ಮೋದಿ ಇರುವವರೆಗೆ ಭಾರತದಿಂದ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ: ಶಾಹೀದ್ ಅಫ್ರಿದಿ

Team Udayavani, Feb 25, 2020, 12:26 PM IST

ಇಸ್ಲಮಾಬಾದ್: ಭಾರತದಲ್ಲಿ ನರೇಂದ್ರ ಮೋದಿ ಅಧಿಕಾರದಲ್ಲಿ ಇರುವ ವರೆಗೆ ಭಾರತ ಮತ್ತು ಪಾಕಿಸ್ಥಾನ ನಡುವಿನ ಬಾಂಧವ್ಯ ವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಪಾಕಿಸ್ಥಾನದ ಮಾಜಿ ನಾಯಕ ಶಾಹೀದ್ ಅಫ್ರಿದಿ ಹೇಳಿಕೆ ನೀಡಿದ್ದಾರೆ.

ಕ್ರಿಕೆಟ್ ಪಾಕಿಸ್ಥಾನಕ್ಕೆ ನೀಡಿದ ಸಂದರ್ಶನದಲ್ಲಿ ಶಾಹೀದ್ ಅಫ್ರಿದಿ ಈ ಮಾತುಗಳನ್ನಾಡಿದ್ದಾರೆ. ಭಾರತೀಯರು ಸೇರಿದಂತೆ ನಾವೆಲ್ಲಾ ಭಾರತದ ಪ್ರಧಾನಿ ಮೋದಿಯವರನ್ನು ಅರ್ಥ ಮಾಡಿಕೊಂಡಿದ್ದೇವೆ. ಅವರು ಋಣಾತ್ಮಕವಾಗಿ ಯೋಚನೆ ಮಾಡುವ ವ್ಯಕ್ತಿ ಎಂದು ಅಫ್ರಿದಿ ಹೇಳಿದ್ದಾರೆ.

ಪಾಕಿಸ್ಥಾನದಲ್ಲಿ ಭಾರತ ತಂಡ ಕ್ರಿಕೆಟ್ ಆಡಬೇಕೆಂಬ ನಮ್ಮ ಮನವಿಗೆ ಭಾರತದಿಂದ ಸಕಾರಾತ್ಮಕ ಉತ್ತರ ಬರುತ್ತದೆ ಎಂದು ನನಗನಿಸುವುದಿಲ್ಲ. ಭಾರತ ಮತ್ತು ಪಾಕಿಸ್ಥಾನದ ನಡುವಿನ ಸಂಬಂಧ ಒಬ್ಬ ವ್ಯಕ್ತಿಯಿಂದ ಹಾಳಾಗಿದೆ ಎಂದ ಅವರು ಉಭಯ ದೇಶಗಳು ಜನರು ಪರಸ್ಪರ ಸಂಚರಿಸಲು ಬಯಸುತ್ತಾರೆ. ಆದರೆ ಮೋದಿ ಏನನ್ನು ಮಾಡಲು ಹೊರಟಿದ್ದಾರೆ ಎಂದು ಅರ್ಥವಾಗುವುದಿಲ್ಲ ಎಂದು ಅಫ್ರಿದಿ ವಾಗ್ದಾಳಿ ನಡೆಸಿದ್ದಾರೆ.

ಭಾರತ ತಂಡ ಪಾಕಿಸ್ಥಾನದಲ್ಲಿ 2006ರಲ್ಲಿ ಕಡೆಯದಾಗಿ ಕ್ರಿಕೆಟ್ ಆಡಿತ್ತು. ಮತ್ತೆ ಭಾರತ ತಂಡ ಪಾಕಿಸ್ಥಾನಕ್ಕೆ ಪ್ರವಾಸ ಮಾಡಬೇಕೆಂದು ಇತ್ತೀಚೆಗೆ ಪಾಕಿಸ್ಥಾನಿ ಅಭಿಮಾನಿಗಳು ಒತ್ತಾಯ ಮಾಡಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ಕೋವಿಡ್‌ 19 ಸೋಂಕಿತರಿಗೆ ರಾಜ್ಯವ್ಯಾಪಿ ಏಕರೂಪ ಚಿಕಿತ್ಸೆ ನೀಡಲು ಮತ್ತು ಅವರ ಆರೈಕೆಗೆ ಅನುಕೂಲ ಆಗುವಂತೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು...

  • ಕುಂದಾಪುರ: ಉಡುಪಿ ಜಿಲ್ಲೆಯ ಶಿರೂರು, ಹೊಸಂಗಡಿ, ಕುಂದಾಪುರ ನಗರ ಭಾಗದಲ್ಲಿ ಮಾತ್ರವಲ್ಲದೆ ಅಂಪಾರು ಮತ್ತಿತರ ಕೆಲವೆಡೆಗಳಲ್ಲಿಯೂ ಶನಿವಾರದಿಂದ ಚೆಕ್‌ಪೋಸ್ಟ್‌ಗಳನ್ನು...

  • ಬೆಂಗಳೂರು: ಕೋವಿಡ್‌ 19 ಭೀತಿ ಹಿನ್ನೆಲೆಯಲ್ಲಿ ಎ. 15ರ ತನಕ ದೇಶವೇ ಲಾಕ್‌ಡೌನ್‌ ಆಗಿರುವುದರಿಂದ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ಪಾವತಿ ಮಾಡಿಸಿಕೊಳ್ಳದಂತೆ...

  • ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ 19 ಸೋಂಕು ಹೆಚ್ಚುತ್ತಿದ್ದು, ಶನಿವಾರ 18 ಮಂದಿಗೆ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 82ಕ್ಕೆ ಏರಿದೆ. ಶನಿವಾರ...

  • ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಮಾ. 27ರಂದು ಒಂದೇ ದಿನ ಎರಡು ಕೋವಿಡ್‌ 19 ಸೋಂಕು ದೃಢ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಪೂರ್ಣ ಬಂದ್‌ಗೆ ನಿರ್ಧರಿಸಿದ್ದು,...