Udayavni Special

ವೆಸ್ಟ್‌ ಇಂಡೀಸ್‌ ಪ್ರವಾಸಕ್ಕೆ ತಂಡದ ಆಯ್ಕೆ ಸವಾಲು


Team Udayavani, Jul 19, 2019, 5:46 AM IST

IMD

ಮುಂಬಯಿ: ವಿಶ್ವಕಪ್‌ ಸೆಮಿಫೈನಲ್‌ ಆಘಾತದಿಂದ ಇನ್ನಷ್ಟೇ ಹೊರಬರಬೇಕಿರುವ ಟೀಮ್‌ ಇಂಡಿಯಾ, ಇನ್ನು ಕೆಲವೇ ದಿನಗಳಲ್ಲಿ ವೆಸ್ಟ್‌ ಇಂಡೀಸ್‌ ಪ್ರವಾಸಕ್ಕೆ ಹೊರಡಲಿದೆ.

ಇದಕ್ಕಾಗಿ ತಂಡದ ಆಯ್ಕೆ ಪ್ರಕ್ರಿಯೆ ರವಿವಾರ ನಡೆಯಲಿದ್ದು, ಎಂ.ಎಸ್‌.ಕೆ. ಪ್ರಸಾದ್‌ ನೇತೃತ್ವದ ಆಯ್ಕೆ ಸಮಿತಿ ಮುಂದೆ ಅನೇಕ ಜಟಿಲ ಸಂಗತಿಗಳನ್ನು ಇತ್ಯರ್ಥಗೊಳಿಸುವ ಸವಾಲು ಕಾದಿದೆ.

ಇದರಲ್ಲಿ ಮುಖ್ಯವಾಗಿರುವುದು ಹಿರಿಯ ಆಟಗಾರ ಮಹೇಂದ್ರ ಸಿಂಗ್‌ ಧೋನಿ ಅವರನ್ನು ತಂಡದಲ್ಲಿ ಮುಂದುವರಿಸಬೇಕೇ, ಬೇಡವೇ ಎಂಬುದು. ಹಾಗೆಯೇ ನಾಯಕ ವಿರಾಟ್‌ ಕೊಹ್ಲಿ, ಸೀಮರ್‌ ಜಸ್‌ಪ್ರೀತ್‌ ಬುಮ್ರಾ ಮೊದಲಾದವರನ್ನು ಪೂರ್ಣ ಪ್ರವಾಸಕ್ಕೆ ಆರಿಸಬೇಕೇ ಅಥವಾ ವಿಶ್ರಾಂತಿ ನೀಡಬೇಕೇ ಎಂಬುದು.

ಈ ಪ್ರವಾಸದ ವೇಳೆ 3 ಟಿ20 (ಆ. 3-6), 3 ಏಕದಿನ (ಆ. 8-14) ಹಾಗೂ 2 ಟೆಸ್ಟ್‌ ಪಂದ್ಯಗಳನ್ನು (ಆ. 22-ಸೆ. 3) ಆಡಲಾಗುವುದು. ಟೆಸ್ಟ್‌ ಪಂದ್ಯಗಳು “ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌’ ವ್ಯಾಪ್ತಿಗೆ ಬರುವುದರಿಂದ ಪೂರ್ಣ ಸಾಮರ್ಥ್ಯದ ತಂಡವನ್ನೇ ಆರಿಸಬೇಕಾದ ಅಗತ್ಯವಿದೆ. ಹಾಗೆಯೇ ಮುಂದಿನ ವರ್ಷ ಟಿ20 ವಿಶ್ವಕಪ್‌ ಪಂದ್ಯಾವಳಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ ತಂಡವನ್ನು ಸಜ್ಜುಗೊಳಿಸಬೇಕಿದೆ. ಈ ಎಲ್ಲ ಅಂಶಗಳನ್ನು ಗಮನ ದಲ್ಲಿರಿಸಿ ತಂಡವನ್ನು ಅಂತಿಮ ಗೊಳಿಸಬೇಕಾಗುತ್ತದೆ.

ಒಂದು ವೇಳೆ ಕೊಹ್ಲಿಗೆ ತುಸು ವಿಶ್ರಾಂತಿ ನೀಡುವುದಾದರೆ ಅಥವಾ ವಿಭಿನ್ನ ನಾಯಕರ ಪ್ರಯೋಗಕ್ಕೆ ಮುಂದಾಗುವುದಾದರೆ ರೋಹಿತ್‌ ಶರ್ಮ ಅವರಿಗೆ ಏಕದಿನ, ಟಿ20 ನಾಯಕತ್ವ ಲಭಿಸಲೂಬಹುದು.

ಧೋನಿ ಭವಿಷ್ಯದ ದಿಕ್ಸೂಚಿ
38ರ ಹರೆಯದ ಮಹೇಂದ್ರ ಸಿಂಗ್‌ ಧೋನಿ ತಮ್ಮ ಫಿನಿಶಿಂಗ್‌ ಸಾಮರ್ಥ್ಯವನ್ನು ಕಳೆದುಕೊಂಡದ್ದು ಈಗಾಗಲೇ ಏಕದಿನ ವಿಶ್ವಕಪ್‌ನಲ್ಲಿ ಸಾಬೀತಾಗಿದೆ. ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮುಂದುವರಿಯುವರೋ ಅಥವಾ ನಿವೃತ್ತಿಯ ನಿರ್ಧಾರವನ್ನೇನಾದರೂ ತೆಗೆದುಕೊಳ್ಳುವರೋ ಎಂಬುದು ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಕಳೆದ ವರ್ಷಾಂತ್ಯ ವೆಸ್ಟ್‌ ಇಂಡೀಸ್‌ ಮತ್ತು ಆಸ್ಟ್ರೇಲಿಯ ವಿರುದ್ಧ ನಡೆದ ಟಿ20 ಸರಣಿಯಿಂದ ಧೋನಿ ಅವರನ್ನು ಕೈಬಿಡಲಾಗಿತ್ತು. ಹೀಗಾಗಿ ವಿಂಡೀಸ್‌ ಟಿ20 ಸರಣಿಗೂ ಅನುಮಾನ ಎಂದು ಭಾವಿಸಲಾಗಿದೆ. ಆಗ ಈ ಸ್ಥಾನ ರಿಷಭ್‌ ಪಂತ್‌ ಪಾಲಾಗಲಿದೆ.

ತಂಡದ ಮಧ್ಯಮ ಕ್ರಮಾಂಕ ವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಸ್ಪಷ್ಟ ಯೋಜನೆ ಯೊಂದನ್ನು ರೂಪಿಸುವ ಅಗತ್ಯವೂ ಇದೆ. ವಿಶ್ವಕಪ್‌ನಲ್ಲಿ ಮಿಡ್ಲ್ ಆರ್ಡರ್‌ ವೈಫ‌ಲ್ಯ ಭಾರತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ವಿಜಯ್‌ ಶಂಕರ್‌ ವೈಫ‌ಲ್ಯ, ರಾಯುಡು ದಿಢೀರ್‌ ನಿವೃತ್ತಿಯಿಂದಾಗಿ ಈ ಜಾಗಕ್ಕೆ ಮನೀಷ್‌ ಪಾಂಡೆ, ಶ್ರೇಯಸ್‌ ಅಯ್ಯರ್‌, ಗಿಲ್‌ ಮೊದಲಾದವರು ರೇಸ್‌ನಲ್ಲಿದ್ದಾರೆ. ಪಾಂಡೆ ಸದ್ಯ “ಎ’ ತಂಡದ ನಾಯಕ ನಾಗಿ ವೆಸ್ಟ್‌ ಇಂಡೀಸ್‌ನಲ್ಲೇ ಸರಣಿ ಆಡುತ್ತಿದ್ದು, ಗಿಲ್‌ ಕೂಡ ಈ ತಂಡದಲ್ಲಿದ್ದಾರೆ.

ಆಯ್ಕೆ ಸಮಿತಿ ಸಭೆ ಮುಂದೂಡಿಕೆ
ಸುಪ್ರೀಂ ಕೋರ್ಟ್‌ ನೇಮಕ ಮಾಡಿದ ಆಡಳಿತಗಾರರ ಸಮಿತಿಯು ಕ್ರಿಕೆಟ್‌ ಆಯ್ಕೆ ಸಮಿತಿ ಸಭೆಯಲ್ಲಿ ಸುಧಾರಣೆ ತರುವ ನಿಟ್ಟಿಯಲ್ಲಿ ಕೆಲವು ನಿಯಮಗಳನ್ನು ಬದಲಾಯಿಸಿದೆ. ಆಡಳಿತಗಾರರ ಸಮಿತಿಯ ನಿರ್ದೇಶನದಂತೆ ಬಿಸಿಸಿಐ ಪ್ರಧಾನ ಕಾರ್ಯದರ್ಶಿಯ ಬದಲು ಆಯ್ಕೆಗಾರರ ಚೇರ್ಮನ್‌ ಆಯ್ಕೆ ಸಮಿತಿಯ ಸಂಚಾಲಕರಾಗಿರುತ್ತಾರೆ ಮತ್ತು ಸಭೆಯನ್ನು ಕರೆಯಲಿದ್ದಾರೆ. ಈ ಕಾರಣಕ್ಕಾಗಿ ಶುಕ್ರವಾರ ನಡೆಯಬೇಕಿದ್ದ ತಂಡದ ಆಯ್ಕೆ ರವಿವಾರಕ್ಕೆ ಮುಂದೂಡಲ್ಪಟ್ಟಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಎಲೆಕ್ಷನ್‌ ಬಳಿಕ “ಕೈ’ ಹುದ್ದೆಗಳಲ್ಲಿ ಬದಲು?

ಎಲೆಕ್ಷನ್‌ ಬಳಿಕ “ಕೈ’ ಹುದ್ದೆಗಳಲ್ಲಿ ಬದಲು?

ಉಪ ಚುನಾವಣೆ ಫ‌ಲಿತಾಂಶದ ಬಳಿಕ ಹುಲಿಯಾ ಕಾಡಿಗೆ, ಬಂಡೆ ಛಿದ್ರ: ನಳಿನ್‌

ಉಪ ಚುನಾವಣೆ ಫ‌ಲಿತಾಂಶದ ಬಳಿಕ ಹುಲಿಯಾ ಕಾಡಿಗೆ, ಬಂಡೆ ಛಿದ್ರ: ನಳಿನ್‌

ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಜಗದೀಶ್‌ ದಂಪತಿ, ಉದ್ಯಮಿ ವಿಚಾರಣೆ

ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಜಗದೀಶ್‌ ದಂಪತಿ, ಉದ್ಯಮಿ ವಿಚಾರಣೆ

“ಚೇತರಿಕೆಯತ್ತ ಅರ್ಥ ವ್ಯವಸ್ಥೆ’

“ಚೇತರಿಕೆಯತ್ತ ಅರ್ಥ ವ್ಯವಸ್ಥೆ’

ನಾಯಕರಿಗೇಕೆ 2 ಕ್ಯಾಪ್‌?

ಐಪಿಎಲ್‌ 2020: ತಂಡದ ನಾಯಕರಿಗೇಕೆ 2 ಕ್ಯಾಪ್‌?

ಬಾಂಗ್ಲಾ ಆಟಗಾರ್ತಿ ಸಂಜಿದಾ ವಿಶಿಷ್ಟ ಹೆಜ್ಜೆ; ಬ್ಯಾಟ್‌ನೊಂದಿಗೆ ವೆಡ್ಡಿಂಗ್‌ ಫೋಟೋ ಶೂಟ್‌!

ಬ್ಯಾಟ್‌ನೊಂದಿಗೆ ವೆಡ್ಡಿಂಗ್‌ ಫೋಟೋ ಶೂಟ್‌: ಬಾಂಗ್ಲಾ ಆಟಗಾರ್ತಿ ಸಂಜಿದಾ ವಿಶಿಷ್ಟ ಹೆಜ್ಜೆ

IPLIPL 2020 : ಸಿಡಿದು ನಿಂತ ಸಿರಾಜ್‌; ಆರ್‌ಸಿಬಿ ಜಯಭೇರಿ

IPL 2020 : ಸಿಡಿದು ನಿಂತ ಸಿರಾಜ್‌; ಆರ್‌ಸಿಬಿ ಜಯಭೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಯಕರಿಗೇಕೆ 2 ಕ್ಯಾಪ್‌?

ಐಪಿಎಲ್‌ 2020: ತಂಡದ ನಾಯಕರಿಗೇಕೆ 2 ಕ್ಯಾಪ್‌?

ಬಾಂಗ್ಲಾ ಆಟಗಾರ್ತಿ ಸಂಜಿದಾ ವಿಶಿಷ್ಟ ಹೆಜ್ಜೆ; ಬ್ಯಾಟ್‌ನೊಂದಿಗೆ ವೆಡ್ಡಿಂಗ್‌ ಫೋಟೋ ಶೂಟ್‌!

ಬ್ಯಾಟ್‌ನೊಂದಿಗೆ ವೆಡ್ಡಿಂಗ್‌ ಫೋಟೋ ಶೂಟ್‌: ಬಾಂಗ್ಲಾ ಆಟಗಾರ್ತಿ ಸಂಜಿದಾ ವಿಶಿಷ್ಟ ಹೆಜ್ಜೆ

IPLIPL 2020 : ಸಿಡಿದು ನಿಂತ ಸಿರಾಜ್‌; ಆರ್‌ಸಿಬಿ ಜಯಭೇರಿ

IPL 2020 : ಸಿಡಿದು ನಿಂತ ಸಿರಾಜ್‌; ಆರ್‌ಸಿಬಿ ಜಯಭೇರಿ

00

ಆರ್ ಸಿಬಿ ಬೊಂಬಾಟ್ ಬೌಲಿಂಗ್ ಗೆ ಕೆಕೆಆರ್ ಬ್ಯಾಟಿಂಗ್ ತತ್ತರ : 85 ರ ಸವಾಲು

cricket

ಜಯದ ವಿಶ್ವಾಸದಲ್ಲಿ RCB-KKR: ಟಾಸ್ ಗೆದ್ದ ಮಾರ್ಗನ್ ಪಡೆ ಬ್ಯಾಟಿಂಗ್ ಆಯ್ಕೆ: ತಂಡ ಇಂತಿದೆ…

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್ಹೊಸ ಸೇರ್ಪಡೆ

ಡ್ರಗ್ಸ್‌ ಮುಕ್ತ ಜಿಲ್ಲೆಯಾಗಿ ಪಣ ; ಉಡುಪಿಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್‌

ಡ್ರಗ್ಸ್‌ ಮುಕ್ತ ಜಿಲ್ಲೆಯಾಗಿ ಪಣ ; ಉಡುಪಿಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್‌

ಪೊಲೀಸರ ಕೆಲಸ ಶ್ಲಾಘನೀಯ ; ಮಂಗಳೂರಿನಲ್ಲಿ ಐಜಿಪಿ ದೇವಜ್ಯೋತಿ ರೇ

ಪೊಲೀಸರ ಕೆಲಸ ಶ್ಲಾಘನೀಯ; ಮಂಗಳೂರಿನಲ್ಲಿ ಐಜಿಪಿ ದೇವಜ್ಯೋತಿ ರೇ

ಕೇರಳಕ್ಕೆ ಬರಲು ನೋಂದಣಿ ಅಗತ್ಯ ; ಕಾಸರಗೋಡು ಗಡಿಗಳಲ್ಲಿ ಮತ್ತೆ ತಪಾಸಣೆ

ಕೇರಳಕ್ಕೆ ಬರಲು ನೋಂದಣಿ ಅಗತ್ಯ ; ಕಾಸರಗೋಡು ಗಡಿಗಳಲ್ಲಿ ಮತ್ತೆ ತಪಾಸಣೆ

ಎಲೆಕ್ಷನ್‌ ಬಳಿಕ “ಕೈ’ ಹುದ್ದೆಗಳಲ್ಲಿ ಬದಲು?

ಎಲೆಕ್ಷನ್‌ ಬಳಿಕ “ಕೈ’ ಹುದ್ದೆಗಳಲ್ಲಿ ಬದಲು?

ಪೊಲೀಸರ ಕಾರ್ಯ ಅವಿಸ್ಮರಣೀಯ: ಮುಖ್ಯಮಂತ್ರಿ

ಪೊಲೀಸರ ಕಾರ್ಯ ಅವಿಸ್ಮರಣೀಯ: ಮುಖ್ಯಮಂತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.