ಏಕದಿನ ಸರಣಿಗೆ ನಟರಾಜನ್: ಟೆಸ್ಟ್ ನಿಂದ ಇಶಾಂತ್ ಔಟ್, ರೋಹಿತ್ ಅನಿಶ್ಚಿತತೆ ಮುಂದುವರಿಕೆ
Team Udayavani, Nov 27, 2020, 9:58 AM IST
ಸಿಡ್ನಿ: ಐಪಿಎಲ್ ನಲ್ಲಿ ನೀಡಿದ ಅದ್ಭುತ ಪ್ರದರ್ಶನದ ಕಾರಣ ಆಸೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದ ತಮಿಳುನಾಡು ವೇಗಿ ಟಿ ನಟರಾಜನ್ ರನ್ನು ಏಕದಿನ ಸರಣಿಗೂ ಆಯ್ಕೆ ಮಾಡಲಾಗಿದೆ. ಆದರೆ ಗಾಯದ ಸಮಸ್ಯೆಯಿಂದ ಎನ್ ಸಿಬಿಯಲ್ಲಿರುವ ಇಶಾಂತ್ ಶರ್ಮಾ ಆಸೀಸ್ ಸರಣಿಯಿಂದ ಹೊರಬಿದ್ದಿದ್ದಾರೆ.
ಬಿಸಿಸಿಐ ಅಧಿಕೃತ ಪ್ರಕಟಣೆ ಈ ಬಗ್ಗೆ ತಿಳಿಸಿದ್ದು, ರೋಹಿತ್ ಶರ್ಮಾ ಬಗ್ಗೆ ಕಾದು ನೋಡುವ ತಂತ್ರ ಅನುಸರಿಸಿದೆ.
ರೋಹಿತ್ ಶರ್ಮಾ ಮತ್ತು ಇಶಾಂತ್ ಶರ್ಮಾ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್ ನೆಸ್ ಟ್ರೈನಿಂಗ್ ಪಡೆಯುತ್ತಿದ್ದಾರೆ. ರೋಹಿತ್ ಶರ್ಮಾ ಅವರ ಬಗ್ಗೆ ಡಿಸೆಂಬರ್ 11ರವರೆಗೆ ಕಾದು ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬಿಸಿಸಿಐ ತಿಳಿಸಿದೆ.
ಇದನ್ನೂ ಓದಿ:ಭಾರತ- ಆಸೀಸ್ ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದ ಆಸೀಸ್ ಬ್ಯಾಟಿಂಗ್ : ಮಯಾಂಕ್ ಓಪನಿಂಗ್
ಆಸೀಸ್ ವಿರುದ್ಧದ ಟೆಸ್ಟ್ ಸರಣಿ ಡಿಸೆಂಬರ್ 17ರಿಂದ ಆರಂಭವಾಗಲಿದೆ. ಆಸೀಸ್ ನಲ್ಲಿ 14 ದಿನಗಳ ಕಾಲ ಕ್ವಾರಂಟೈನ್ ಅವಧಿ ಇರುವ ಕಾರಣ ಡಿ.11ರ ನಂತರ ರೋಹಿತ್ ತೆರಳಿದರೆ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ.
ನಟರಾಜನ್ ಆಯ್ಕೆ: ವೇಗಿ ನವದೀಪ್ ಸೈನಿ ಗಾಯಗೊಂಡಿದ್ದ ಕಾರಣ ನಟರಾಜನ್ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೆ ನವದೀಪ್ ಸೈನಿ ಫಿಟ್ ಆಗಿದ್ದು, ಇಂದಿನ ಪಂದ್ಯದಲ್ಲಿ ಆಡಲಿಳಿದಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444