ನ್ಯೂಯಾರ್ಕ್ನಲ್ಲಿ ಗೆಳತಿ ಅನುಷ್ಕಾಜತೆ ವಿರಾಟ್ ಕೊಹ್ಲಿ ಸುತ್ತಾಟ
Team Udayavani, Jul 13, 2017, 7:52 AM IST
ನ್ಯೂಯಾರ್ಕ್: ವೆಸ್ಟ್ ಇಂಡೀಸ್ ಕ್ರಿಕೆಟ್ ಪ್ರವಾಸ ಮುಗಿಸಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಈಗ ರಜಾ
ಮಜಾ ದಲ್ಲಿದ್ದಾರೆ. ತಮ್ಮ ಗೆಳತಿ, ಬಾಲಿವುಡ್ ನಟಿ ಅನುಷ್ಕಾ ಶರ್ಮ ಜತೆ ಅಮೆರಿಕದ ನ್ಯೂಯಾರ್ಕ್ನಲ್ಲಿ ಸುತ್ತುತ್ತಿದ್ದಾರೆ.
ಕೊಹ್ಲಿ ಮತ್ತು ಅನುಷ್ಕಾ ಪ್ರೇಮಿಗಳಾಗಿದ್ದು, ಇಬ್ಬರು ಜತೆಜತೆಯಾಗಿ ಸುತ್ತಾ ಡುವುದು ಹೊಸದಲ್ಲ. ಈ ಹಿಂದೆಯೂ ಹಲವು ಬಾರಿ
ಈ ಜೋಡಿ ಆಸ್ಟ್ರೇಲಿಯಾ, ಅಮೆರಿಕ ಸೇರಿದಂತೆ ಹಲವು ಕಡೆ ಸುತ್ತಾಡಿ ಗಮನ ಸೆಳೆದಿತ್ತು.
ಏಕದಿನ ಶ್ರೇಯಾಂಕ: ಕೊಹ್ಲಿ ಈಗಲೂ ನಂ.1
ನವದೆಹಲಿ: ಹೊಸದಾಗಿ ಏಕದಿನ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದ್ದು, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಮಾಜಿ ನಾಯಕ ಎಂ.ಎಸ್.ಧೋನಿ 2 ಸ್ಥಾನ ಏರಿಕೆ ಕಾಣುವ ಮೂಲಕ 12ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಕೊಹ್ಲಿ 873 ಅಂಕವನ್ನು ಹೊಂದಿದ್ದು, ನಂ.1 ಸ್ಥಾನ ಕಾಯ್ದುಕೊಂಡರೆ, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್, ಇಂಗ್ಲೆಂಡ್ನ ಜೋ ರೂಟ್ ಕ್ರಮವಾಗಿ ನಂತರದ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಉಳಿದಂತೆ ಭಾರತದ ಬ್ಯಾಟ್ಸ್ಮನ್ಗಳಾದ ಧೋನಿ, ಶಿಖರ್ ಧವನ್, ರೋಹಿತ್ ಶರ್ಮ ಕ್ರಮವಾಗಿ 12, 13 ಮತ್ತು 15ನೇ
ಸ್ಥಾನ ಪಡೆದಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾದ ಜೋಸ್ ಹೇಜಲ್ವುಡ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
ಭುವನೇಶ್ವರ್ ಕುಮಾರ್ 13ನೇ ಸ್ಥಾನದಲ್ಲಿದ್ದಾರೆ. ತಂಡದ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ ನಂ.1ನೇ ಸ್ಥಾನ, ಆಸ್ಟ್ರೇಲಿಯಾ
ನಂ.2ನೇ ಸ್ಥಾನ, ಭಾರತ ನಂ.3ನೇ ಸ್ಥಾನ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ