ಚೊಚ್ಚಲ ಪಂದ್ಯದಲ್ಲೇ ಹೊಸ ದಾಖಲೆ ಬರೆದ ಶ್ರೇಯಸ್ ಅಯ್ಯರ್
Team Udayavani, Nov 28, 2021, 3:15 PM IST
ಕಾನ್ಪುರ: ಟೆಸ್ಟ್ ಕ್ರಿಕೆಟ್ ನ ಪದಾರ್ಪಣಾ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿ ಮಿಂಚಿದ್ದ ಮುಂಬೈ ಬ್ಯಾಟರ್ ಶ್ರೇಯಸ್ ಅಯ್ಯರ್ ಇದೀಗ ಮತ್ತೊಂದು ದಾಖಲೆ ಬರೆದಿದ್ದಾರೆ. ಎರಡನೇ ಇನ್ನಿಂಗ್ಸ್ ನಲ್ಲಿ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ನೆರವಾದ ಅಯ್ಯರ್ ಅರ್ಧಶತಕ ಸಿಡಿಸಿ ಮಿಂಚಿದರು.
51 ರನ್ ಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್ ನೆರವಾದರು. ಆರನೇ ವಿಕೆಟ್ ಗೆ ರವಿಚಂದ್ರನ್ ಅಶ್ವಿನ್ ಜೊತೆಗೆ 53 ರನ್ ಜೊತೆಯಾಟವಾಡಿದ ಅಯ್ಯರ್ ತಂಡವನ್ನು ಕುಸಿತದಿಂದ ಪಾರು ಮಾಡಿದರು. ಏಳನೇ ವಿಕೆಟ್ ಗೆ ವೃದ್ಧಿಮಾನ್ ಸಾಹಾ ಜೊತೆಗೆ 64 ರನ್ ಉಪಯುಕ್ತ ಜೊತೆಯಾಟವಾಡಿದರು.
ಇದನ್ನೂ ಓದಿ:ಟಿ20 ಲೀಗ್ ನಲ್ಲಿ ಅತೀ ವೇಗದ ಅರ್ಧಶತಕ ದಾಖಲಿಸಿ ಅಬ್ಬರಿಸಿದ ಮೋಯಿನ್ ಅಲಿ: ಇಲ್ಲಿದೆ ವಿಡಿಯೋ
65 ರನ್ ಗಳಿಸಿದ ಅಯ್ಯರ್ ಟಿಮ್ ಸೌಥಿ ಎಸೆತದಲ್ಲಿ ಟಾಮ್ ಬ್ಲಂಡೆಲ್ ಗೆ ಕ್ಯಾಚ್ ನೀಡಿ ಔಟಾದರು. ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿದ್ದ ಅಯ್ಯರ್ ಎರಡನೇ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಬಾರಿಸಿದರು. ಈ ಮೂಲಕ ಶ್ರೇಯಸ್ ಅಯ್ಯರ್ ಕ್ರಿ ಕೆಟ್ ಇತಿಹಾಸದಲ್ಲಿ ಚೊಚ್ಚಲ ಪಂದ್ಯದಲ್ಲೇ ಶತಕ ಮತ್ತು ಅರ್ಧಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್