ಇಂದು ಖ್ಯಾತ ಟೆನಿಸ್ ಆಟಗಾರ್ತಿ ಸೆರೆನಾ ಮದುವೆ
Team Udayavani, Nov 16, 2017, 6:05 AM IST
ನ್ಯೂಯಾರ್ಕ್: ಇತ್ತೀಚೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಅಮೆರಿಕದ ಖ್ಯಾತ ಟೆನಿಸ್ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಗುರುವಾರ ಉದ್ಯಮಿ ಅಲೆಕ್ಸಿಸ್ ಒಹಾನಿಯನ್ ಅವರನ್ನು ವಿವಾಹವಾಗಲಿದ್ದಾರೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಸೆರೆನಾ-ಅಲೆಕ್ಸಿಸ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮದುವೆ ದಿನಾಂಕವನ್ನು ಪ್ರಕಟಿಸಿರಲಿಲ್ಲ. ಆ ಬಳಿಕ ಸೆರೆನಾ ಗರ್ಭಿಣಿಯಾದರು. ಇತ್ತೀಚೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದಾದ ಬಹು ದಿನದ ಬಳಿಕ ಇವರಿಬ್ಬರು ಮದುವೆಯಾಗುವ ಮನಸ್ಸು ಮಾಡಿದ್ದಾರೆ. ಮದುವೆ ಸ್ಥಳವನ್ನು ಕಳೆದ ಕೆಲವು ತಿಂಗಳಿನಿಂದ ಹುಡುಕುತ್ತಿದ್ದರು. ಕೊನೆಗೆ ಲೂಯಿಸಿಯಾನದ ನ್ಯೂ ಅರ್ಲಿಯನ್ಸ್ನಲ್ಲಿ ಮದುವೆ ನಡೆಸಲು ಇಬ್ಬರು ನಿಶ್ಚಿಯಿಸಿದ್ದಾರೆ. ಅಂತೆಯೆ ಅಲ್ಲಿನ ಕಾಂಟೆಂಪರರಿ ಆರ್ಟ್ಸ್ ಸೆಂಟರ್ನಲ್ಲಿ ಮದುವೆ ಆಯೋಜಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಕೆಲವರಿಗೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯೂ ಇಲ್ಲ ಎನ್ನಲಾಗಿದೆ. ಒಟ್ಟಿನಲ್ಲಿ ಮದುವೆಗೆ ಬರೋಬ್ಬರಿ 6 ಕೋಟಿ ರೂ. ಖುರ್ಚು ಆಗಲಿದೆ ಎಂದು ಅಂದಾಜಿಸಲಾಗಿದೆ. ಕುಟುಂಬ ಮೂಲಗಳು, ಗಣ್ಯರು, ಮಾಜಿ ಹಾಲಿ ಟೆನಿಸ್ ಪಟುಗಳು, ಉದ್ಯಮಿಗಳು ಆಗಮಿಸಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು