Udayavni Special

ಈ ದಿನ, ಆ ವರ್ಷ : ಸ‘ಚಿನ್ನ’ ಡಬಲ್ ಸೆಂಚೂರಿ..!

ದ್ವಿಶತಕ ಭಾರಿಸಿದ ಮೊದಲ ಪುರುಷ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್

Team Udayavani, Feb 24, 2021, 6:51 PM IST

This day that year: Sachin Tendulkar becomes first man to complete double ton in ODIs

ಒಂದು ದಶಕದ ಹಿಂದೆ(2010), ಭಾರತದ ಬ್ಯಾಟಿಂಗ್ ದಂತಕಥೆ ಸಚಿನ್ ತೆಂಡೂಲ್ಕರ್ 50 ಓವರ್‌ ಗಳ ಕ್ರಿಕೆಟ್ ಪಂದ್ಯಾಟದಲ್ಲಿ ಡಬಲ್ ಸೆಂಚುರಿ ಭಾರಿಸಿದ ಮೊದಲ ಪುರುಷ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಗ್ವಾಲಿಯರ್‌ ನ ಕ್ಯಾಪ್ಟನ್ ರೂಪ್ ಸಿಂಗ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸಚಿನ್ ಅವರ ಅದ್ಭುತ ಸಾಧನೆ ಅದಾಗಿತ್ತು.

ವೀರೇಂದ್ರ ಸೆಹ್ವಾಗ್ ಅವರೊಂದಿಗೆ ಇನ್ನಿಂಗ್ಸ್ ತೆರೆದ ಬಂದ ಸಚಿನ್ ತೆಂಡೂಲ್ಕರ್, 147 ಎಸೆತಗಳಲ್ಲಿ 200 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು, ಸಚಿನ್ ಅವರ ದ್ವಿಶತಕದ ಸಾಧನೆಯಿಂದಾಗಿ ಭಾರತವು ಬೃಹತ್ ಮೊತ್ತವನ್ನು(401/3)ಗಳಿಸಿತ್ತು. ಭಾರತದ ಮಾಜಿ ನಾಯಕ ಎಂ.ಎಸ್. ಧೋನಿ ಅವರ ಉತ್ತಮ ಬೆಂಬಲವನ್ನು ಕಂಡುಕೊಂಡಿದ್ದರಿಂದ ಸಚಿನ್ 25 ಬೌಂಡರಿ ಮತ್ತು ಮೂರು ಗರಿಷ್ಠ ಮೊತ್ತದೊಂದಿಗೆ ಇನ್ನಿಂಗ್ಸ್ ಮುಗಿಸಿದ್ದರು, ನಂತರ ಧೋನಿ 35 ಎಸೆತಗಳಲ್ಲಿ 68 ರನ್ ಗಳಿಸಿ ಅಜೇಯವಾಗಿ ಇನ್ನಿಂಗ್ಸ್ ಪೂರ್ಣಗೊಳಿಸಿದ್ದರು, ಅಂತಿಮವಾಗಿ ಭಾರತವು 153 ರನ್ಗಳಿಂದ ಸ್ಪರ್ಧೆಯನ್ನು ಗೆದ್ದಿತ್ತು.

ಓದಿ : ಪಿಂಕ್ ಬಾಲ್ ನಲ್ಲಿ ಅಕ್ಷರ್ – ಅಶ್ವಿನ್ ಮ್ಯಾಜಿಕ್ : ಅಲ್ಪ ಮೊತ್ತಕ್ಕೆ ಕುಸಿದ ಆಂಗ್ಲರು

ಈ ದಿನ, ಆ ವರ್ಷ ಸಚಿನ್ 50 ಓವರ್ ಗಳ ಏಕದಿನ ಪಂದ್ಯಾಟದಲ್ಲಿ ದ್ವಿಶತಕ ಭಾರಿಸಿದ ಮೊದಲ ಪುರುಷ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

1997 ರಲ್ಲಿ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ಆಟಗಾರ್ತಿ ಬೆಲಿಂಡಾ ಕ್ಲರ್ಕ್ ಡೆನ್ಮಾರ್ಕ್ ವಿರುದ್ಧ ನಡೆದ ಮಹಿಳಾ ವಿಶ್ವಕಪ್ ನಲ್ಲಿ ದ್ವಿಶತಕ ಭಾರಿಸಿದ್ದರು.

ಈ  ಮುಂಚಿತವಾಗಿ ಪುರುಷರ ಕ್ರಿಕೆಟ್ ಪಂದ್ಯಾಟದಲ್ಲಿ, ಜಿಂಬಾಬ್ವೆಯ ಚಾರ್ಲ್ಸ್ ಕೋವೆಂಟ್ರಿ ಪುರುಷರ ಏಕದಿನ ಕ್ರಿಕೆಟ್‌ನಲ್ಲಿ ಬಾಂಗ್ಲಾದೇಶ ವಿರುದ್ಧ 194 ರನ್ ಭಾರಿಸುವುದರ ಮೂಲಕ  2009 ರಲ್ಲಿ ಏಕ ದಿನ ಪಂದ್ಯಾಟದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಪುರುಷ ಕ್ರಿಕಟಿಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು.

ಆದಾಗ್ಯೂ, ಸಚಿನ್ ಅವರ ದ್ವಿಶತಕದ ನಂತರ, ಇನ್ನೂ ಐದು ಬ್ಯಾಟ್ಸ್‌ ಮನ್‌ ಗಳು 50 ಓವರ್‌ ಫಾರ್ಮ್ಯಾಟ್‌ ನಲ್ಲಿ 200 ರನ್‌ ಗಳ ಗಡಿ ದಾಟುವುದಕ್ಕೆ ಪ್ರೇರಣೆ ನೀಡಿದೆ, ಪ್ರಸ್ತುತ ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಮೂರು ವಿಭಿನ್ನ ಸಂದರ್ಭಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಬಲಗೈ ಬ್ಯಾಟ್ಸ್‌ ಮನ್ ಪುರುಷರ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ (264, ಶ್ರೀಲಂಕಾ ವಿರುದ್ಧ 2014 ರಲ್ಲಿ).

ವೀರೇಂದ್ರ ಸೆಹ್ವಾಗ್, ನ್ಯೂಜಿಲೆಂಡ್‌ನ ಮಾರ್ಟಿನ್ ಗುಪ್ಟಿಲ್, ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಮತ್ತು ಪಾಕಿಸ್ತಾನದ ಫಖರ್ ಜಮಾನ್ ಇತರ ಕ್ರಿಕೆಟಿಗರು, ಇದುವರೆಗೆ 200 ರನ್ ಗಡಿ ದಾಟಿದ್ದಾರೆ.

ಕ್ರಿಕೆಟ್ ಇತಿಹಾಸದಲ್ಲಿ ಸಚಿನ್ ಬರೆದಿದ್ದು ಸುವರ್ಣಾಕ್ಷರ. ಈಗ ವೃತ್ತಿಜೀವನಕ್ಕೆ ತೆರೆ ಎಳೆದು ಕೆಲವು ವರ್ಷಗಳಾಗಿವೆ. ಏಕದಿನ (18,426) ಮತ್ತು ಟೆಸ್ಟ್ (15,921)ಗಳಲ್ಲಿ ಹೆಚ್ಚಿನ ರನ್ ಗಳಿಸಿದ ದಾಖಲೆಯನ್ನು ಅವರು ಹೊಂದಿದ್ದಾರೆ ಮತ್ತು ಅವರ ಹೆಸರಿನಲ್ಲಿ 100 ಅಂತರರಾಷ್ಟ್ರೀಯ ಶತಕಗಳನ್ನು(ಟೆಸ್ಟ್ ಪಂದ್ಯಗಳಲ್ಲಿ 51, ಏಕದಿನ ಪಂದ್ಯಗಳಲ್ಲಿ 49) ಪಡೆದ ಏಕೈಕ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಯಿದೆ.

ಓದಿ : ಆತ್ಮಹತ್ಯೆಗೆ ಬ್ರೇಕ್ ಹಾಕಲು ‘ಲೋನ್ಲಿನೆಸ್ ಮಿನಿಸ್ಟರ್’ನ್ನು ಸಂಪುಟಕ್ಕೆ ಸೇರಿಸಿಕೊಂಡ ಜಪಾನ್!

ಟಾಪ್ ನ್ಯೂಸ್

COVID-19 crisis: Kapil Sibal asks PM Narendra Modi to declare National Health Emergency

ಕೋವಿಡ್ 19 : ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ : ಕಪಿಲ್ ಸಿಬಲ್

ghfgfg

24 ಗಂಟೆಯಲ್ಲಿ 25,000 ಕೋವಿಡ್ ಪ್ರಕರಣ : ದೆಹಲಿಯಲ್ಲಿ ಬೆಡ್‍,ಆಕ್ಸಿಜನ್ ಅಭಾವ ಮುಂದುವರಿಕೆ

ಗದಸಸದದ್

ಮೊಬೈಲ್ ಖರೀದಿಸಲು ಹಣ ಕೊಡದಿದ್ದಕ್ಕೆ ಅಜ್ಜಿಯ ಕುತ್ತಿಗೆ ಹಿಸುಗಿ ಕೊಂದ ಮೊಮ್ಮಗ!

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

ghjgfhfg

ಕಂದಕಕ್ಕೆ ಉರುಳಿದ ಕಾರು : ತಂದೆ-ಮಗ ಸೇರಿ ಐವರ ದುರ್ಮರಣ

18-6

ಪುಸ್ತಕ ಅವಲೋಕನ : ‘ಗಾಲಿಬ್ ಸ್ಮೃತಿ’ : ಗಜಲ್ ‘ಮಲ್ಲಿ’ಗೆಯ ಘಮದೊಳಗೆ

d k shivakumar

ಪ್ರಧಾನಿಯವರಿಗೆ ಜನರ ಆರೋಗ್ಯ ಬೇಕಿಲ್ಲ, ಚುನಾವಣೆಯೇ ಮುಖ್ಯವಾಗಿದೆ: ಡಿಕೆಶಿ ವಾಗ್ದಾಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿಸೆಂಬರ್‌ನಲ್ಲಿ ರಣಜಿಗೆ ಬಿಸಿಸಿಐ ಯೋಜನೆ: ಇರಾನಿ, ದೇವಧರ್‌, ದುಲೀಪ್‌ ಟ್ರೋಫಿ ಅನುಮಾನ!

ಡಿಸೆಂಬರ್‌ನಲ್ಲಿ ರಣಜಿಗೆ ಬಿಸಿಸಿಐ ಯೋಜನೆ: ಇರಾನಿ, ದೇವಧರ್‌, ದುಲೀಪ್‌ ಟ್ರೋಫಿ ಅನುಮಾನ!

ಇಂದು ಮೊದಲ ಡೇ ಮ್ಯಾಚ್‌; ಹ್ಯಾಟ್ರಿಕ್‌ ಹಾದಿಯಲ್ಲಿ ಆರ್‌ಸಿಬಿ

ಇಂದು ಮೊದಲ ಡೇ ಮ್ಯಾಚ್‌; ಹ್ಯಾಟ್ರಿಕ್‌ ಹಾದಿಯಲ್ಲಿ ಆರ್‌ಸಿಬಿ

ಟೀಕಿಸಿದ ಕ್ರಿಕೆಟ್‌ ಅಭಿಮಾನಿಗೆ ಪಂದ್ಯಶ್ರೇಷ್ಠ ಗೌರವ ಅರ್ಪಿಸಿದ ದೀಪಕ್‌ ಚಹರ್ !

ಟೀಕಿಸಿದ ಕ್ರಿಕೆಟ್‌ ಅಭಿಮಾನಿಗೆ ಪಂದ್ಯಶ್ರೇಷ್ಠ ಗೌರವ ಅರ್ಪಿಸಿದ ದೀಪಕ್‌ ಚಹರ್ !

ಹ್ಯಾಟ್ರಿಕ್‌ ಸೋಲಿಗೆ ತುತ್ತಾದ ಹೈದರಾಬಾದ್‌ ; ಮುಂಬೈಗೆ ಸತತ ಎರಡನೇ ಗೆಲುವು

ಹ್ಯಾಟ್ರಿಕ್‌ ಸೋಲಿಗೆ ತುತ್ತಾದ ಹೈದರಾಬಾದ್‌ ; ಮುಂಬೈಗೆ ಸತತ ಎರಡನೇ ಗೆಲುವು

ಒಲಿಂಪಿಯನ್‌, ಭಾರತದ ಮಾಜಿ ಫುಟ್ಬಾಲಿಗ ಅಹ್ಮದ್‌ ಹುಸೇನ್‌ ನಿಧನ

ಒಲಿಂಪಿಯನ್‌, ಭಾರತದ ಮಾಜಿ ಫುಟ್ಬಾಲಿಗ ಅಹ್ಮದ್‌ ಹುಸೇನ್‌ ನಿಧನ

MUST WATCH

udayavani youtube

ಕಡಿಮೆ ಭೂಮಿಯಲ್ಲಿ ಲಾಭದಾಯಕ ಕೈತೋಟ

udayavani youtube

ಕುಂಭಮೇಳ ಈಗ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ

udayavani youtube

COVID 2ನೇ ಅಲೆ ಎಚ್ಚರ ತಪ್ಪಬೇಡಿ

udayavani youtube

ಮನೆಯಂಗಳದಲ್ಲಿ ವೀಳ್ಯದೆಲೆ ಬೆಳೆದು ಯಶಸ್ಸು ಕಂಡ ನಿವೃತ ಅಧ್ಯಾಪಕ

udayavani youtube

ಕುದ್ರೋಳಿ ಗಣೇಶ್ ವಿಸ್ಮಯ ಜಾದೂ

ಹೊಸ ಸೇರ್ಪಡೆ

COVID-19 crisis: Kapil Sibal asks PM Narendra Modi to declare National Health Emergency

ಕೋವಿಡ್ 19 : ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ : ಕಪಿಲ್ ಸಿಬಲ್

Department of Food and Civil Supplies

ಇನ್ಮುಂದೆ ಬರೀ 2 ಕೆಜಿ ಅಕ್ಕಿ ಅಷ್ಟೇ ಸಿಗೋದು

ghfgfg

24 ಗಂಟೆಯಲ್ಲಿ 25,000 ಕೋವಿಡ್ ಪ್ರಕರಣ : ದೆಹಲಿಯಲ್ಲಿ ಬೆಡ್‍,ಆಕ್ಸಿಜನ್ ಅಭಾವ ಮುಂದುವರಿಕೆ

ಗದಸಸದದ್

ಮೊಬೈಲ್ ಖರೀದಿಸಲು ಹಣ ಕೊಡದಿದ್ದಕ್ಕೆ ಅಜ್ಜಿಯ ಕುತ್ತಿಗೆ ಹಿಸುಗಿ ಕೊಂದ ಮೊಮ್ಮಗ!

Take action to vaccinate

ಕೋವಿಡ್ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.