ಟೀಮ್ ಇಂಡಿಯಾ ಆಲ್ ರೌಂಡ್ ಸಾಹಸ: ಕಿವೀಸ್ ವಿರುದ್ಧ ಭರ್ಜರಿ ಜಯ 

Team Udayavani, Jan 26, 2019, 9:03 AM IST

ಬೇ ಓವಲ್ : ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಅಭೂತಪೂರ್ವ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಆತಿಥೇಯ ನ್ಯೂಜಿಲ್ಯಾಂಡ್  ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ 90 ರನ್ ಗಳ ಭರ್ಜರಿ ಜಯ ಸಾಧಿಸಿದೆ. 

ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಭಾರತ ತಂಡದ ಬ್ಯಾಟ್ಸಮನ್ ಗಳು ಉತ್ತಮ ಆಟವಾಡಿ 4 ವಿಕೆಟ್ ನಷ್ಟಕ್ಕೆ 324 ರನ್ ಕಲೆಹಾಕಿದರು, . ಆರಂಭಿಕರಾದ ಶಿಖರ್ ಧವನ್ ಮತ್ತು ರೋಹಿತ್ ಶರ್ಮ ಮೊದಲ ವಿಕೆಟ್ ಗೆ 154 ಜೊತೆಯಾಟ ನಡೆಸಿದರು. ಧವನ್ 66 ರನ್ ಗಳಿಸಿದರೆ ರೋಹಿತ್ 87 ರನ್ ಗಳಿಸಿ ಔಟ್ ಆದರು. ನಾಯಕ ಕೊಹ್ಲಿ43  ರನ್ ಗಳಿಸಿದರೆ ಅಂಬಟಿ ರಾಯುಡು 47 ರನ್ ಕಲೆಹಾಕಿ ಫಾರ್ಮ್ ಗೆ ಮರಳುವ ಸೂಚನೆ ನೀಡಿದರು. ಕೊನೆಯಲ್ಲಿ ಧೋನಿ ಅಜೇಯ 48 ರನ್ ಮತ್ತು ಕೇದಾರ್ ಜಾಧವ್ 22 ರನ್ ಗಳಿಸಿದರು . 

325 ರನ್ ಗಳ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ ನಿರಂತರ ವಿಕೆಟ್ ಕಳೆದುಕೊಂಡು ಸಂಕಷ್ಟ ಅನುಭವಿಸಿತು. 40.2 ಓವರ್ ನಲ್ಲಿ 234 ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಕುಲದೀಪ್ ಯಾದವ್ ಕಿವೀಸ್ ಬ್ಯಾಟ್ಸಮನ್ ಗಳಿಗೆ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದರು. ಬ್ರೇಸ್ ವೆಲ್ ಬಿಟ್ಟರೆ ಬೇರೆ ಯಾವುದೇ ಆಟಗಾರರು ಕ್ರೀಸ್ ಕಚ್ಚಿ ಆಡಲು ವಿಫಲರಾದರು . ಬ್ರೇಸ್ ವೆಲ್ 57 ರನ್ ಗಳಿಸಿದರು. ಕುಲದೀಪ್ ಯಾದವ್ 4 ವಿಕೆಟ್ ಪಡೆದು ಮಿಂಚಿದರು. 

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಕರೆದಿದ್ದ ಸಭೆಗೆ ಗೈರು ಹಾಜರಾಗುವ ಮೂಲಕ ಕಾಂಗ್ರೆಸ್‌ ಹಿರಿಯ ನಾಯಕರು ತಮ್ಮ ಅಸಮಾಧಾನವನ್ನು...

  • ಬೆಂಗಳೂರು: ಶಿರಾಡಿ ಘಾಟಿ ರಸ್ತೆ ಅಭಿವೃದ್ಧಿಗೆ 4 ಸಾವಿರ ಕೋಟಿ ರೂ. ಯೋಜನೆಯ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದ್ದು, ಕೇಂದ್ರದಿಂದ ಅನುಮೋದನೆ...

  • ಪುರಾಣದಲ್ಲಿ ಕಡುಕಷ್ಟ ಅನುಭವಿಸಿದ ಕೆಲವರ ಹೆಸರು ಚೆನ್ನಾಗಿದೆ ಎನಿಸಿದರೂ, ಅದನ್ನು ಮಗನಿಗೆ ಇಡುವುದು ಶೋಭೆಯಲ್ಲ ಅಂತ ಅನ್ನಿಸಿತು. ಕ್ಷ, ಶಿ, ಋ, ಕ್ರೂ, ಹ್ರಂ, ಹ್ರಿಂ...

  • ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕನು ಕಾನೂನಿನ ಅರಿವು ಹೊಂದಿರುವುದು ಅಗತ್ಯ. ಮಾನವ ಸಂಘಜೀವಿ ಆಗಿರುವವರೆಗೂ ಕಾನೂನು ಅಸ್ತಿತ್ವ ದಲ್ಲಿರುತ್ತದೆ....

  • ಅಡುಗೆಗೆ ಬಳಸುವ ಕಾಳು, ಹಿಟ್ಟು, ತಾಜಾ ತರಕಾರಿ, ಸೊಪ್ಪು, ಉಪ್ಪು, ಹಣ್ಣು... ಇವನ್ನೆಲ್ಲ ಇಡುವುದೇ ಪ್ಲಾಸ್ಟಿಕ್‌ಡಬ್ಬಿಗಳಲ್ಲಿ/ ಕವರ್‌ಗಳಲ್ಲಿ. ಹೀಗೆ ಮಾಡುವ ಮೂಲಕ,...