Badminton; ಇಂದಿನಿಂದ ಸ್ವಿಸ್ ಓಪನ್ ಬ್ಯಾಡ್ಮಿಂಟನ್
Team Udayavani, Mar 19, 2024, 5:50 AM IST
ಬಾಸೆಲ್ (ಸ್ವಿಜರ್ಲೆಂಡ್): ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಭಾರತದ ಶಟ್ಲರ್ಗಳಿಗೆ ಮತ್ತೂಂದು ಸವಾಲು ಎದುರಾಗಿದೆ. ಮಂಗಳವಾರ “ಸ್ವಿಸ್ ಓಪನ್ ಸೂಪರ್ 300′ ಬ್ಯಾಡ್ಮಿಂಟನ್ ಟೂರ್ನಿ ಆರಂಭವಾಗಲಿದ್ದು, ನಮ್ಮವರ ಆಟ ಹೇಗಿದ್ದೀತು ಎಂಬ ಪ್ರಶ್ನೆ ಎದುರಾಗಿದೆ.
ಪುರುಷರ ಸಿಂಗಲ್ಸ್ನಲ್ಲಿ ಲಕ್ಷ್ಯ ಸೇನ್ ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಮೊನ್ನೆಯಷ್ಟೇ ಅವರು ಆಲ್ ಇಂಗ್ಲೆಂಡ್ ಟೂರ್ನಿಯಲ್ಲಿ ಸೆಮಿಫೈನಲ್ ತನಕ ಸಾಗಿದ್ದರು. 7ನೇ ಶ್ರೇಯಾಂಕದ ಲಕ್ಷ್ಯ ಸೇನ್ ಮಲೇಷ್ಯಾದ ಲಿಯಾಂಗ್ ಜುನ್ ಹಾವೊ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡಲಿದ್ದಾರೆ. ಇಲ್ಲಿಂದ ಮುಂದೆ ಸಾಗಿದರೆ 2021ರ ಚಾಂಪಿಯನ್ ಲೀ ಜೀ ಜಿಯಾ ಎದುರಾಗುವ ಸಾಧ್ಯತೆ ಇದೆ.
ಮಾಜಿ ನಂ.1 ಆಟಗಾರ ಕೆ. ಶ್ರೀಕಾಂತ್ ಏಷ್ಯನ್ ಗೇಮ್ಸ್ ಕಂಚಿನ ಪದಕ ವಿಜೇತ, ಚೈನೀಸ್ ತೈಪೆಯ ವಾಂಗ್ ಝು ವೀ ವಿರುದ್ಧ, ಭರವಸೆಯ ಯುವ ಆಟಗಾರ ಪ್ರಿಯಾಂಶು ರಾಜಾವತ್ ಹಾಂಕಾಂಗ್ನ 4ನೇ ಶ್ರೇಯಾಂಕದ ಲೀ ಚುಕ್ ಯಿ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡುವರು.
ಪಿ.ವಿ. ಸಿಂಧು ಅವರಿಗಿಲ್ಲಿ ಮತ್ತೆ ಜರ್ಮನಿಯ ವೋನ್ ಲೀ ಎದುರಾಗಿದ್ದಾರೆ. ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಟೂರ್ನಿಯ ಮೊದಲ ಸುತ್ತಿನಲ್ಲೂ ಇವರಿಬ್ಬರು ಮುಖಾಮುಖೀ ಆಗಿದ್ದರು. ಅಲ್ಲಿ ವೋನ್ ಲೀ ಗಾಯಾಳಾಗಿ ಹಿಂದೆ ಸರಿದಿದ್ದರು. ಆಕರ್ಷಿ ಕಶ್ಯಪ್ ಕೆನಡಾದ ಮೈಕೆಲ್ ಲೀ ವಿರುದ್ಧ ಆಡಲಿದ್ದಾರೆ. ವನಿತಾ ಡಬಲ್ಸ್ನಲ್ಲಿ ಅಶ್ವಿನಿ ಪೊನ್ನಪ್ಪ-ತನಿಷಾ ಕ್ರಾಸ್ಟೊ, ಟ್ರೀಸಾ ಜಾಲಿ-ಗಾಯತ್ರಿ ಗೋಪಿಚಂದ್ ಕಣದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!