ನ್ಯೂಜಿಲ್ಯಾಂಡ್ ಸರಣಿಗೆ ಭಾರತ ತಂಡ ಪ್ರಕಟ: ಮತ್ತೆ ಹೊರಬಿದ್ದ ಸಂಜು ಸ್ಯಾಮ್ಸನ್
Team Udayavani, Jan 13, 2020, 8:48 AM IST
ಮುಂಬೈ: ಮುಂಬರುವ ಕಿವೀಸ್ ಪ್ರವಾಸದ ಟಿ ಟ್ವೆಂಟಿ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಲಂಕಾ ವಿರುದ್ಧ ಸ್ಥಾನ ಪಡೆದಿದ್ದ ಯುವ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ನನ್ನು ಮತ್ತೆ ಹೊರಗಿರಿಸಲಾಗಿದೆ.
ವಿರಾಟ್ ಕೊಹ್ಲಿ ತಂಡದ ನಾಯಕತ್ವ ವಹಿಸಿದ್ದು, ರೋಹಿತ್ ಶರ್ಮಾ ಮತ್ತೆ ತಂಡ ಕೂಡಿಕೊಂಡಿದ್ದಾರೆ. ಐದು ಪಂದ್ಯಗಳ ಸರಣಿಯಾದ ಕಾರಣ ಒಟ್ಟು 16 ಆಟಗಾರರ ತಂಡ ಆಯ್ಕೆ ಮಾಡಲಾಗಿದೆ.
ಕಮ್ ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ನಿರಾಸೆ ಅನುಭವಿಸಿದ್ದು, ಫಿಟ್ ನೆಸ್ ಕೊರತೆಯಿಂದಾಗಿ ತಂಡಕ್ಕೆ ಆಯ್ಕೆಯಾಗಲಿಲ್ಲ.
ಮೊಹಮ್ಮದ್ ಶಮಿ ಮತ್ತೆ ತಂಡ ಕೂಡಿಕೊಂಡಿದ್ದು ಉಳಿದಂತೆ ಲಂಕಾ ವಿರುದ್ಧದ ತಂಡ ಉಳಿಸಲಾಗಿದೆ. ಜನವರಿ 24ರಿಂದ ಟಿ ಟ್ವೆಂಟಿ ಸರಣಿ ಆರಂಭವಾಗಲಿದೆ.
ತಂಡ:
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆ ಎಲ್ ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್, ಶಿವಂ ದುಬೆ, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ