Vinesh Phogat: “ಅಮ್ಮಾ ನನ್ನ ವಿರುದ್ಧ ಕುಸ್ತಿ ಗೆದ್ದಿದೆ..”; ನಿವೃತ್ತಿ ಘೋಷಿಸಿದ ಘೋಗಾಟ್

Team Udayavani, Aug 8, 2024, 8:07 AM IST

Vinesh Phogat: “ಅಮ್ಮಾ ನನ್ನ ವಿರುದ್ಧ ಕುಸ್ತಿ ಗೆದ್ದಿದೆ..”; ನಿವೃತ್ತಿ ಘೋಷಿಸಿದ ಘೋಗಾಟ್

ನವದೆಹಲಿ: ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್‌ ಫೋಗಾಟ್‌ (Vinesh Phogat) ಜೊತೆ ಇಡೀ ಕ್ರೀಡಾ ಲೋಕವೇ ನಿಂತಿದೆ. ಫೈನಲ್‌ ಪ್ರವೇಶಿಸಿ ಇತಿಹಾಸ ಬರೆಯಬೇಕಿದ್ದ ನಮ್ಮ ಭಾರತೀಯ ನಾರಿಯ ಕನಸು ನುಚ್ಚುನೂರಾಗಿದೆ.

ಅನರ್ಹಗೊಂಡದ್ದು ಯಾಕೆ?:

ಈ ಮೊದಲು 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದ ವಿನೇಶ್‌ ಈ ಬಾರಿ ಅವಕಾಶ ಸಿಗದ ಕಾರಣ 50 ಕೆಜಿ ವಿಭಾಗದಲ್ಲಿ ಸ್ಪರ್ಧೆಗೆ ಇಳಿದಿದ್ದರು. ಹೀಗಾಗಿ ಸ್ಪರ್ಧೆ ಆರಂಭವಾಗುವ ದಿನ ಬೆಳಿಗ್ಗೆ ನಡೆಸುವ ತೂಕ ಪರಿಶೀಲನೆಯಲ್ಲಿ ಸ್ಪರ್ಧಿ 50 ಅಥವಾ ಅದಕ್ಕಿಂತ ಕಡಿಮೆ ಭಾರ ಹೊಂದಿರಬೇಕು. ವಿನೇಶ್‌ ಅವರ ತೂಕ 50 ಕೆಜಿ, 100 ಗ್ರಾಂ ಇದ್ದ ಕಾರಣ ಅವರನ್ನು ಅನರ್ಹಗೊಳಿಸಲಾಯಿತು.

2.8 ಕೆಜಿ ತೂಕ ಇಳಿಸಲು ರಾತ್ರಿಯಿಡೀ ಸೈಕ್ಲಿಂಗ್‌, ಸ್ಕಿಪ್ಪಿಂಗ್‌, ರನ್ನಿಂಗ್‌ ಮಾಡಿದ ವಿನೇಶ್‌, ಒಂದೂ ತೊಟ್ಟು ನೀರು ಕೂಡ ಕುಡಿಯದೇ ಬೆವರು ಸುರಿಸಿದ್ದರು. ಆದರೂ 100 ಹೆಚ್ಚಿಗೆ ಇದ್ದ‌ ಕಾರಣ ಅವರನ್ನು ಅನರ್ಹಗೊಳಿಸಲಾಗಿದೆ.

ಇದರಿಂದ ಕುಗ್ಗಿಹೋಗಿರುವ ವಿನೇಶ್‌ ಫೋಗಾಟ್‌ ಕುಸ್ತಿ ಜಗತ್ತಿಗೆ ವಿದಾಯ ಹೇಳಿದ್ದಾರೆ. ತಾನು ಕುಸ್ತಿಗೆ ನಿವೃತ್ತಿ ಹೇಳುತ್ತಿದ್ದೇನೆ ಎಂದು ಫೋಗಾಟ್‌ ಭಾವನಾತ್ಮಕವಾಗಿ ಟ್ವೀಟ್‌ ಮಾಡಿದ್ದಾರೆ.

ಟ್ವೀಟ್‌ ನಲ್ಲಿ ಏನಿದೆ?: ಕುಸ್ತಿಯಲ್ಲಿ ಫೈನಲ್‌ ಪ್ರವೇಶಿಸಿ ಪದಕ ಖಚಿತಪಡಿಸಿದ್ದ ವಿನೇಶ್‌ ಅನರ್ಹಗೊಂಡ ಬಳಿಕ  ನಿರ್ಜಲೀಕರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅನರ್ಹಗೊಂಡು ಆಘಾತಕ್ಕೆ ಒಳಗಾಗಿರುವ ಅವರು, ಕುಸ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.

“‘ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಭಗ್ನವಾಯಿತು. ನನ್ನ ಧೈರ್ಯ ಛಿದ್ರವಾಗಿದೆ. ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ. ನಿಮ್ಮೆಲ್ಲರ ಬೆಂಬಲಕ್ಕೆ ನಾನು ಸದಾ ಋಣಿ ಆಗಿರುತ್ತೇನೆ” ಎಂದು ಭಾವನಾತ್ಮಕವಾಗಿ 29 ವರ್ಷದ ವಿನೇಶ್‌ ಕುಸ್ತಿಗೆ ವಿದಾಯ ಹೇಳಿದ್ದಾರೆ.

ಅನರ್ಹತೆ ಪ್ರಶ್ನಿಸಿ ಕ್ರೀಡಾ ನ್ಯಾಯಾಲಯಕ್ಕೆ ಮನವಿ

ಪ್ಯಾರಿಸ್‌: ಕುಸ್ತಿಯಲ್ಲಿ ಅನರ್ಹತೆಯನ್ನು ಪ್ರಶ್ನಿಸಿ ವಿನೇಶ್‌ ಫೋಗಾಟ್‌ ಅಂತಾರಾಷ್ಟ್ರೀಯ ಮಧ್ಯವರ್ತಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

100 ಗ್ರಾಂ ಹೆಚ್ಚಳ ಎಂಬ ಕಾರಣಕ್ಕೆ ಅನರ್ಹಗೊಳಿಸಲಾಗಿದೆ. ಹೀಗಾಗಿ ಜಂಟಿ ಬೆಳ್ಳಿ ಪದಕ ನೀಡಬೇಕು ಎಂದು ವಿನೇಶ್‌ ಫೋಗಾಟ್‌ ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Charmadi-Ghat

Highway Department: ಚಾರ್ಮಾಡಿ ಘಾಟಿ: ತಡೆಗೋಡೆ ದುರಸ್ತಿಗೆ ಕ್ರಮ

Gatti

Mangaluru: ತಿಗಳಾರಿ ಲಿಪಿಗೆ ಯುನಿಕೋಡ್‌ ಅನುಮೋದನೆ: ತಾರಾನಾಥ ಗಟ್ಟಿ

Children-Movie

Film Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ನಾಳೆ ತೆರೆಗೆ

Rahul Gandhi ಆಕಸ್ಮಿಕವಾಗಿ ಸಿಕ್ಕಿದರೆ ಓಡಿಹೋಗಲು ಆಗುತ್ತದೆಯೇ: ಪರಂ

Rahul Gandhi ಆಕಸ್ಮಿಕವಾಗಿ ಸಿಕ್ಕಿದರೆ ಓಡಿಹೋಗಲು ಆಗುತ್ತದೆಯೇ: ಪರಂ

Kaljiga

Film Release: ಸೆ.13ರಂದು ರಾಜ್ಯಾದ್ಯಂತ “ಕಲ್ಜಿಗ’ ಕನ್ನಡ ಚಲನಚಿತ್ರ ತೆರೆಗೆ

Arrest

Manipal: ಮಟ್ಕಾ ಜುಗಾರಿ: ಹಲವರು ವಶಕ್ಕೆ

CM-Siddu

Tax Discrimination: ಕೇಂದ್ರದ ತೆರಿಗೆ ತಾರತಮ್ಯ; 8 ರಾಜ್ಯದ ಸಿಎಂಗಳಿಗೆ ಸಿದ್ದು ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Hockey: ಭಾರತ ಸೆಮಿಫೈನಲ್‌ಗೆ, ಮಲೇಷ್ಯಾ ವಿರುದ್ಧ 8-1 ಜಯಭೇರಿ

Asian Hockey: ಭಾರತ ಸೆಮಿಫೈನಲ್‌ಗೆ, ಮಲೇಷ್ಯಾ ವಿರುದ್ಧ 8-1 ಜಯಭೇರಿ

Swimming: ರಾಷ್ಟ್ರೀಯ ಹಿರಿಯರ ಈಜು… ಅಗ್ರಸ್ಥಾನದಲ್ಲಿ ಕರ್ನಾಟಕ

Swimming: ರಾಷ್ಟ್ರೀಯ ಹಿರಿಯರ ಈಜು… ಅಗ್ರಸ್ಥಾನದಲ್ಲಿ ಕರ್ನಾಟಕ

Mangaluru: 77ನೇ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್‌ ಆರಂಭ

Mangaluru: 77ನೇ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್‌ ಆರಂಭ

Paralympics 2024; ಪ್ಯಾರಾ ಸಾಧಕರಿಗೆ ಪ್ರೀತಿಯ ಸ್ವಾಗತ; ಚಿನ್ನ ಗೆದ್ದವರಿಗೆ 75 ಲಕ್ಷ ರೂ.

Paralympics 2024; ಪ್ಯಾರಾ ಸಾಧಕರಿಗೆ ಪ್ರೀತಿಯ ಸ್ವಾಗತ; ಚಿನ್ನ ಗೆದ್ದವರಿಗೆ 75 ಲಕ್ಷ ರೂ.

Bajrang moved the High Court against the ban

Bajrang Punia: ನಿಷೇಧದ ವಿರುದ್ದ ಬಜರಂಗ್‌ ಹೈಕೋರ್ಟ್‌ ಮೊರೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Charmadi-Ghat

Highway Department: ಚಾರ್ಮಾಡಿ ಘಾಟಿ: ತಡೆಗೋಡೆ ದುರಸ್ತಿಗೆ ಕ್ರಮ

Gatti

Mangaluru: ತಿಗಳಾರಿ ಲಿಪಿಗೆ ಯುನಿಕೋಡ್‌ ಅನುಮೋದನೆ: ತಾರಾನಾಥ ಗಟ್ಟಿ

Children-Movie

Film Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ನಾಳೆ ತೆರೆಗೆ

Rahul Gandhi ಆಕಸ್ಮಿಕವಾಗಿ ಸಿಕ್ಕಿದರೆ ಓಡಿಹೋಗಲು ಆಗುತ್ತದೆಯೇ: ಪರಂ

Rahul Gandhi ಆಕಸ್ಮಿಕವಾಗಿ ಸಿಕ್ಕಿದರೆ ಓಡಿಹೋಗಲು ಆಗುತ್ತದೆಯೇ: ಪರಂ

Kaljiga

Film Release: ಸೆ.13ರಂದು ರಾಜ್ಯಾದ್ಯಂತ “ಕಲ್ಜಿಗ’ ಕನ್ನಡ ಚಲನಚಿತ್ರ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.