ಐಪಿಎಲ್ ಗೆ ಕೋವಿಡಾಘಾತ: ಚೆನ್ನೈ ಸೂಪರ್ ಕಿಂಗ್ಸ್ ನ ಇಬ್ಬರಿಗೆ ಕೋವಿಡ್ ಪಾಸಿಟಿವ್
Team Udayavani, May 3, 2021, 4:06 PM IST
ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಐಪಿಎಲ್ ಮೇಲೂ ಆತಂಕ ಮೂಡಿಸಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ನ ಇಬ್ಬರು ಆಟಗಾರರಿಗೆ ಕೋವಿಡ್ ಪಾಸಿಟಿವ್ ಆದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ನ ಇಬ್ಬರು ಸದಸ್ಯರಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಓ ಕಾಶಿ ವಿಶ್ವನಾಥನ್ ಮತ್ತು ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಜಿ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ. ಅಷ್ಟೇ ಅಲ್ಲದೆ ತಂಡದ ಬಸ್ ಕ್ಲೀನರ್ ಕೂಡಾ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ.
ರವಿವಾರ ತಂಡದ ಎಲ್ಲಾ ಸದಸ್ಯರಿಗೂ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇಂದು ಇದರ ವರದಿ ಬಂದಿದ್ದು, ಯಾವುದೇ ಆಟಗಾರರಿಗೆ ಸೋಂಕು ದೃಢಪಟ್ಟಿಲ್ಲ.
ಇದನ್ನೂ ಓದಿ:ಕೆಕೆಆರ್ ತಂಡದ ಇಬ್ಬರಿಗೆ ಕೋವಿಡ್ ಪಾಸಿಟಿವ್: ಆರ್ ಸಿಬಿ ವಿರುದ್ಧದ ಪಂದ್ಯ ಮುಂದೂಡಿಕೆ
ವರದಿ ಬರುತ್ತಿದ್ದಂತೆ ತಂಡದ ಅಭ್ಯಾಸವನ್ನು ರದ್ದು ಮಾಡಲಾಗಿದೆ. ಧೋನಿ ಬಳಗ ತನ್ನ ಮುಂದಿನ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧ ಬುಧವಾರ ಆಡಲಿದೆ. ಆದರೆ ಈ ಪಂದ್ಯ ನಡೆಯುವ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ.
ಕಳೆದ ವರ್ಷದ ಕೂಟದ ಆರಂಭದಲ್ಲಿ ಸಿಎಸ್ ಕೆ ತಂಡದ ಆರಂಭಿಕ ಆಟಗಾರ ರುತುರಾಜ್ ಗಾಯಕ್ ವಾಡ್ ಮತ್ತು ಬೌಲರ್ ದೀಪಕ್ ಚಹರ್ ಗೆ ಕೋವಿಡ್ ಸೋಂಕು ದೃಢವಾಗಿತ್ತು.
ಇದನ್ನೂ ಓದಿ: ಶಿವಮೊಗ್ಗದ ಅಭಿಮಾನಿಯ ಚಿತ್ರಕಲೆಯನ್ನು ಶ್ಲಾಘಿಸಿದ ಎಬಿ ಡಿವಿಲಿಯರ್ಸ್
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಗೆ ಕೋವಿಡ್ ಸೋಂಕು ದೃಢವಾಗಿದೆ. ಹೀಗಾಗಿ ಇಂದು ನಡೆಯಬೇಕಿದ್ದ ಕೋಲ್ಕತ್ತಾ ಮತ್ತು ಬೆಂಗಳೂರು ನಡುವಿನ ಪಂದ್ಯ ಮೇ 30ಕ್ಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎರಡು ವರ್ಷದ ಬಳಿಕ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ ಎಂ.ಎಸ್.ಧೋನಿ
ಬಾರ್ಡರ್- ಗಾವಸ್ಕರ್ ಟ್ರೋಫಿ ಆರಂಭ: ಟೀಂ ಇಂಡಿಯಾಗೆ ಇಬ್ಬರು ಪದಾರ್ಪಣೆ
ಆರ್.ಅಶ್ವಿನ್ ಕಾಲು ಮುಟ್ಟಿ ನಮಸ್ಕರಿಸಿದ ಆಸೀಸ್ ನೆಟ್ ಬೌಲರ್ ಮಹೇಶ್ ಪಿಥಿಯ
ಸ್ಪಿನ್ ತಂತ್ರವೇ ಗೆಲುವಿನ ಮಂತ್ರ: ಇಂದಿನಿಂದ ಭಾರತ-ಆಸ್ಟ್ರೇಲಿಯ ಟೆಸ್ಟ್ ಸರಣಿ
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಓವಲ್ ಆತಿಥ್ಯ