ರಾಜ್ಯ ಒಲಿಂಪಿಕ್ಸ್‌ನಲ್ಲಿ ನಿಧನರಾದ ಸಂತೋಷ್‌ ಕುಟುಂಬಕ್ಕೆ 10 ಲಕ್ಷ


Team Udayavani, Feb 23, 2017, 10:51 AM IST

2000.jpg

ಧಾರವಾಡ: ರಾಜ್ಯ ಒಲಿಂಪಿಕ್ಸ್‌ನ ಕುಸ್ತಿ ಕೂಟದ ವೇಳೆ ತೀವ್ರ ಗಾಯಗೊಂಡು ಮೃತಪಟ್ಟ ಚಿಕ್ಕಮಲ್ಲಿಗವಾಡದ ಕುಸ್ತಿಪಟು ಸಂತೋಷ ಹೊಸಮನಿ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ ಧನ ಘೋಷಣೆಯಾಗಿದೆ. ಸ್ವತಃ ಜಿಲ್ಲಾಧಿಕಾರಿ ಡಾ| ಎಸ್‌.ಬಿ.ಬೊಮ್ಮನಹಳ್ಳಿ ಈ ವಿಷಯವನ್ನು ಖಚಿತಪಡಿಸಿದ್ದಾರೆ.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕರ್ನಾಟಕ ಒಲಿಂಪಿಕ್ಸ್‌ ಸಂಸ್ಥೆಯಿಂದ 2 ಲಕ್ಷ ರೂ.ಗಳ ಚೆಕ್‌ ಬಂದಿದೆ. ನಗರ ಪಾಲಿಕೆ ವತಿಯಿಂದ 2 ಲಕ್ಷ ರೂ.ಗಳ ಚೆಕ್‌ ಬರಬೇಕಿದೆ. ಇದಲ್ಲದೇ ಸರಕಾರ ಘೋಷಿಸಿದ್ದ 5 ಲಕ್ಷ ರೂ. ಚೆಕ್‌ ಕೂಡ ಸಿದ್ಧವಾಗಿದೆ. ಒಟ್ಟು 9
ಲಕ್ಷ ರೂ. ಕುಟುಂಬ ವರ್ಗಕ್ಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಮುಖ್ಯಮಂತ್ರಿಗಳು 

ಮೊನ್ನೆ ಹುಬ್ಬಳ್ಳಿಗೆ ಬಂದಾಗ ಒಟ್ಟು 10 ಲಕ್ಷರೂ. ನೀಡಲು ಸೂಚಿಸಿದ್ದಾರೆ. ಹೀಗಾಗಿ ಸರ್ಕಾರದಿಂದ ಇನ್ನೂ ಒಂದು ಲಕ್ಷ ರೂ.ಹೆಚ್ಚು ನೀಡಲಿದ್ದೇವೆ. ಒಟ್ಟು 10 ಲಕ್ಷ ರೂ. ಗಳ ಚೆಕ್‌ನ್ನು ಅವರ ಕುಟುಂಬಕ್ಕೆ ಶೀಘ್ರದಲ್ಲೇ ನೀಡುವುದಾಗಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ತಿಳಿಸಿದರು.

ಹೊಸಮನಿ ಅವರ ಕುಟುಂಬಕ್ಕೆ ಜೀವವಿಮಾ ಕಂಪನಿಯಿಂದಲೂ ಹಣ ಕೊಡಿಸಲು ಯತ್ನಿಸಲಾಗುವುದು. ಕ್ರೀಡಾಕೂಟದಲ್ಲಿ ಸಾರ್ವಜನಿಕ ಆಸ್ತಿ, ಪಾಸ್ತಿಗಳ ಹಾನಿಗಾಗಿ ವಿಮೆ ಮಾಡಿಸಿದ್ದರಿಂದ ವೈಯಕ್ತಿಕವಾಗಿ ಅದನ್ನು ಪಡೆಯಲು ಅವಕಾಶವಿಲ್ಲ. ಹೀಗಿದ್ದರೂ ಕಂಪನಿ ಅವರೊಂದಿಗೆ ಹಣ ನೀಡುವ ಸಾಧ್ಯತೆ ಇದೆಯೇ ಎಂಬುದರ ಕುರಿತು ಚರ್ಚಿಸಲಾಗಿದೆ. ಅವರೂ ತಮಗೆ ಸಾಧ್ಯವಾದಷ್ಟು ಪ್ರಯತ್ನಿಸುವುದಾಗಿ ವಿಮಾ ಕಂಪನಿ ತಿಳಿಸಿದೆ ಎಂದರು.

ವೈದ್ಯರ ತಪ್ಪಿಲ್ಲ: ಫೆ.8ರಂದು ಸಂತೋಷ ಎಸ್‌ ಡಿಎಂ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಆಸ್ಪತ್ರೆಯವರು ಹಣ ಪಾವತಿಸುವಂತೆ ತಿಳಿಸಿಲ್ಲ. ಕುಟುಂಬದವರೂ ಹಣ ಪಾವತಿಸಿಲ್ಲ. ಅಂದು ಸಂಜೆ 6 ಗಂಟೆಗೆ ದಾಖಲಾದ ಸಂತೋಷನನ್ನು ವೈದ್ಯರು ಸಂಪೂರ್ಣವಾಗಿ ಪರೀಕ್ಷೆ ನಡೆಸಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಬೇಕಿರುವ ಕಾರಣ, ಸುಮಾರು 7 ಗಂಟೆಗೆ ವೈದ್ಯರು ಕುಟುಂಬದವರೊಂದಿಗೆ ಚರ್ಚಿಸಿ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಎದುರಾಗುವ ಹಲವು ತೊಂದರೆಗಳ ಕುರಿತು ಮಾಹಿತಿ ನೀಡಿದ್ದಾರೆ.

ಆದರೆ ಕುಟುಂಬಸ್ಥರು ಎಸ್‌ಡಿಎಂನಲ್ಲಿ ಚಿಕಿತ್ಸೆ ಪಡೆಯುವುದಿಲ್ಲ ಎಂದು ಹೇಳಿ ಕಿಮ್ಸ್‌ಗೆ ತೆರಳಿದ್ದಾರೆ. ಈ ಕುರಿತು ಆಸ್ಪತ್ರೆ ಅವರ ಕೇಸ್‌ ಶೀಟ್‌ನಲ್ಲಿ ಕುಟುಂಬಸ್ಥರು ಸಹಿ ಮಾಡಿದ್ದಾರೆ. ಕಿಮ್ಸ್‌ನಲ್ಲಿ ಅವರು ದಾಖಲಾದ ದಿನದಿಂದ ಎಲ್ಲ ಸಂಪೂರ್ಣ ಮಾಹಿತಿ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ದಾಖಲೆ ಸಮೇತ ವಿವರಿಸಿದರು.

ಮೂಳೆ ಮುರಿತದಿಂದ ಊತ ಉಂಟಾದ ಕಾರಣ ಅದು ಕಡಿಮೆ ಆಗುವವರೆಗೆ ಕಾಯ್ದು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಹೀಗಾಗಿ ಫೆ.13ರಂದು ಶಸ್ತ್ರ ಚಿಕಿತ್ಸೆ ಮಾಡಲಾಯಿತು. ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಇಬ್ಬರು ಆಥೋì ಪ್ರೊಫೆಸರ್‌, ಇಬ್ಬರು ಸಹಾಯಕ ಪ್ರಾಧ್ಯಾಪಕರು ಹಾಗೂ ಅರವಳಿಕೆ ವಿಭಾಗದ ಎಚ್‌ಒಡಿ ಹಾಜರಿದ್ದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.