ಟೆಸ್ಟ್ ನಲ್ಲಿ ಕೊಹ್ಲಿ ಹಿಂದಿಕ್ಕಿ ಮತ್ತೆ ಅಗ್ರ ಶ್ರೇಯಾಂಕಕ್ಕೇರಿದ ಸ್ಟೀವ್ ಸ್ಮಿತ್
Team Udayavani, Sep 3, 2019, 4:07 PM IST
ದುಬೈ: ಆಸೀಸ್ ಆಟಗಾರ ಸ್ಟೀವನ್ ಸ್ಮಿತ್ ಟೆಸ್ಟ್ ಕ್ರಿಕೆಟ್ ನಲ್ಲಿ ಈಗ ನಂ 1 ಆಟಗಾರ. ಭಾರತದ ನಾಯಕ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿ ಸ್ಮಿತ್ ಈ ಸಾಧನೆ ಮಾಡಿದ್ದಾರೆ.
ವಿಂಡೀಸ್ ಸರಣಿಯಲ್ಲಿ ಸಾಧಾರಣ ಪ್ರದರ್ಶನ ನೀಡಿದ ಹಿನ್ನಲೆಯಲ್ಲಿ ಕೊಹ್ಲಿ ದ್ವಿತೀಯ ಸ್ಥಾನಕ್ಕೆ ತಳ್ಳಲ್ಪಟ್ಟರು.
ವಿಂಡೀಸ್ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಜಿಂಕ್ಯ ರಹಾನೆ 7ನೇ ಶ್ರೇಯಾಂಕ ಪಡೆದರು. ದ್ವಿತೀಯ ಪಂದ್ಯದ ಶತಕವೀರ ಹನುಮ ವಿಹಾರಿ 40 ಸ್ಥಾನ ಭಡ್ತಿ ಪಡೆದು 30ನೇ ಶ್ರೇಯಾಂಕಕ್ಕೆ ತಲುಪಿದರು.
ದ್ವಿತೀಯ ಪಂದ್ಯದಲ್ಲಿ ತಲಾ ಐದು ವಿಕೆಟ್ ಗೊಂಚಲು ಪಡೆದ ಜಸ್ಪ್ರೀತ್ ಬುಮ್ರಾ ಮತ್ತು ಜೇಸನ್ ಹೋಲ್ಡರ್ ಬೌಲಿಂಗ್ ಶ್ರೇಯಾಂಕದಲ್ಲಿ ಕ್ರಮವಾಗಿ 3 ಮತ್ತು 4ನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಮೊದಲೆರಡು ಸ್ಥಾನದಲ್ಲಿ ಪ್ಯಾಟ್ ಕಮಿನ್ಸ್ ಮತ್ತು ಜೋಶ್ ಹ್ಯಾಝಲ್ ವುಡ್ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ