ನಿಮ್ಮ ಶಾಲೆಗೂ ಭೇಟಿ ನೀಡಬಹುದು ಟೋಕಿಯೊ ಒಲಿಂಪಿಕ್ಸ್ ಸಾಧಕರು!
Team Udayavani, Nov 21, 2021, 6:39 AM IST
ನವದೆಹಲಿ: ನೀರಜ್ ಚೋಪ್ರಾ, ಪಿ.ವಿ. ಸಿಂಧು, ಲವ್ಲಿನಾ ಬೊರ್ಗೊಹೇನ್, ರವಿ ದಹಿಯಾ, ಭಾರತ ಹಾಕಿ ತಂಡದ ಆಟಗಾರರು ಸೇರಿದಂತೆ ಟೋಕಿಯೊ ಒಲಿಂಪಿಕ್ಸ್ನಲ್ಲಿ ಅಮೋಘ ಸಾಧನೆಗೈದ ಭಾರತ 75 ಸ್ಟಾರ್ ಕ್ರೀಡಾಪಟುಗಳು ನಿಮ್ಮ ಶಾಲೆಗೂ ಭೇಟಿ ನೀಡಬಹುದು!
ಹೌದು, ಭಾರತೀಯ ಒಲಿಂಪಿಕ್ಸ್ ತಂಡದ ಎಲ್ಲ ಕ್ರೀಡಾಪಟುಗಳು 2023ರ ಆಗಸ್ಟ್ 15ರೊಳಗೆ 75 ಶಾಲೆಗಳಿಗೆ ಭೇಟಿ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಮನವಿ ಮಾಡಿದ್ದರು. ಅದರಂತೆ ಒಟ್ಟು 75 ಶಾಲೆಗಳಿಗೆ 75 ಕ್ರೀಡಾಪಟುಗಳು ಮುಂದಿನ ಎರಡು ವರ್ಷಗಳಲ್ಲಿ ಫಿಟ್ ಇಂಡಿಯಾ ಮಿಷನ್’ ಅಭಿಯಾನದ ವ್ಯಾಪ್ತಿಯಲ್ಲಿ ಭೇಟಿ ನೀಡಲಿದ್ದಾರೆ. ಶಾಲೆಗಳ ಯಾದಿ ಇನ್ನಷ್ಟೇ ಅಂತಿಮಗೊಳ್ಳಬೇಕಿದೆ.
ಜನವರಿಯಲ್ಲೇ ಆರಂಭ:
ಈ ವೇಳೆ ಕ್ರೀಡಾ ಸಾಧಕರು ವಿದ್ಯಾರ್ಥಿಗಳೊಂದಿಗೆ ಸುಮಾರು ಒಂದು ಗಂಟೆ ಸಮಯ ಕಳೆಯಲಿದ್ದಾರೆ. ಜತೆಗೆ ಕ್ರೀಡೆಯಲ್ಲಿ ತೊಡಗಿಕೊಳ್ಳುವಂತೆ ಅವರಿಗೆ ಸ್ಫೂರ್ತಿ ತುಂಬಲಿದ್ದಾರೆ. ಅಪೌಷ್ಟಿಕತೆಯ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ಜತೆಗೆ ಫಿಟ್ ಇಂಡಿಯಾ ಕ್ವಿಜ್ನಲ್ಲೂ ಭಾಗವಹಿಸಲಿದ್ದಾರೆ. ಮುಂದಿನ ವರ್ಷ ಜನವರಿಯಿಂದಲೇ ಇದಕ್ಕೆ ಚಾಲನೆ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್