಟ್ ಕೀಪರ್ ಆಗಿ ಕೆ.ಎಸ್ ಭರತ್ ಆಯ್ಕೆಯಾಗಿದ್ದಾರೆ.
ಸೆ.22, 25 ಮತ್ತು 25ರಂದು ಈ ಮೂರು ಏಕದಿನ ಪಂದ್ಯಗಳು ನಡೆಯಲಿದೆ. ಮೂರೂ ಪಂದ್ಯಗಳೂ ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ.
ಇದನ್ನೂ ಓದಿ:ಜೆಫ್ ಬೆಜೋಸ್ ಹಿಂದಿಕ್ಕಿದ ಉದ್ಯಮಿ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತ ವ್ಯಕ್ತಿ: ವರದಿ
ಭಾರತ ಎ ತಂಡ: ಪೃಥ್ವಿ ಶಾ, ಅಭಿಮನ್ಯು ಈಶ್ವರನ್, ಋತುರಾಜ್ ಗಾಯಕ್ವಾಡ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಸಂಜು ಸ್ಯಾಮ್ಸನ್ (ನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಕುಲದೀಪ್ ಯಾದವ್, ಶಹಬಾಜ್ ಅಹ್ಮದ್, ರಾಹುಲ್ ಚಾಹರ್, ತಿಲಕ್ ವರ್ಮಾ, ಕುಲದೀಪ್ ಸೇನ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ನವದೀಪ್ ಸೈನಿ, ರಾಜ್ ಅಂಗದ್ ಬಾವಾ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
