
ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿ: ಕೊಹ್ಲಿ,ಬುಮ್ರಾಗೆ ವಿಶ್ರಾಂತಿ
Team Udayavani, Jul 14, 2022, 3:08 PM IST

ನವದೆಹಲಿ : ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಗುರುವಾರ ಪ್ರಕಟಿಸಿದ್ದು, ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ,ಮತ್ತು ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.
ಜುಲೈ 29 ರಂದು ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ T20 ಸರಣಿ ಆರಂಭವಾಗಲಿದೆ.
ತೊಡೆಸಂದು ಗಾಯದಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಕಳೆದುಕೊಂಡಿದ್ದ, ಕೊಹ್ಲಿ ಎರಡನೇ ಪಂದ್ಯಕ್ಕೂ ಅನಿಶ್ಚಿತರಾಗಿದ್ದಾರೆ.ಇನ್ನೊಂದೆಡೆ ಕಳಪೆ ಫಾರ್ಮ್ ಕೂಡ ಅವರನ್ನು ಕಾಡುತ್ತಿದೆ.
ತಂಡ ಇಂತಿದೆ
ರೋಹಿತ್ ಶರ್ಮಾ (ನಾಯಕ), ಐ ಕಿಶನ್, ಕೆಎಲ್ ರಾಹುಲ್*, ಸೂರ್ಯಕುಮಾರ್ ಯಾದವ್, ಡಿ ಹೂಡಾ, ಎಸ್ ಅಯ್ಯರ್, ಡಿ ಕಾರ್ತಿಕ್, ಆರ್ ಪಂತ್, ಎಚ್ ಪಾಂಡ್ಯ, ಆರ್ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಆರ್.ಬಿಷ್ಣೋಯ್, ಕುಲದೀಪ್ ಯಾದವ್*, ಬಿ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
*ಕೆಎಲ್ ರಾಹುಲ್ ಮತ್ತು ಕುಲದೀಪ್ ಯಾದವ್ ಸೇರ್ಪಡೆ ಫಿಟ್‌ನೆಸ್‌ಗೆ ಒಳಪಟ್ಟಿರುತ್ತದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್