ನವೋಮಿ ಒಸಾಕಾ, ಬಾರ್ಟಿಗೆ ಸೋಲಿನ ಆಘಾತ

Team Udayavani, Sep 4, 2019, 5:22 AM IST

navomi

ನ್ಯೂಯಾರ್ಕ್‌: ಹಾಲಿ ಚಾಂಪಿಯನ್‌ ಮತ್ತು ಅಗ್ರ ಶ್ರೇಯಾಂಕದ ನವೋಮಿ ಒಸಾಕಾ, ದ್ವಿತೀಯ ಶ್ರೇಯಾಂಕದ ಆ್ಯಶ್ಲೆ ಬಾರ್ಟಿ ಅವರು ಪ್ರೀ-ಕ್ವಾರ್ಟರ್‌ಫೈನಲ್ನಲ್ಲಿ ಆಘಾತಕಾರಿ ಸೋಲನ್ನು ಕಂಡಿದ್ದಾರೆ. ಇದೇ ವೇಳೆ ಆರು ಬಾರಿಯ ಚಾಂಪಿಯನ್‌ ಸೆರೆನಾ ವಿಲಿಯಮ್ಸ್‌ ಸುಲಭ ಗೆಲುವಿನೊಂದಿಗೆ ಕ್ವಾರ್ಟರ್‌ಫೈನಲ್ ಹಂತಕ್ಕೇರಿದ್ದಾರೆ. ಅವರ ಜತೆ ಕ್ರೊವೇಶಿಯದ ಡೊನಾ ವೆಕಿಕ್‌, ಬೆಲಿಂಡಾ ಬೆನ್ಸಿಕ್‌, ಎಲಿನಾ ಸ್ವಿಟೋಲಿನಾ ತಮ್ಮ ಎದುರಾಳಿಯೆದುರು ಜಯ ಸಾಧಿಸಿ ಮುನ್ನಡೆದಿದ್ದಾರೆ.

ಬೆನ್ಸಿಕ್‌ ಅದ್ಭುತ ಆಟ

ಈ ವರ್ಷ ಅಮೋಘ ಆಟದ ಪ್ರದರ್ಶನ ನೀಡುತ್ತ ಬಂದಿರುವ ಸ್ವಿಜರ್‌ಲ್ಯಾಂಡಿನ ಬೆಲಿಂಡಾ ಬೆನ್ಸಿಕ್‌ ಅವರು 21ರ ಹರೆಯದ ಜಪಾನಿನ ತಾರೆ ನವೋಮಿ ಒಸಾಕಾ ಅವರಿಗೆ ನೇರ ಸೆಟ್‌ಗಳ ಆಘಾತವಿಕ್ಕಿದರು. ಈ ಸೋಲಿನ ಆಘಾತದಿಂದ ಒಸಾಕಾ ಮುಂದಿನ ವಾರ ಪ್ರಕಟವಾಗುವ ನೂತನ ರ್‍ಯಾಂಕಿಂಗ್‌ನಲ್ಲಿ ವಿಶ್ವದ ನಂಬರ್‌ ವನ್‌ ಸ್ಥಾನವನ್ನೂ ಕಳೆದುಕೊಳ್ಳಲಿದ್ದಾರೆ.

ಅಗ್ರ ಶ್ರೇಯಾಂಕದ ಒಸಾಕಾ ಅವರನ್ನು 7-5, 6-4 ಸೆಟ್‌ಗಳಿಂದ ಉರುಳಿಸಿದ ಬೆನ್ಸಿಕ್‌ ಕ್ವಾರ್ಟರ್‌ಫೈನಲ್ನಲ್ಲಿ ಡೊನಾ ವೆಕಿಕ್‌ ಅವರ ಸವಾಲನ್ನು ಎದುರಿಸಲಿದ್ದಾರೆ. ಈ ವರ್ಷ ಬೆನ್ಸಿಕ್‌ ಅವರು ಒಸಾಕಾ ಅವರನ್ನು ಮೂರನೇ ಬಾರಿ ಸೋಲಿಸಿ ತನ್ನ ಸಾಮರ್ಥ್ಯ ಏನೆಂಬುದನ್ನು ಸಾಬೀತುಪಡಿಸಿದ್ದಾರೆ.

ಒಸಾಕಾ ಅವರ ನಿರ್ಗಮನ ದಿಂದಾಗಿ ಸತತ ಮೂರನೇ ವರ್ಷ ಬೇರೆ ಬೇರೆ ವನಿತೆಯರು ವರ್ಷದ ನಾಲ್ಕು ಗ್ರ್ಯಾನ್‌ ಸ್ಲಾಮ್‌ಗಳಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.

ಬಾರ್ಟಿಗೆ ಸೋಲು

ಹಾಲಿ ಫ್ರೆಂಚ್ ಓಪನ್‌ ಚಾಂಪಿಯನ್‌ ಆಗಿರುವ ಆಸ್ಟ್ರೇಲಿಯದ ಆ್ಯಶ್ಲೆ ಬಾರ್ಟಿ ಅವರು ಚೀನದ ವಾಂಗ್‌ ಕಿಯಾಂಗ್‌ ಕೈಯಲ್ಲಿ ಸೋತು ಆಘಾತಕ್ಕೆ ಒಳಗಾಗಿದ್ದಾರೆ. 23ರ ಹರೆಯದ ಬಾರ್ಟಿ ಹಲವು ತಪ್ಪುಗಳನ್ನು ಮಾಡಿ ಪಂದ್ಯವನ್ನು 2-6, 4-6 ಸೆಟ್‌ಗಳಿಂದ ಸೋತರು. ಬಾರ್ಟಿ ಇಲ್ಲಿ ಸೋತರೂ ಮುಂದಿನ ವಾರ ಪ್ರಕಟವಾಗುವ ನೂತನ ರ್‍ಯಾಂಕಿಂಗ್‌ನಲ್ಲಿ ನಂಬರ್‌ ವನ್‌ ಸ್ಥಾನಕ್ಕೇರಲಿದ್ದಾರೆ. ಕಳೆದ ಜನವರಿಯಲ್ಲಿ ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಕ್ವಾರ್ಟರ್‌ಫೈನಲ್ ತಲುಪಿದ್ದ ಬಾರ್ಟಿ ಫ್ರೆಂಚ್ ಓಪನ್‌ ಜಯಿಸಿದ್ದರು.

ಬೆಲಿಂಡಾ ಬೆನ್ಸಿಕ್‌

ಆರು ಬಾರಿಯ ಚಾಂಪಿಯನ್‌ ಆತಿಥೇಯ ನಾಡಿನ ಸೆರೆನಾ ವಿಲಿಯಮ್ಸ್‌ ಅವರು ಕ್ರೊವೇಶಿಯದ ಪೆಟ್ರಾ ಮಾರ್ಟಿಕ್‌ ಅವರನ್ನು 6-3, 6-4 ನೇರ ಸೆಟ್‌ಗಳಿಂದ ಸೋಲಿಸಿ ಕ್ವಾರ್ಟರ್‌ಫೈನಲ್ ತಲುಪಿದ್ದಾರೆ.

ಕ್ವಾರ್ಟರ್‌ಫೈನಲ್ನಲ್ಲಿ 37ರ ಹರೆಯದ ಸೆರೆನಾ ಅವರು ವಾಂಗ್‌ ಕಿಯಾಂಗ್‌ ಅವರನ್ನು ಎದುರಿಸಲಿದ್ದಾರೆ. ವಾಂಗ್‌ ಈ ಹಿಂದಿನ ಪಂದ್ಯದಲ್ಲಿ ಬಾರ್ಟಿ ಅವರನ್ನು ಸೋಲಿಸಿದ ಸಾಧನೆ ಮಾಡಿದ್ದಾರೆ. ತನ್ನ ಬಾಳ್ವೆಯಲ್ಲಿ 24ನೇ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿರುವ ಸೆರೆನಾ ಅವರಿಗೆ ವಾಂಗ್‌ ಯಾವ ರೀತಿಯ ಉತ್ತರ ನೀಡುತ್ತಾರೆಂದು ಕಾದು ನೋಡಬೇಕಾಗಿದೆ.

ಇನ್ನೊಂದು ಪಂದ್ಯದಲ್ಲಿ 23ರ ಹರೆಯದ ಡೊನಾ ವೆಟಿಕ್‌ ಅವರು ಜರ್ಮನಿಯ ಜೂಲಿಯಾ ಜಾರ್ಜಸ್‌ ಅವರನ್ನು 6-7 (5-7), 7-5, 6-3 ಸೆಟ್‌ಗಳಿಂದ ಸೋಲಿಸಿ ಅಂತಿಮ ಎಂಟರ ಸುತ್ತಿಗೆ ತಲುಪಿದ್ದಾರೆ. ಅಲ್ಲಿ ಅವರು ಒಸಾಕಾ ಅವರನ್ನು ಕೆಡಹಿದ ಬೆನ್ಸಿಕ್‌ ಅವರ ಸವಾಲನ್ನು ಎದುರಿಸಲಿದ್ದಾರೆ. ಇನ್ನೊಂದು ಪಂದ್ಯದಲ್ಲಿ ಎಲಿನಾ ಸ್ವಿಟೋಲಿನಾ ಅವರು ಅಮೆರಿಕದ ಮ್ಯಾಡಿಸನ್‌ ಕೀಸ್‌ ಅವರನ್ನು 7-5, 6-4 ಸೆಟ್‌ಗಳಿಂದ ಸೋಲಿಸಿ ಕ್ವಾರ್ಟರ್‌ಫೈನಲ್ ತಲುಪಿದರು.

ಸೆರೆನಾ ಕ್ವಾರ್ಟರ್‌ಫೈನಲಿಗೆ

ಆರು ಬಾರಿಯ ಚಾಂಪಿಯನ್‌ ಆತಿಥೇಯ ನಾಡಿನ ಸೆರೆನಾ ವಿಲಿಯಮ್ಸ್‌ ಅವರು ಕ್ರೊವೇಶಿಯದ ಪೆಟ್ರಾ ಮಾರ್ಟಿಕ್‌ ಅವರನ್ನು 6-3, 6-4 ನೇರ ಸೆಟ್‌ಗಳಿಂದ ಸೋಲಿಸಿ ಕ್ವಾರ್ಟರ್‌ಫೈನಲ್ ತಲುಪಿದ್ದಾರೆ. ಕ್ವಾರ್ಟರ್‌ಫೈನಲ್ನಲ್ಲಿ 37ರ ಹರೆಯದ ಸೆರೆನಾ ಅವರು ವಾಂಗ್‌ ಕಿಯಾಂಗ್‌ ಅವರನ್ನು ಎದುರಿಸಲಿದ್ದಾರೆ. ವಾಂಗ್‌ ಈ ಹಿಂದಿನ ಪಂದ್ಯದಲ್ಲಿ ಬಾರ್ಟಿ ಅವರನ್ನು ಸೋಲಿಸಿದ ಸಾಧನೆ ಮಾಡಿದ್ದಾರೆ. ತನ್ನ ಬಾಳ್ವೆಯಲ್ಲಿ 24ನೇ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿರುವ ಸೆರೆನಾ ಅವರಿಗೆ ವಾಂಗ್‌ ಯಾವ ರೀತಿಯ ಉತ್ತರ ನೀಡುತ್ತಾರೆಂದು ಕಾದು ನೋಡಬೇಕಾಗಿದೆ. ಇನ್ನೊಂದು ಪಂದ್ಯದಲ್ಲಿ 23ರ ಹರೆಯದ ಡೊನಾ ವೆಟಿಕ್‌ ಅವರು ಜರ್ಮನಿಯ ಜೂಲಿಯಾ ಜಾರ್ಜಸ್‌ ಅವರನ್ನು 6-7 (5-7), 7-5, 6-3 ಸೆಟ್‌ಗಳಿಂದ ಸೋಲಿಸಿ ಅಂತಿಮ ಎಂಟರ ಸುತ್ತಿಗೆ ತಲುಪಿದ್ದಾರೆ. ಅಲ್ಲಿ ಅವರು ಒಸಾಕಾ ಅವರನ್ನು ಕೆಡಹಿದ ಬೆನ್ಸಿಕ್‌ ಅವರ ಸವಾಲನ್ನು ಎದುರಿಸಲಿದ್ದಾರೆ.
ಇನ್ನೊಂದು ಪಂದ್ಯದಲ್ಲಿ ಎಲಿನಾ ಸ್ವಿಟೋಲಿನಾ ಅವರು ಅಮೆರಿಕದ ಮ್ಯಾಡಿಸನ್‌ ಕೀಸ್‌ ಅವರನ್ನು 7-5, 6-4 ಸೆಟ್‌ಗಳಿಂದ ಸೋಲಿಸಿ ಕ್ವಾರ್ಟರ್‌ಫೈನಲ್ ತಲುಪಿದರು.

ಟಾಪ್ ನ್ಯೂಸ್

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಟಿ20 ವಿಶ್ವಕಪ್‌: ಆಂಗ್ಲರೆದುರು ಲಾಗ ಹಾಕಿದ ಬಾಂಗ್ಲಾ

ಟಿ20 ವಿಶ್ವಕಪ್‌: ಆಂಗ್ಲರೆದುರು ಲಾಗ ಹಾಕಿದ ಬಾಂಗ್ಲಾ

ಟೀವಿ ಕಾರ್ಯಕ್ರಮದ ನಡುವೆಯೇ ಹೊರ ನಡೆದ ಶೋಯಿಬ್‌ ಅಖ್ತರ್‌

ಟೀವಿ ಕಾರ್ಯಕ್ರಮದ ನಡುವೆಯೇ ಹೊರ ನಡೆದ ಶೋಯಿಬ್‌ ಅಖ್ತರ್‌

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.