ದ್ವಿತೀಯ ಏಕದಿನ ಪಂದ ದಕ್ಷಿಣ ಆಫ್ರಿಕಾಗೆ  ಗೆಲುವು 


Team Udayavani, Aug 2, 2018, 10:15 AM IST

quinton-de-kock.jpg

ಡಂಬುಲ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಡಂಬುಲದಲ್ಲಿ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 4 ವಿಕೆಟ್ ಗಳ ಸೋಲನುಭವಿಸಿದೆ . ಈ ಹಗಲು-ರಾತ್ರಿ ಪಂದ್ಯದಲ್ಲಿ ಟಾಸ್‌ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿತಾದರೂ ಉತ್ತಮ ಆರಂಭ ಕಂಡುಕೊಳ್ಳುವಲ್ಲಿ ವಿಫ‌ಲವಾಯಿತು. ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 245 ರನ್ ಗಳಿಸಲಷ್ಟೇ ಸಾಧ್ಯವಾಯಿತು. 

ಉಪುಲ್‌ ತರಂಗ (9) ಮತ್ತು ಕುಸಲ್‌ ಮೆಂಡಿಸ್‌ (0) 13 ರನ್‌ ಆಗುವಷ್ಟರಲ್ಲಿ ಔಟಾಗಿ ತೆರಳಿದರು. ಕುಸಲ್‌ ಪೆರೆರ (12) ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ಈ ಸಂದರ್ಭದಲ್ಲಿ ನಿರೋಷನ್‌ ಡಿಕ್ವೆಲ್ಲ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್‌ ಸೇರಿಕೊಂಡು ತಂಡವನ್ನು ಆಧರಿಸಿತೊಡಗಿದರು. ಇವರಿಂದ 4ನೇ ವಿಕೆಟಿಗೆ 67 ರನ್‌ ಒಟ್ಟುಗೂಡಿತು. ಮ್ಯಾಥ್ಯೂಸ್‌ ಸರ್ವಾಧಿಕ 79 ರನ್‌ ಹೊಡೆದು ಅಜೇಯರಾಗಿ ಉಳಿದರೆ (111 ಎಸೆತ, 6 ಬೌಂಡರಿ), ಡಿಕ್ವೆಲ್ಲ 69 ರನ್‌ ಮಾಡಿದರು (76 ಎಸೆತ, 10 ಬೌಂಡರಿ). ಏಂಜೆಲೊ ಮ್ಯಾಥ್ಯೂಸ್‌ ಒಂದೆಡೆ ಕ್ರೀಸ್‌ ಆಕ್ರಮಿಸಿಕೊಂಡರೂ ಡಿಕ್ವೆಲ್ಲ ನಿರ್ಗಮನದ ಬಳಿಕ ಅವರಿಗೆ ಯಾರಿಂದಲೂ ಸೂಕ್ತ ಬೆಂಬಲ ಲಭಿಸಲಿಲ್ಲ.

ಎನ್‌ಗಿಡಿ, ಫೆಲೊಕ್ವಾಯೊ 3 ವಿಕೆಟ್‌
ದಕ್ಷಿಣ ಆಫ್ರಿಕಾ ಪರ ಲುಂಗಿ ಎನ್‌ಗಿಡಿ ಮತ್ತು ಆ್ಯಂಡಿಲ್‌ ಫೆಲೊಕ್ವಾಯೊ ತಲಾ 3 ವಿಕೆಟ್‌ ಹಾರಿಸಿದರು. ರಬಾಡ ಮತ್ತು ಮುಲ್ಡರ್‌ ಒಂದೊಂದು ವಿಕೆಟ್‌ ಕಿತ್ತರು.

246  ರನ್ ಗುರಿ ಚೇಸ್ ಮಾಡಿದ ದ. ಆಫ್ರಿಕಾ ಆರಂಭಿಕರಾದ   ಡಿ. ಕಾಕ್ (87) ಮತ್ತು ಹಾಶಿಮ್ ಆಮ್ಲ (43) ಉತ್ತಮ ಜೊತೆಯಾಟದಿಂದ ಸುಲಭವಾಗಿಯೇ ಗುರಿ ಬೆನ್ನಟ್ಟಿತು. ನಾಯಕ ಫ್ಲೆಸಿಸ್ (49 ) ಡುಮಿನಿ ( 32 )  ಉಪಯುಕ್ತ ಆಟದ ನೆರವಿನಿಂದ ಕೇವಲ 42.5 ಓವರ್ ಗಳಲ್ಲಿ ವಿಜಯದ ನಗೆ ಬೀರಿತು. ಶ್ರೀಲಂಕಾ ಪರ ಅಖಿಲ ಧನಂಜಯ ೩ ವಿಕೆಟ್ ಪಡೆದರು.  ಡಿ. ಕಾಕ್ ಪಂದ್ಯ ಶ್ರೇಷ್ಠಪ್ರಶಸ್ತಿ ಪಡೆದರು. 

ಇದೇ ಅಂಗಳದಲ್ಲಿ ನಡೆದ ಮೊದಲ ಪಂದ್ಯವನ್ನು 5 ವಿಕೆಟ್‌ಗಳಿಂದ ಗೆದ್ದಿರುವ ದಕ್ಷಿಣ ಆಫ್ರಿಕಾ, 5 ಪಂದ್ಯಗಳ ಸರಣಿಯಲ್ಲಿ2-0 ಮುನ್ನಡೆ ಕಾಯ್ದುಕೊಂಡಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.