ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್: ಓವಲ್, ಲಾರ್ಡ್ಸ್‌ನಲ್ಲಿ ಫೈನಲ್
Team Udayavani, Sep 22, 2022, 5:45 AM IST
ದುಬಾೖ: ಮುಂಬರುವ 2023 ಹಾಗೂ 2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಗಳನ್ನು ಕ್ರಮವಾಗಿ ಓವಲ್ ಮತ್ತು ಲಾರ್ಡ್ಸ್ ಅಂಗಳದಲ್ಲಿ ಆಡಲಾಗುವುದು ಎಂದು ಐಸಿಸಿ ಬುಧವಾರ ತಿಳಿಸಿದೆ.
ಮುಂದಿನೆರಡು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಗಳನ್ನು ಇಂಗ್ಲೆಂಡ್‌ನಲ್ಲಿ ಆಡಿಸುವ ಬಗ್ಗೆ ಜುಲೈಯಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಐಸಿಸಿ ವಾರ್ಷಿಕ ಮಹಾಸಭೆಯಲ್ಲಿ ನಿರ್ಧರಿಸಲಾಗಿತ್ತು.
ಬುಧವಾರ ಐಸಿಸಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜೆಫ್ ಅಲ್ಲಡೈìಸ್ ಈ ಪಂದ್ಯಗಳ ಸ್ಥಳವನ್ನು ಪ್ರಕಟಿಸಿದರು.
ಓವಲ್ ಮತ್ತು ಲಾರ್ಡ್ಸ್‌ಗೆ ಫೈನಲ್ ಆತಿಥ್ಯ ಲಭಿಸಿದ್ದನ್ನು ಸರ್ರೆ ಕೌಂಟಿ ಕ್ರಿಕೆಟ್ ಕ್ಲಬ್ ಸಿಇಒ ಸ್ಟೀವ್ ಎಲ್ವರ್ದಿ, ಮೆರಿಲ್‌ಬಾನ್ ಕ್ರಿಕೆಟ್ ಕ್ಲಬ್‌ನ ಸಿಇಒ ಗಯ್ ಲವೆಂಡರ್ ಸ್ವಾಗತಿಸಿದ್ದಾರೆ.
ದ್ವಿತೀಯ ಆವೃತ್ತಿಯ ಟೆಸ್ಟ್ ಚಾಂಪಿಯನ್‌ಶಿಪ್ 2021ರ ಆ. 4ರಂದು ಆರಂಭಗೊಂಡಿದ್ದು, ಮುಂದಿನ ಮಾ. 31ಕ್ಕೆ ಕೊನೆಗೊಳ್ಳುತ್ತದೆ. ಆಸ್ಟ್ರೇಲಿಯ ಮತ್ತು ದಕ್ಷಿಣ ಆಫ್ರಿಕಾ ಮೊದಲೆರಡು ಸ್ಥಾನದಲ್ಲಿವೆ.
ಭಾರತ-ನ್ಯೂಜಿಲ್ಯಾಂಡ್ ನಡುವಿನ ಚೊಚ್ಚಲ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಸೌತಾಂಪ್ಟನ್‌ನಲ್ಲಿ ನಡೆದಿತ್ತು. ಇಲ್ಲಿ ನ್ಯೂಜಿಲ್ಯಾಂಡ್ ಚಾಂಪಿಯನ್ ಆಗಿ ಮೂಡಿಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani
ಹೊಸ ಸೇರ್ಪಡೆ
ಮಣಿಪಾಲ: ಅಪಾರ್ಟ್ ಮೆಂಟ್ ನಲ್ಲಿ ಲಕ್ಷಾಂತರ ರೂ. ಸೊತ್ತುಗಳ ಕಳವು
ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?
ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ
ಮಂಗಳೂರು : ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬಂದಿಗೆ ಚೂರಿ ಇರಿತ
ಬಸವ ಕಲ್ಯಾಣದಲ್ಲಿ ಸಿದ್ದರಾಮಯ್ಯ,ಕೋಲಾರದಲ್ಲಿ ಡಿಕೆಶಿ: ಪ್ರಜಾಧ್ವನಿ ಯಾತ್ರೆಗೆ ಚಾಲನೆ