ವಿಜಯಪುರದಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌: ಐವರ ಬಂಧನ


Team Udayavani, Apr 15, 2017, 11:35 AM IST

Ban15041715Medn.jpg

ವಿಜಯಪುರ: ನಗರದಲ್ಲಿ ಟಿ20 ಕ್ರಿಕೆಟ್‌ ಬೆಟ್ಟಿಂಗ್‌ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು ಎರಡು ಕಡೆ ದಾಳಿ ನಡೆಸಿ, ಐವರನ್ನು ಬಂಧಿಸಿ, ಲಕ್ಷಕ್ಕೂ ಹೆಚ್ಚು ನಗದು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
 
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಸಿದ್ರಾಮಪ್ಪ, ಗುರುವಾರ ರಾತ್ರಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ಹಾಗೂ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ಮಧ್ಯೆ ನಡೆದ ಪಂದ್ಯದ ವೇಳೆ ವಿಜಯಪುರದ ದಹೀವ ನಗರದಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಇತ್ತು. ಇದನ್ನು ಆಧರಿಸಿ ಸೊಹೇಲ್‌ ಸಿರಾಜ್‌ ಮಣಿಯಾರ್‌ ಇವರ ಬಾಡಿಗೆ ಮನೆ ಮೇಲೆ ಎಎಸ್ಪಿ ಅಪರಾಧ ವಿಭಾಗದ ಸಿಪಿಐ ರವೀಂದ್ರ ನಾಯೊRàಡಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

ರಹೀಂ ನಗರ ನಿವಾಸಿ ಮಲಿಕ್‌ ಚಾಂದ್‌ ಮರಸಲ್‌, ತೊರವಿ ಗ್ರಾಮದ ಮಲ್ಲು ವಿಠಲ ಮಮದಾಪುರ ಹಾಗೂ ಜುಮನಾಳ ಗ್ರಾಮದ ಜಾಯನಗೌಡ ಬಸನಗೌಡ ಪಾಟೀಲ ಅವರನ್ನು ಬಂಧಿಸಿದ್ದಾರೆ. ಬಂಧಿತರು ಆನ್‌ಲೈನ್‌ ಮೂಲಕ ಬೆಟ್ಟಿಂಗ್‌ ರೇಟ್‌ ಪಡೆದು ಕಿಂಗ್ಸ್‌ ಇಲೆವನ್‌ ಗೆದ್ದರೆ 10 ಸಾವಿರಕ್ಕೆ 15 ಸಾವಿರ, ಕೆಕೆಆರ್‌ ಗೆದ್ದರೆ 10 ಸಾವಿರಕ್ಕೆ 7000 ರೂ. ಬೆಟ್ಟಿಂಗ್‌ ಹಣ ಕೊಡುವ ಕರಾರು ಮೇಲೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದರು.

ಬಂಧಿತರಿಂದ 72 ಸಾವಿರ ರೂ. ನಗದು, 6 ಮೊಬೈಲ್‌, ಟೀವಿ ಮತ್ತು ಸೆಟ್‌ ಟಾಪ್‌ ಬಾಕ್ಸ್‌ ಸೇರಿ 79,550 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಬುಕ್ಕಿಗಳಾದ ರಹೀನ ನಗರ ನಿವಾಸಿ ಹಸನ್‌ ಡೋಂಗ್ರಿ ರಜಾಕ್‌ ಸಾಬ್‌ ಜಮಖಂಡಿ, ಅಬ್ದುಲ್‌ ಪೀರಾ ರಜಾಕ್‌ಸಾಬ್‌ ಜಮಖಂಡಿ ಪರಾರಿಯಾಗಿದ್ದು, ಶೋಧ ನಡೆಸಿದ್ದಾರೆ. ಮತ್ತೂಂದು ಪ್ರಕರಣದಲ್ಲಿ ನಗರದ ಆದರ್ಶ ನಗರ ಬಸ್‌ ನಿಲ್ದಾಣದ ಬಳಿ ವಿಷ್ಣು ಹಳ್ಳದಮನಿ ಉರ್ಫ್‌ ಲೂಸ ಮಾದ ಅವರ ಇಸ್ತ್ರೀ ಅಂಗಡಿಯಲ್ಲಿ ಬೆಟ್ಟಿಂಗ್‌ ನಡೆಯುತ್ತಿದ್ದಾಗ ಗೋಲಗುಮ್ಮಟ ವೃತ್ತ ಸಿಪಿಐ ಸುನೀಲ ಕಾಂಬಳೆ ನೇತೃತ್ವದ ತಂಡ ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದೆ. ಬಂಧಿಧಿತರನ್ನು ವಿಷ್ಣು ಹಳ್ಳದಮನಿ ಉರ್ಫ್‌ ಲೂಸ್‌ ಮಾದ ಹಾಗೂ ಸಂಗಪ್ಪ ಪೀರಪ್ಪ ಹರವಾಳ ಎಂದು ಗುರುತಿಸಲಾಗಿದೆ.

ಪ್ರಕರಣದಲ್ಲಿ ಶಾಸ್ತ್ರೀ ನಗರ ನಿವಾಸಿಗಳಾದ ಭರತ ವಿಜಯ ಪವಾರ, ಸಚಿನ ಭರತ ಪವಾರ ಹಾಗೂ ರಂಗನಾಥ ಮುಂದಡಾ ಪರಾರಿಯಾಗಿದ್ದು, ಶೋಧಕಾರ್ಯ ನಡೆದಿದೆ. ಪ್ರಕರಣದಲ್ಲಿ ಬಂಧಿತರಿಂದ 25 ಸಾವಿರ ರೂ. ನಗದು ಸಹಿತ 4 ಮೊಬೈಲ್‌ ಮತ್ತು 1 ಬೈಕ್‌ ಸರಿ 45 ಸಾವಿರ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ .

ಧಾರವಾಡದಲ್ಲಿ ಮೂವರ ಬಂಧನ: ಕ್ರಿಕೆಟ್‌ ಬೆಟ್ಟಿಂಗ್‌ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಧಾರವಾಡದಲ್ಲಿ ಅಳ್ನಾವರದಲ್ಲಿ ಮೂವರನ್ನು ಬಂಧಿಸಿದ್ದಾರೆ. ಸ್ಥಳೀಯರಾದ ಇಸ್ಮಾಯತ್‌ ಚೂಡೀದಾರ್‌ (35), ಹಮಾಜ್‌ ತಹಶೀಲ್ದಾರ (24) ಹಾಗೂ ಸಯ್ಯದ್‌ ಕಿತ್ತೂರ (36) ಬಂಧಿತರು. ಆರೋಪಿಗಳಿಂದ 71,190 ರೂ. ನಗದು, 1 ಎಲ್‌ಇಡಿ ಟಿವಿ, 1ಸೆಟ್‌ಟಾಪ್‌ ಬಾಕ್ಸ್‌, 1 ಡಿಶ್‌, 8 ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ.

ಹುಬ್ಬಳ್ಳಿಯಲ್ಲಿ ಓರ್ವ ಸೆರೆ: ಕ್ರಿಕೆಟ್‌ ಬೆಟ್ಟಿಂಗ್‌ ಸಂಬಂಧ ಹುಬ್ಬಳ್ಳಿಯ ಗೋಕುಲ ರಸ್ತೆ ಗ್ರೀನ್‌ ಗಾರ್ಡನ್‌ನ ಮನೆಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ಬಂಧಿತನಾಗಿದ್ದು, 1 ಟಿವಿ, ಸೆಟ್‌ ಟಾಪ್‌ ಬಾಕ್ಸ್‌, 4 ಮೊಬೈಲ್‌, 17,100 ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.