ಬಾಸ್ಕೆಟ್ಬಾಲ್ ನಲ್ಲಿ ಮಿಂಚುತ್ತಿರುವ ಸೌಕಿನ್ ಶೆಟ್ಟಿ
Team Udayavani, Aug 4, 2019, 5:31 AM IST
ಮಂಗಳೂರು: ಕ್ರೀಡಾ ಕ್ಷೇತ್ರದಲ್ಲಿ ಕರಾವಳಿಯ ಅನೇಕ ಮಂದಿ ಈಗಾಗಲೇ ಮಿಂಚುತ್ತಿದ್ದಾರೆ. ಅದರಲ್ಲಿಯೂ ಮಂಗಳೂರಿನ ಲೈಟ್ಹೌಸ್ನ ಸೌಕಿನ್ ಶೆಟ್ಟಿ ಅವರು ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿರುವ ತ್ರಿಬಿಎಲ್ ರಾಷ್ಟ್ರೀಯ ಬಾಸ್ಕೆಟ್ಬಾಲ್ ಟೂರ್ನಮೆಂಟ್ನಲ್ಲಿ ಬೆಂಗಳೂರಿನ ತಂಡದಲ್ಲಿ ಗುರುತಿಸಿಕೊಂಡು ಗಮನಾರ್ಹ ಪ್ರದರ್ಶನ ನೀಡುತ್ತಿದ್ದಾರೆ.
ಅಂತಾರಾಷ್ಟ್ರೀಯ ಬಾಸ್ಕೆಟ್ಬಾಲ್ ಫೆಡರೇಶನ್ (ಫೀಬಾ) ಬಿಡುಗಡೆ ಮಾಡಿರುವ ಪರಿಷ್ಕರಿಸಿರುವ ಕ್ರಮಾಂಕ ಪಟ್ಟಿಯಲ್ಲಿ ಸೌಕಿನ್ ಒಟ್ಟು 1,35,600 ಅಂಕ ಗಳಿಸಿದ್ದಾರೆ. ವಿಶ್ವ ಮಟ್ಟದಲ್ಲಿ ಇವರು 1,238ನೇ ಕ್ರಮಾಂಕದಲ್ಲಿ ಗುರುತಿಸಿಕೊಂಡಿದ್ದಾರೆ.
ಮಂಗಳೂರು ಬಾಸ್ಕೆಟ್ಬಾಲ್ ಕ್ಲಬ್ನ ಪರವಾಗಿ ಕಳೆದ ಹನ್ನೆರಡು ವರ್ಷಗಳಿಂದ ಆಡುತ್ತಿರುವ ಇವರು ಔರಂಗಾಬಾದ್ನಲ್ಲಿ ನಡೆದಿದ್ದ ಭಾರತ ಕಿರಿಯರ ತಂಡದ ತರಬೇತಿ ಶಿಬಿರದಲ್ಲೂ ಪಾಲ್ಗೊಂಡಿದ್ದರು. ಕರ್ನಾಟಕದ ಹದಿನೆಂಟು ವರ್ಷದೊಳಗಿನವರ ತಂಡದಲ್ಲಿ ಆಡಿರುವ ಅವರು ಗಮನಾರ್ಹ ನಿರ್ವಹಣೆ ನೀಡಿ ಗಮನ ಸೆಳೆದಿದ್ದರು. ಕಳೆದ ನ್ಯಾಶನಲ್ ಗೇಮ್ಸ್ನಲ್ಲಿಯೂ ಕರ್ನಾಟಕ ತಂಡದ ಪರ ಆಡಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಸೌಕಿನ್ ಶೆಟ್ಟಿ ಬಾಸ್ಕೆಟ್ಬಾಲ್ ಕ್ರೀಡಾ ಕ್ಷೇತ್ರದಲ್ಲಿ ನಾನು ಗುರುತಿಸಲು ಭಾರತ ಬಾಸ್ಕೆಟ್ಬಾಲ್ ಫೆಡರೇಶನ್ ಅಧ್ಯಕ್ಷ ಕೆ. ಗೋವಿಂದರಾಜ್, ಮಂಗಳೂರು ಬ್ಯಾಸ್ಕೆಟ್ಬಾಲ್ ಕ್ಲಬ್ನ ಮುಖ್ಯಸ್ಥ ನವೀನ್ ಶೆಟ್ಟಿ ಅವರು ಪ್ರೋತ್ಸಾಹಿಸಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು