INDvsENG; ಮೂರನೇ ದಿನದಾಟದಲ್ಲಿ ಆಡಲು ಬಾರದ ರೋಹಿತ್ ಶರ್ಮಾ!
Team Udayavani, Mar 9, 2024, 1:18 PM IST
ಧರ್ಮಶಾಲಾ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಐದನೇ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಹೊಡೆದ ನಾಯಕ ರೋಹಿತ್ ಶರ್ಮಾ ಅವರು ಮೂರನೇ ದಿನದಾಟದಲ್ಲಿ ಮೈದಾನಕ್ಕೆ ಇಳಿದಿಲ್ಲ. ಅವರ ಬದಲಿಗೆ ಜಸ್ಪ್ರೀತ್ ಬುಮ್ರಾ ಅವರು ನಾಯಕತ್ವದ ಹೊಣೆ ಹೊತ್ತಿದ್ದಾರೆ.
ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೂರನೇ ದಿನದ ಆಟದ ಮೊದಲ ಸೆಷನ್ ನಲ್ಲಿ ರೋಹಿತ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎಂದು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಹೇಳಿದೆ.
ಐದು ಟೆಸ್ಟ್ ಗಳ ಸರಣಿಯಲ್ಲಿ ರೋಹಿತ್ ಶರ್ಮಾ ಫಿಟ್ನೆಸ್ ಸಮಸ್ಯೆಯಿಂದಾಗಿ ಒಂದು ದಿನದ ಆಟದಿಂದ ಹೊರಗುಳಿದಿರುವುದು ಇದೇ ಮೊದಲು. ಟೆಸ್ಟ್ ತಂಡದಲ್ಲಿ ಕಳೆದ ಕೆಲವು ವಾರಗಳಿಂದ ಆಟಗಾರರ ಗಾಯದ ಸಮಸ್ಯೆ ಮತ್ತು ಲಭ್ಯತೆಯ ಸಮಸ್ಯೆಗಳ ಹೊರತಾಗಿಯೂ ಭಾರತ ತಂಡದ ನಾಯಕ ರೋಹಿತ್ ಆಡುವ ಬಳಗದಲ್ಲಿ ಸ್ಥಿರವಾಗಿದ್ದಾರೆ.
ರೋಹಿತ್ ಶರ್ಮಾ ಅವರು ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಬಾರಿಸಿದ್ದರು. 162 ಎಸೆತ ಎದುರಿಸಿದ್ದ ರೋಹಿತ್ ಅವರು 103 ರನ್ ಗಳಿಸಿದ್ದರು. ಈ ಇನ್ನಿಂಗ್ಸ್ ನಲ್ಲಿ ಅವರು 13 ಬೌಂಡರಿ ಮತ್ತು ಮೂರು ಸಿಕ್ಸರ್ ಬಾರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?