ತಿರುಗೇಟು ನೀಡುತ್ತಾ ಟೀಂ ಇಂಡಿಯಾ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
Team Udayavani, Jan 21, 2022, 1:36 PM IST
ಪಾರ್ಲ್: ಮೊದಲ ಏಕದಿನ ಪಂದ್ಯದಲ್ಲಿ ಸೋಲನುಭವಿಸಿ ಹಿನ್ನಡೆ ಅನುಭವಿಸಿರುವ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ಹರಿಣಗಳಿಗೆ ತಿರುಗೇಟು ನೀಡಲು ಸಜ್ಜಾಗಿದೆ. ಇಂದು ಪಾರ್ಲ್ ಮೈದಾನದಲ್ಲಿ ಟಾಸ್ ಗೆದ್ದ ನಾಯಕ ರಾಹುಲ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಆದರೆ ದಕ್ಷಿಣ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ವೇಗಿ ಮಾರ್ಕೋ ಜೆನ್ಸನ್ ಬದಲಿಗೆ ಸಿಸಾಂಡ ಮಂಗಲ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ:ರೈಡ್ ನಲ್ಲಿ ತಾನು ಔಟಾದರೂ ಬೆಂಗಾಲ್ ತಂಡಕ್ಕೆ ಎಂಟು ಅಂಕ ತಂದ ನಬಿಬಕ್ಷ್! ವಿಡಿಯೋ ನೋಡಿ
ಮೂರು ಪಂದ್ಯಗಳ ಸರಣಿಯಾದ ಕಾರಣ ಸರಣಿ ಜೀವಂತವಿರಬೇಕಾದರೆ ಭಾರತ ಈ ಪಂದ್ಯವನ್ನು ಗೆಲ್ಲಲೇಬೇಕಿದೆ. ಇದೇ ಅಂಗಳದಲ್ಲಿ ನಡೆದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕೂಡಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.
ತಂಡಗಳು
ಭಾರತ: ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ವೆಂಕಟೇಶ್ ಅಯ್ಯರ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಆರ್. ಅಶ್ವಿನ್, ಜಸ್‌ಪ್ರೀತ್ ಬುಮ್ರಾ, ಯಜುವೇಂದ್ರ ಚಹಲ್.
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್, ಜಾನೆಮನ್ ಮಲಾನ್, ಟೆಂಬ ಬವುಮ (ನಾಯಕ), ಐಡನ್ ಮಾರ್ಕ್‌ರಮ್, ರಸ್ಸಿ ವಾನ್‌ಡರ್ ಡುಸೆನ್, ಡೇವಿಡ್ ಮಿಲ್ಲರ್, ಆ್ಯಂಡಿಲ್ ಫೆಲುಕ್ವಾಯೊ, ಕೇಶವ್ ಮಹಾರಾಜ್, ಸಿಸಾಂಡ ಮಂಗಲ, ಲುಂಗಿ ಎನ್‌ಗಿಡಿ, ತಬ್ರೇಜ್ ಶಮಿ